ಬೆಂಗಳೂರಿನಲ್ಲಿ ಮಹಿಳೆಯ ಭೀಕರ ಕೊಲೆ: ಶವ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟ ದುಷ್ಕರ್ಮಿಗಳು

Date:

ಬೆಂಗಳೂರು ನಗರದಲ್ಲಿ ಮಹಿಳೆಯೊಬ್ಬರ ಭೀಕರ ಹತ್ಯೆ ನಡೆದಿದೆ. ಮಹಿಳೆಯನ್ನು ಕೊಲೆ ಮಾಡಿ ಶವವನ್ನು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದೆ.

ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣ ದಾಖಲಾಗಿದೆ. ನಿನ್ನೆ‌ ತಡರಾತ್ರಿ ಆಟೋದಲ್ಲಿ ಮಹಿಳೆ ಶವ ತಂದಿದ್ದ ದುಷ್ಕರ್ಮಿಗಳು, ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿಟ್ಟು ಪರಾರಿ ಆಗಿದ್ದಾರೆ.
30 ರಿಂದ 35 ವರ್ಷದ ಮಹಿಳೆ ಗುರುತು ಪತ್ತೆಗಾಗಿ ಪೊಲೀಸರಿಂದ ತನಿಖೆ ನಡೆದಿದ್ದು, ಅಪರಿಚಿತ ಮಹಿಳೆ ಶವ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಆರೋಪಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಹರಂ ನಿಷೇಧ; ರಾಯಚೂರು ಜಿಲ್ಲಾಧಿಕಾರಿ ಕೊಟ್ಟ ಸಂದೇಶವೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿಎಸ್‌ಐ ಚಿಕಿತ್ಸೆ ಫಲಿಸದೆ ಸಾವು

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿಎಸ್​ಐ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬೆಂಗಳೂರಿನ ತಲಘಟ್ಟಪುರ ಪಿಎಸ್ ಮೆಹಬೂಬ್ ಗುಡ್ಡಳ್ಳಿ(40) ಮೃತರು. ಜೂ.24ರ ರಾತ್ರಿ ಗಾಂಜಾ ಕೇಸ್ ಆರೋಪಿಗಳನ್ನು ಬಂಧಿಸಿ ಅತ್ತಿಬೆಲೆಯಿಂದ ಬೆಂಗಳೂರು ಕಡೆ ಕರೆತರುತ್ತಿದ್ದಾಗ ಟೈರ್ ಕಳಚಿ ನಡುರಸ್ತೆಯಲ್ಲಿ ಪಿಎಸ್​ಐ ಕಾರು ನಿಂತಿತ್ತು. ಪರಿಶೀಲನೆ ನಡೆಸಲು ಮೆಹಬೂಬ್ ಕಾರಿನಿಂದ ಕೆಳಗಿಳಿದಿದ್ದು, ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಮೆಹಬೂಬ್ ಗುಡ್ಡಳ್ಳಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೊಡಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಗಾಂಜಾ ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...