ಬೆಂಗಳೂರು ಕಾಲ್ತುಳಿತ ದುರಂತ | ಹೈಕೋರ್ಟ್‌ಗೆ ವರದಿ ಸಲ್ಲಿಸಲು ಒಂದು ವಾರ ಕಾಲಾವಕಾಶ ಕೋರಿದ ಸರ್ಕಾರ

Date:

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಹೈಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ಒಂದು ವಾರ ಕಾಲಾವಕಾಶ ಕೇಳಿದೆ. ಪ್ರಕರಣ ತನಿಖೆ ನಡೆಯುತ್ತಿದ್ದು, ತನಿಖಾ ವರದಿ ಸಿದ್ದಪಡಿಸಲು ತಿಂಗಳ ಅವಧಿ ಬೇಕಾಗುತ್ತದೆ ಎಂದು ಸರ್ಕಾರ ಹೇಳಿಕೊಂಡಿದೆ.

ಜೂನ್ 4ರಂದು ಬೆಂಗಳೂರಿನ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ, ಚಿನ್ನಸ್ವಾಮಿ ಕ್ರೀಡಾಂಗಣದೊಳಗೆ ಪ್ರವೇಶಿಸಲು ಆರ್‌ಸಿಬಿ ಅಭಿಮಾನಿಗಳು ಯತ್ನಿಸುವಾಗ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಕಾಲ್ತುಳಿತ ದುರ್ಘಟನೆ ಸಂಭವಿಸಲು ಆರ್‌ಸಿಬಿ ತಂಡ-ಫ್ರಾಂಚೈಸಿಯ ಧಾವಂತ, ಸರ್ಕಾರದ ಆತುಕ, ಕೆಎಸ್‌ಸಿಎ-ಸರ್ಕಾರ-ಪೊಲೀಸ್‌ ನಡುವಿನ ಸಂವಹನ ಕೊರತೆಯೇ ಕಾರಣವೆಂದು ಆರೋಪಿಸಲಾಗಿದೆ. ದುರಂತ ಘಟನೆ ಕುರಿತು ಸಿಐಡಿ ತನಿಖೆಗೆ ಸರ್ಕಾರ ಆದೇಶಿಸಿದೆ. ಹಲವಾರು ಅಧಿಕಾರಿಗಳನ್ನು ಅಮಾನತು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ಸಂಬಂಧ ಹೈಕೋರ್ಟ್‌ ಕೂಡ ಸ್ವಯಂಪ್ರೇರಿತ ಪಿಐಎಲ್‌ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿದೆ. ಹೈಕೋರ್ಟ್‌ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು, “ಪ್ರಕರಣಕ್ಕೆ ಸಂಬಂಧಿಸಿತ ವರದಿಯನ್ನು ಇನ್ನೂ ಯಾಕೆ ಸಲ್ಲಿಸಿಲ್ಲ” ಎಂದು ಸರ್ಕಾರವನ್ನು ಪ್ರಶ್ನಿಸಿದೆ.

ಈ ಲೇಖನ ಓದಿದ್ದೀರಾ?: ಐಪಿಎಲ್‌ನಲ್ಲಿದೆ ಜನ ಮನಸ್ಥಿತಿಯ ಪ್ರತಿಬಿಂಬ: ಸಚಿನ್, ಧೋನಿ, ಕೊಹ್ಲಿ ಸ್ಟಾರ್‌ ಆಗಿದ್ದೂ ಹೀಗೆ…!

ಸರ್ಕಾರದ ಪರವಾಗಿ ಹಾಜರಿದ್ದ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, “ಸರ್ಕಾರವು ತನಿಖೆಗೆ ಆದೇಶ ನೀಡಿದೆ. ತನಿಖೆ ನಡೆಯುತ್ತಿದ್ದು, ವರದಿ ಸಲ್ಲಿಸಲು ಒಂದು ವಾರ (ಜೂನ್ 16ರವರೆಗೆ) ಕಾಲಾವಕಾಶ ನೀಡಬೇಕು” ಎಂದು ಮನವಿ ಮಾಡಿದ್ದಾರೆ.

ಅಡ್ವಕೇಟ್ ಜನರಲ್ ಮನವಿಗೆ ಪ್ರತಿಕ್ರಿಯಿಸಿದ ಪೀಠವು, “ಜೂನ್ 12ರೊಳಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಬೇಕು” ಎಂದು ತಾಕೀತು ಮಾಡಿದೆ. ವಿಚಾರಣೆಯಲ್ಲಿ ಜೂನ್ 12ಕ್ಕೆ ಮುಂದೂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...