ಬೆಂಗಳೂರು | ವಿದ್ಯಾರ್ಥಿಗಳಿಂದ ಅಂಬೇಡ್ಕರರಿಗೆ ಅಪಮಾನ; ಪ್ರಕರಣ ರದ್ದು ಮಾಡಿದ ಹೈಕೋರ್ಟ್

Date:

ಕಾಲೇಜಿನ ಕಾರ್ಯಕ್ರಮದಲ್ಲಿ ಪ್ರದರ್ಶನಗೊಂಡಿದ್ದ ನಾಟಕದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರರಿಗೆ ಅಪಮಾನ ಮಾಡಿದ್ದಾರೆಂದು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಬೆಂಗಳೂರಿನಲ್ಲಿರುವ ಜೈನ್ ಯೂನಿರ್ವಸಿಟಿಯ ಸೆಂಟರ್ ಫಾರ್ ಮ್ಯಾನೇಜ್ಮೆಂಟ್‌ ಕಾಲೇಜಿನಲ್ಲಿ ಕಳೆದ ವರ್ಷ ‘ಯೂತ್‌ ಫೆಸ್ಟ್‌’ ಆಯೋಜಿಸಲಾಗಿತ್ತು. ಈ ವೇಳೆ, ವಿದ್ಯಾರ್ಥಿಗಳು ಅಂಬೇಡ್ಕರ್‌ ಕುರಿತು ವಿಡಂಬನಾತ್ಮಕ ನಾಟಕ ಪ್ರದರ್ಶನ ಮಾಡಿದ್ದರು. ನಾಟಕದಲ್ಲಿ ‘ಬಿ.ಆರ್ ಅಂಬೇಡ್ಕರ್ ಅಲ್ಲ, ಬಿಯರ್ ಅಂಬೇಡ್ಕರ್. ಡೋಂಟ್ ಟಚ್ ಮಿ, ಟಚ್ ಮಿ’ ಎಂಬ ಹಾಡನ್ನು ಬಳಸಲಾಗಿತ್ತು. ಅಲ್ಲದೆ, ‘ನೀವು ಡಿ-ಲಿಟ್ ಆಗಿರುವಾಗ ದಲಿತರಾಗಿರಲು ಕಾರಣವೇನು?’ ಎಂಬ ಸಂಭಾಷಣೆಯೂ ಇತ್ತು.

ಅಂಬೇಡ್ಕರರ ಬಗ್ಗೆ ಬಳಸಲಾಗಿದ್ದ ಇಂತಹ ಪದಗಳು, ಹೇಳಿಕೆಗಳು ವಿರುದ್ಧ ಅಂಬೇಡ್ಕರ್ ವಾದಿ ಮತ್ತು ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಪೊಲೀಸ್‌ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು. ವಿವಾದ ಭುಗಿಲೆದ್ದ ಬಳಿಕ, ಕಾಲೇಜು ಆಡಳಿತವು ಕ್ಷಮೆಯಾಚಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ವಿಚಾರಣೆ ನಡೆಸಿರುವ ಹೈಕೋರ್ಟ್‌ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರ ಏಕಸದಸ್ಯ ಪೀಠ, “ವಿಡಂಬನಾತ್ಮಕ ನಾಟಕ ಪ್ರದರ್ಶಿಸಲು ಸಂವಿಧಾನದ ಆರ್ಟಿಕಲ್ 19ಅಡಿಯಲ್ಲಿ ಅವಕಾಶವಿದೆ. ನಾಟಕದಲ್ಲಿ ದಲಿತ ದೌರ್ಜನ್ಯ ಎಸಗುವ ಉದ್ದೇಶ ಇರಲಿಲ್ಲ ಎಂಬುದು ಕಂಡುಬಂದಿದೆ” ಎಂದು ಹೇಳಿದ್ದು, ಪ್ರಕರಣವನ್ನು ರದ್ದುಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...