ಬೆಂಗಳೂರು | ವ್ಹೀಲಿಂಗ್ ಹಾವಳಿ – ರಾತ್ರಿ ವೇಳೆ ‘ಫ್ಲೈ ಓವರ್‌’ಗಳು ಬಂದ್‌; ಜನರಿಗೆ ಶಿಕ್ಷೆ?

Date:

ಬೆಂಗಳೂರಿನಲ್ಲಿ ಪುಂಡರ ವ್ಹೀಲಿಂಗ್ ಹಾವಳಿ ಹೆಚ್ಚಾಗಿದ್ದು, ಜನರಿಗೆ ಸಂಚಾರ ಅಡಚಣೆಯ ತಲೆನೋವಾಗಿದ್ದರೆ, ಪೊಲೀಸರಿಗೆ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕುವುದು ಸವಾಲಾಗಿ ಪರಿಣಮಿಸಿದೆ. ಎಲ್ಲೆಡೆ ಫ್ಲೈಓವರ್‌ಗಳಲ್ಲಿ ವ್ಹೀಲಿಂಗ್‌ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ವ್ಹೀಲಿಂಗ್‌ ಹಾವಳಿಯನ್ನು ತಡೆಯಲು ರಾತ್ರಿ ವೇಳೆ ‘ಮೇಲುರಸ್ತೆ’ಗಳಲ್ಲಿ (ಪ್ಲೈಓವರ್‌) ವಾಹನ ಸಂಚಾರವನ್ನು ನಿರ್ಬಂಧಿಸಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ವ್ಹೀಲಿಂಗ್‌ ಹಾವಳಿಯನ್ನು ತಡೆಯುವ ಉದ್ದೇಶದಿಂದ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನಗರದ ಎಲ್ಲ ಮೇಲುರಸ್ತೆಗಳನ್ನೂ ನಿರ್ಬಂಧಿಸಲಾಗುತ್ತದೆ. ಫ್ಲೈಓವರ್‌ಗಳ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ, ವಾಹನ ಸಂಚಾರವನ್ನು ನಿರ್ಬಂಧಿಸಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಆದರೆ, ಪೊಲೀಸರು ಇನ್ನೂ ಅಧಿಕೃತ ಆದೇಶ ಅಥವಾ ನಿರ್ಧಾರದ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ಫ್ಲೈಓವರ್‌ಗಳಲ್ಲಿ ಸಂಚಾರ ನಿರ್ಬಂಧಿಸುವುದು ರಾತ್ರಿ ವೇಳೆ ಸಂಚರಿಸುವ ಪ್ರಯಾಣಿಕರು ಮತ್ತು ವಾಹನ ಸವಾರರಿಗೆ ಅಡಚಣೆಯಾಗಲಿದ್ದು, ಮೇಲುರಸ್ತೆಗಳನ್ನು ಬಿಟ್ಟು, ಅನಗತ್ಯವಾಗಿ ಸಿಗ್ನಲ್‌ಗಳಲ್ಲಿ ನಿಂತು-ದಾಟುವ ಶಿಕ್ಷೆಯಂತಾಗಲಿದೆ ಎಂಬ ಅಭಿಪ್ರಾಯಗಳೂ ವ್ಯಕ್ತವಾಗಿವೆ. ಅಲ್ಲದೆ, “ರಾತ್ರಿ ವೇಳೆ ಮಾತ್ರವೇ ಪುಂಡರು ವ್ಹೀಲಿಂಗ್‌ ಮಾಡುತ್ತಾರೆ ಎಂದೇನೂ ಇಲ್ಲ. ಮಧ್ಯಾಹ್ನ, ಸಂಜೆಯ ಸಮಯದಲ್ಲೇ ವ್ಹೀಲಿಂಗ್‌ ಹಾವಳಿ ಹೆಚ್ಚಿರುತ್ತದೆ. ಹೀಗಾಗಿ, ರಾತ್ರಿ 11 ಗಂಟೆ ಬಳಿಕ ಫ್ಲೈಓವರ್‌ಗಳಲ್ಲಿ ನಿರ್ಬಂಧ ಹೇರುವುದರಿಂದ ಪ್ರಯೋಜನವಿಲ್ಲ” ಎಂದು ಈದಿನ.ಕಾಮ್‌ ಜೊತೆ ಮಾತನಾಡಿದ ಬೆಂಗಳೂರು ನಿವಾಸಿ ನಾಗೇಶ್‌ ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ, ವ್ಹೀಲಿಂಗ್ ಮಾಡುವ ಪುಂಡರ ಸಂಖ್ಯೆ ಹೆಚ್ಚಾಗಿದೆ. ಕೆಲವು ಪುಂಡರು ಮಾರಕಾಸ್ತ್ರಗಳನ್ನು ಹಿಡುದುಕೊಂಡು ದಾಂಧಲೆ ನಡೆಸುತ್ತಾ, ವ್ಹೀಲಿಂಗ್ ಮಾಡುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದಿವೆ. ಆಕ್ಷೇಪಗಳು ವ್ಯಕ್ತವಾಗಿವೆ. ಹಲವಾರು ನೆಟ್ಟಿಗರು ಬೆಂಗಳೂರು ಸಂಚಾರ ಪೊಲೀಸರನ್ನು ಟ್ಯಾಗ್‌ ಮಾಡಿ, ವ್ಹೀಲಿಂಗ್ ವಿಚಾರವಾಗಿ ದೂರುಗಳನ್ನೂ ದಾಖಲಿಸಿದ್ದಾರೆ. ಈ ಹೀಗಾಗಿ, ಫ್ಲೈಓವರ್‌ಗಳಲ್ಲಿ ಸಂಚಾರ ನಿರ್ಬಂಧಿಸುವ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.

“ನಿಯಮ ಉಲ್ಲಂಘನೆಗಳ ಕುರಿತು ಸಾರ್ವಜನಿಕರು ಈ ಹಿಂದೆ ‘ಪಬ್ಲಿಕ್ ಐ’ (PublicEye) ಆ್ಯಪ್ ಬಳಸುತ್ತಿದ್ದರು. ಆದರೆ, ಈಗ ಅದನ್ನು ಬೆಂಗಳೂರು ಪೊಲೀಸರು ಮೇಲ್ವಿಚಾರಣೆ ಮಾಡಲಾಗುತ್ತಿಲ್ಲ. ಹೀಗಾಗಿ, ಹೊಸದಾಗಿ ಅಭಿವೃದ್ಧಿಪಡಿಸಲಾದ BTP-ASTraM ಆ್ಯಪ್ಅನ್ನು ತರಲಾಗಿದೆ. ಸಾರ್ವಜನಿಕರು ಆ ಆ್ಯಪ್ ಬಳಸಿ, ದೂರುಗಳನ್ನು ದಾಖಲಿಸಬಹುದು” ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...