ಬೆಂಗಳೂರು ದಕ್ಷಿಣ | ರೇವ್ ಪಾರ್ಟಿ ಮೇಲೆ ಪೊಲೀಸ್ ದಾಳಿ; 130 ಮಂದಿ ವಶಕ್ಕೆ

Date:

ಬೆಂಗಳೂರು ದಕ್ಷಿಣ ಜಿಲ್ಲೆಯ ದೇವಿಗೆರೆ ಕ್ರಾಸ್ ಬಳಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಸುಮಾರು 130 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆಯಲಾಗಿರುವ ಎಲ್ಲರೂ 20 ವರ್ಷ ವಯಸ್ಸು ದಾಟಿದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಗ್ಗಲೀಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ಅನಧಿಕೃತ ಹೋಮ್‌ಸ್ಟೇಯಲ್ಲಿ ‘ರೇವ್ ಪಾರ್ಟಿ’ ಆಯೋಜಿಸಲಾಗಿತ್ತು. ಪಾರ್ಟಿಯನ್ನು ಮಾದಕ ವಸ್ತುಗಳ ಸೇವನೆ ಮಾಡಲಾಗುತ್ತಿದೆ ಎಂಬ ಮಾಹಿತಿ ಬಂದಿತ್ತು. ಶನಿವಾರ ಮಂಜಾನೆ ಬೆಂಗಳೂರು ದಕ್ಷಿಣ ಎಸ್‌ಪಿ ಆರ್ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಪಾರ್ಟಿ ಆಯೋಜಕರು ಸೇರಿದಂತೆ ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆಯಲಾಗಿರುವ ಎಲ್ಲರನ್ನೂ ಮಾದಕ ವಸ್ತು ಸೇವಿಸಿದ್ದಾರೆಯೇ ಎಂಬುದನ್ನು ಪರಿಶೀಲಿಸಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಪಾರ್ಟಿ ನಡೆಯುತ್ತಿದ್ದ ಆಸ್ತಿ ಸುಹಾಸ್ ಗೌಡ ಎಂಬಾತನಿಗೆ ಸೇರಿದ್ದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...