ಬೆಂಗಳೂರು | ಬಸ್‌ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಕಾಮುಕರ ಬಂಧನ

Date:

ಬೆಂಗಳೂರಿನ ಕೆ.ಆರ್‌ ಮಾರುಕಟ್ಟೆಯಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಇತ್ತೀಚೆಗೆ ನಡೆದಿತ್ತು. ಪ್ರಕರಣದಲ್ಲಿ ಇಬ್ಬರು ಕಾಮುಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ

ಜನವರಿ 19ರ ಭಾನುವಾರ ರಾತ್ರಿ ಕೆ.ಆರ್‌ ಮಾರ್ಕೆಟ್‌ನ ಗೋಡೌನ್‌ ರಸ್ತೆಯಲ್ಲಿ ತಮಿಳುನಾಡು ಮೂಲದ ಸಂತ್ರಸ್ತ ಮಹಿಳೆ ಬಸ್‌ಗಾಗಿ ಕಾಯುತ್ತಿದ್ದರು. ಈ ವೇಳೆ, ಆಕೆಯನ್ನು ಎಳೆದೊಯ್ದ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಅಲ್ಲದೆ, ಮಹಿಳೆಯ ಬಳಿಯಿದ್ದ ಚಿನ್ನದ ತಾಳಿ, ಓಲೆ ಹಾಗೂ ಇತರ ಒಡೆವೆಗಳನ್ನು ದೋಚಿ, ಪರಾರಿಯಾಗಿದ್ದರು.

ಸಂತ್ರಸ್ತ ಮಹಿಲೆ ಕೇಂದ್ರ ವಿಭಾಗದ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಗಣೇಶ್ ಮತ್ತು ಶರವಣ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳು ಕೆ.ಆರ್.ಮಾರುಕಟ್ಟೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ರಾತ್ರಿ ವೇಳೆ ಮಾರುಕಟ್ಟೆಯ ಅಂಗಡಿ ಬದಿಗಳಲ್ಲಿ ಮಲುಗುತ್ತಿದ್ದರು ಎಂದು ಹೇಳಲಾಗಿದೆ.

“ಸಿಸಿಟಿವಿ ದೃಶ್ಯಾವಳಿ ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ವಿಶ್ಲೇಷಿಸಿ ಆರೋಪಿಗಳನ್ನು ಗುರುತಿಸಿದ್ದೇವೆ. ಮಂಗಳವಾರ ಇಬ್ಬರನ್ನು ಬಂಧಿಸಿದ್ದೇವೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ” ಎಂದು ಪೊಲಿಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...