ಬೆಂಗಳೂರು | ಮಹಿಳೆ ಮೇಲೆ ಅತ್ಯಾಚಾರ ಎಸಗಿ, ಫ್ರಿಡ್ಜ್‌-ವಾಷಿಂಗ್‌ ಮಷಿನ್ ಹೊತ್ತೊಯ್ದ ಕಾಮುಕರು

Date:

ಮಹಿಳೆಯ ಮೇಲೆ ಆಕೆಯ ಸ್ನೇಹಿತ ಸೇರಿದಂತೆ ಮೂವರು ಕಾಮುಕರು ಅತ್ಯಾಚಾರ ಎಸಗಿದ್ದು, ಆಕೆಯ ಬಳಿ ಹಣವನ್ನೂ ದೋಚಿ, ಫೋನ್, ಫ್ರಿಡ್ಜ್‌ ಹಾಗೂ ವಾಷಿಂಗ್‌ ಮಷಿನ್‌ಗಳನ್ನು ಹೊತ್ತೋಯ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸಾಯಿ ಲೇಔಟ್‌ನ ಸಂತ್ರಸ್ತ ಮಹಿಳೆಯು ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನ್ನ ಮನೆಗೆ ಸ್ನೇಹಿತ ಮತ್ತು ಇತರ ಇಬ್ಬರು ಕಾಮುಕರು ನುಗ್ಗಿ, ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣವನ್ನು ತಮ್ಮ ಬೆಟ್ಟಿಂಗ್ ಆ್ಯಪ್‌ ಖಾತೆಗೆ ವರ್ಗಾಯಿಸಿಕೊಂಡರು. ಮಾತ್ರವಲ್ಲದೆ, ತನ್ನ ಮೊಬೈಲ್‌ಅನ್ನು ಕಸಿದುಕೊಂಡು, ಮನೆಯಲ್ಲಿದ್ದ ಫ್ರಿಡ್ಜ್‌ ಮತ್ತು ವಾಷಿಂಗ್ ಮಷಿನ್‌ಗಳನ್ನು ಹೊತ್ತೋಯ್ದಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆ ಎರಡು ದಿನಗಳ ಹಿಂದೆ ನಡೆದಿದೆ. ಮಹಿಳೆಯ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಾಗಿದೆ. ಆದಾಗ್ಯೂ, ಆರೋಪಿಗಳನ್ನು ಇನ್ನೂ ಬಂಧಿಸಲಾಗಿದೆ. ಪ್ರಕರಣದ ಬಗ್ಗೆ ತನಿಕೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...