ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ದೊರೆಯದೆ ರಸ್ತೆ ಅಪಘಾತಕ್ಕೀಡಾಗಿದ್ದ ಟೆಕ್ಕಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವರ್ತೂರು ನಿವಾಸಿ ಆನಂದ್ (35) ಮೃತ ದುರ್ದೈವಿ. ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಕೆಲಸ ಮಾಡುತ್ತಿದ್ದ ಆನಂದ್ ಅವರು ಬುಧವಾರ ರಾತ್ರಿ ರಸ್ತೆ ಅಪಘಾತಕ್ಕೀಡಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕಂಡ ಸಾರ್ವಜನಿಕರು ಆ್ಯಂಬುಲೆನ್ಸ್‌ಗೆ ಕರೆ ಮಾಡಿ, ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ವರದಿಯಾಗಿದೆ.
ಆದರೆ, ಆ್ಯಂಬುಲೆನ್ಸ್ ಜಕ್ಕೂರು ಏರೋ ಡ್ರಮ್ ರಾಷ್ಟ್ರೀಯ ಹೆದ್ದಾರಿಯಿಂದ ನ್ಯಾಯಾಂಗ ಬಡಾವಣೆಗೆ ಸಂಪರ್ಕಿಸುವ ರೇಲ್ವೆ ಕೆಳಸೇತುವೆ ಮೂಲಕ ತೆರಳಲಾಗದೆ, ಪರದಾಟ ನಡೆಸಿತ್ತು. ಆ ನಂತರ, ಕಾರಿಗೆ ವರ್ಗಾಯಿಸಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಗೆ ಹೋಗದೇ ಇದಿದ್ದರಿಂದ, ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಸಿಗದೇ ಟೆಕ್ಕಿ ಮೃತಪಟ್ಟಿದ್ದಾರೆ.
ಆನಂದ್ ಅವರು ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




