ಬೆಂಗಳೂರು | 40 ವರ್ಷದ ಮದ್ಯವ್ಯಸನಿ ಮಗನಿಗೆ ಬೆಂಕಿ ಹಚ್ಚಿದ ತಾಯಿ

Date:

  • ಪತ್ನಿಯಿಂದ ಬೇರ್ಪಟ್ಟ ಬಳಿಕ ತಾಯಿಯೊಂದಿಗೆ ವಾಸವಿದ್ದ ಚಾಂದ್ ಪಾಷಾ
  • ಸೋಫಿಯಾ ವಿರುದ್ಧ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲು

ಮಗನ ನಿತ್ಯ ಕುಡಿತದ ಚಟಕ್ಕೆ ಬೇಸತ್ತು 60 ವರ್ಷದ ತಾಯಿಯೊಬ್ಬರು 40 ವರ್ಷದ ಮಗನ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಚಾಂದ್ ಪಾಷಾ(40) ಎಂದು ಗುರುತಿಸಲಾಗಿದೆ. ಈತನ ತಾಯಿ ಸೋಫಿಯಾ ಬಿ.ಪಾಷಾ (60) ಕೊಲೆ ಮಾಡಿದ್ದಾಳೆ ಎನ್ನಲಾಗಿದೆ.

ಇವರು ನಗರದ ಚಿಕ್ಕಬಾಣಾವರದ ಜನತಾ ಕಾಲೋನಿಯಲ್ಲಿ ನೆಲೆಸಿದ್ದರು. ಚಾಂದ್‌ ಪಾಷಾ 16 ವರ್ಷಗಳ ಹಿಂದೆ ತನ್ನ ಪತ್ನಿಯಿಂದ ಬೇರ್ಪಟ್ಟ ಬಳಿಕ ತಾಯಿಯೊಂದಿಗೆ ವಾಸವಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಪಾಷಾ ಕುಡಿದ ಮತ್ತಿನಲ್ಲಿ ಮನೆಗೆ ಬಂದು ಬಾಗಿಲಲ್ಲಿ ಕುಳಿತಿದ್ದರು. ಆತನ ದಿನನಿತ್ಯದ ಕುಡಿತದ ಚಟದಿಂದ ತಾಯಿ ಸೋಫಿಯಾ ಕೋಪಗೊಂಡು ಸೀಮೆ ಎಣ್ಣೆಯಯನ್ನು ಆತನ ಮೇಲೆ ಸುರಿದು ಬೆಂಕಿ ಹಚ್ಚಿದ್ದಾರೆ. ಈ ಘಟನೆ ಬಳಿಕ ಪಾಷಾ ಸ್ಥಳದಲ್ಲೇ ನಿಧನ ಹೊಂದಿದ್ದಾರೆ.

“ಪಾಷಾ ಪ್ರತಿದಿನ ಕುಡಿದು ಮನೆಗೆ ಬಂದು ತಾಯಿಯೊಂದಿಗೆ ಜಗಳವಾಡುತ್ತಿದ್ದನು. ಸೋಫಿಯಾ ಮಗನ ವರ್ತನೆಯಿಂದ ಬೇಸತ್ತು ಆತನಿಗೆ ಪಾಠ ಕಲಿಸಲು ಈ ರೀತಿ ಮಾಡಿದ್ದಾಳೆ ಎಂದು ತಿಳಿದುಬಂದಿದೆ. ಈ ಪ್ರಕರಣದ ಬಗ್ಗೆ ತನಿಖೆ ಕೈಗೊಂಡಿದ್ದೇವೆ” ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಡ್ರಗ್ಸ್ ಮಾರಾಟ ಮಾಡುತ್ತಿದ್ದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಬಂಧನ

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸೋಫಿಯಾ ವಿರುದ್ಧ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...