ಬೆಂಗಳೂರು | ರಸ್ತೆಗುಂಡಿಗೆ ಇಳಿದು ಪಲ್ಟಿಯಾದ ವಾಹನ; ವಿಡಿಯೋ ವೈರಲ್

Date:

ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ಸಮಸ್ಯೆಗೆ ಮುಕ್ತಿಯೇ ಇಲ್ಲದಂತಾಗಿದೆ. ರಸ್ತೆಗುಂಡಿಗಳಿಂದಾಗಿ ನೂರಾರು ಅಪಘಾತಗಳು ಸಂಭವಿಸಿದ್ದು, ಹಲವರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಆದರೂ, ರಸ್ತೆಗುಂಡಿ ಸಮಸ್ಯೆಯನ್ನು ಪರಿಹರಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ. ಇದೀಗ, ರಸ್ತೆಗುಂಡಿಗೆ ಇಳಿದು ಸರಕು ಸಾಗಿಸುವ ಆಟೋವೊಂದು ಪಲ್ಟಿಯಾಗಿರುವ ಘಟನೆ ನಡೆದಿದೆ.

ಬೆಂಗಳುರಿನ ನಾಗವಾರ ವೃತ್ತದ ಬಳಿ ಸರಕು ಸಾಗಿಸುವ ಆಟೋ ಪಲ್ಟಿಯಾಗಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಬಿಬಿಎಂಪಿ ವಿರುದ್ಧ ಹಲವಾರು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆಗಳು ಪ್ರಯಾಣಿಕರಿಗೆ ಭಯ ಉಂಟುಮಾಡುವಂತಿವೆ. ರಸ್ತೆಗುಂಡಿಗಳಿಂದಾಗಿ ಅಪಘಾತ-ಪೀಡಿತ ವಲಯಗಳು ಹೆಚ್ಚುತ್ತಿವೆ. ನಾಗವಾರ ಜಂಕ್ಷನ್‌ನ ರಸ್ತೆಯಲ್ಲಿ ದೊಡ್ಡ ಹೊಂಡವಿದ್ದು, ಸರಕು ಆಟೋ ಪಲ್ಟಿಯಾಗಿದೆ. ಇಂತಹ ಹಲವಾರು ಘಟನೆಗಳು ನಡೆಯುತ್ತಿದ್ದರೂ, ಬಿಬಿಎಂಪಿ ನಿದ್ರೆಯ ಗುಂಗಿನಲ್ಲಿದೆ ಎಂದು ಹಲವರು ಕಿಡಿಕಾರಿದ್ದರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...