ಬೆಂಗಳೂರು | ಪತ್ನಿಗೆ ವಿಡಿಯೋ ಕರೆ ಮಾಡಲು ಪೊಲೀಸ್‌ ಸಮವಸ್ತ್ರ ಧರಿಸಿದ ಕಳ್ಳ; ಪೊಲೀಸ್ ಅಧಿಕಾರಿ ಅಮಾನತು

Date:

ಪೊಲೀಸ್‌ ಕಸ್ಟಡಿಯಲ್ಲಿದ್ದ ಕಳ್ಳನೊಬ್ಬ ತನ್ನ ಪತ್ನಿಯೊಂದಿಗೆ ವಿಡಿಯೋ ಕರೆಯಲ್ಲಿ ಮಾತನಾಡಲು ಪೊಲೀಸ್‌ ಸಮವಸ್ತ್ರವನ್ನು ಧರಿಸಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳ್ಳನಿಗೆ ಪೊಲೀಸ್ ಸಮವಸ್ತ್ರ ಕೊಟ್ಟ ಆರೋಪದ ಮೇಲೆ ಪೊಲೀಸ್‌ ಕಾನ್‌ಸ್ಟೇಬಲ್ ಒಬ್ಬರನ್ನು ಅಮಾನತು ಮಾಡಲಾಗಿದೆ.

ಬೆಂಗಳೂರಿನ ಗೋವಿಂದಪುರ ಪೊಲೀಸ್‌ ಠಾಣೆಯಲ್ಲಿ 2024ರಲ್ಲಿ ಘಟನೆ ನಡೆದಿತ್ತು. ಆದರೆ, ಇತ್ತೀಚೆಗೆ ಬೇರೊಂದು ಪ್ರಕರಣದ ತನಿಖೆ ನಡೆಸುವಾದ, ಈ ಪ್ರಕರಣ ಬೆಳಕಿಗೆ ಬಂದಿದೆ.

2024ರ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೆಬಲ್ ಆಗಿದ್ದ ಎಚ್‌ಆರ್ ಸೋನಾರ್ ಅವರನ್ನು ಅಮಾನತು ಮಾಡಲಾಗಿದೆ. ಅವರು ಸಲೀಮ್ ಶೇಖ್ ಎಂಬಾತನಿಗೆ ಸಮವಸ್ತ್ರ ನೀಡಿದ್ದರು ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

50ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿರುವ ಸಲೀಮ್‌ನನ್ನು 2024ರಲ್ಲಿ ನಡೆದ ಕಳ್ಳತನಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದರು. ಕದ್ದ ಆಭರಣಗಳು, ಸೀರೆಗಳು ಹಾಗೂ ಇತರ ಬೆಲೆಬಾಳುವ ವಸ್ತುಗಳನ್ನು ಮರಳಿ ಪಡೆಯಲು ಆತನನ್ನು ಹೋಟೆಲ್‌ವೊಂದರಲ್ಲಿ ಇರಿಸಿದ್ದರು. ಆತ ತಪ್ಪಿಸಿಕೊಳ್ಳದಂತೆ ನಿಗಾ ಇಡಲು ಸೋನಾರ್ ಮತ್ತು ಇನ್ನೊಬ್ಬ ಕಾನ್‌ಸ್ಟೇಬಲ್‌ನನ್ನು ನಿಯೋಜಿಸಲಾಗಿತ್ತು.

ಈ ವೇಳೆ, ಪೇದೆಗಳಿಬ್ಬರು ಶಾಪಿಂಗ್‌ ಮಾಡಲು ತೆರಳಿದ್ದಾಗ, ಹೋಟೆಲ್‌ ರೂಮ್‌ನಲ್ಲಿದ್ದ ಕಳ್ಳತನದ ಆರೋಪಿ ಸಲೀಮ್‌ ಅಲ್ಲಿದ್ದ ಸೋನಾರ್ ಅವರ ಸಮವಸ್ತ್ರವನ್ನು ಧರಿಸಿ, ತನ್ನ ಪತ್ನಿಗೆ ವಿಡಿಯೋ ಕರೆ ಮಾಡಿದ್ದನು ಎಂದು ವರದಿಯಾಗಿದೆ.

“ಸಲೀಂ ತನ್ನ ಹೆಂಡತಿಯ ಎದುರು ತಾನೊಬ್ಬ ಪೊಲೀಸ್‌ ಎಂಬಂತೆ ತೋರಿಸಿಕೊಳ್ಳಲು ಬಯಸಿದ್ದನು. ಅದಕ್ಕಾಗಿ, ರೂಮ್‌ನಲ್ಲಿದ್ದ ಸೋನಾರ್‌ ಅವರ ಸಮವಸ್ತ್ರವನ್ನು ಧರಿಸಿದ್ದನು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವುದಾಗಿ ತಿಳಿದುಬಂದಿದೆ.

ಈ ಪ್ರಕರಣ ಆ ಸಂದರ್ಭದಲ್ಲಿ ಬೆಳಕಿಗೆ ಬಂದಿರಲಿಲ್ಲ. ಆದರೆ, 2025ರ ಮೇ ತಿಂಗಳಿನಲ್ಲಿ ಇಂದಿರಾನಗರದಲ್ಲಿ ನಡೆದ ಮತ್ತೊಂದು ಕಳ್ಳತನ ಘಟನೆ ವೇಳೆ ಸಲೀಂ ಸಿಕ್ಕಿಬಿದ್ದಿದ್ದನು. ಆತನನ್ನು ತನಿಖೆಗೆ ಒಳಪಡಿಸಿದಾಗ, ಆತ ಪೊಲೀಸ್‌ ಸಮವಸ್ತ್ರದಲ್ಲಿರುವ ಫೋಟೋಗಳು ಆತನ ಫೀನ್‌ನಲ್ಲಿ ದೊರೆತಿವೆ. ಹೀಗಾಗಿ, ಹಳೆಯ ಘಟನೆ ಬೆಳಕಿಗೆ ಬಂದಿದೆ.

ಇದೀಗ, ನಿರ್ಲಕ್ಷ್ಯ ಆರೋಪದ ಮೇಲೆ ಸೋನಾರ್ ಅವರನ್ನು ಅಮಾನತು ಮಾಡಿ ಉಪ ಪೊಲೀಸ್ ಆಯುಕ್ತ (ಪೂರ್ವ) ಬಿ ದೇವರಾಜ್ ಆದೇಶಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...