ಬೆಂಗಳೂರು | ಮಹಿಳೆಗೆ ಖಾಸಗಿ ಅಂಗ ತೋರಿಸಿ ವಿಕೃತವಾಗಿ ವರ್ತಿಸಿದ ಯುವಕ; ಹಲವರ ಮೇಲೂ ಹಲ್ಲೆ

Date:

ವಿಕೃತ ಮನಸ್ಸಿನ ಯುವಕನೊಬ್ಬ ಮಹಿಳೆಗೆ ತನ್ನ ಖಾಸಗಿ ಅಂಗ ತೋರಿಸಿ, ವಿಕೃತವಾಗಿ ವರ್ತಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆತನ ವಿಕೃತಿಯನ್ನು ಪ್ರಶ್ನಿಸಿದವರ ಮೇಲೂ ಹಲ್ಲೆ ಎಸಗಿದ್ದಾನೆ ಎಂದು ವರದಿಯಾಗಿದೆ.

ವಿಕೃತ ಆರೋಪಿಯನ್ನು ಕಾರ್ತಿಕ್ ಎಂದು ಗುರುತಿಸಲಾಗಿದೆ. ಆತನ ವಿರುದ್ಧ ಶಿವಾಜಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತನನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಏಪ್ರಿಲ್ 13ರಂದು ಘಟನೆ ನಡೆದಿದೆ ಎಂದು ಹೇಳಲಾಗಿದೆ. ವಸತಿ ಸಮುಚ್ಛಯದಲ್ಲಿ ವಾಸವಾಗಿದ್ದ ಆರೋಪಿ ತನ್ನ ನೆರೆಹೊರೆಯ ಮಹಿಳೆಯ ಎದುರು ವಿಕೃತವಾಗಿ ವರ್ತಿಸಿದ್ದಾನೆ. ಮಹಿಳೆ ತನ್ನ ಮನೆಯ ಬಳಿ ಇದ್ದಾಗ, ಎದುರು ಬಂದ ಆರೋಪಿ ತನ್ನ ಖಾಸಗಿ ಅಂಗ ತೋರಿಸಿ, ವಿಚಿತ್ರವಾಗಿ ಸನ್ಹೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆತನ ವಿಕೃತಿಯನ್ನು ಮಹಿಳೆಯ ಪತಿ ಮತ್ತು ಇತರರು ಪ್ರಶ್ನಿಸಿದ್ದಾರೆ. ಇದರಿಂದ ಕುಪಿತಗೊಂಡ ಆರೋಪಿ ಮಹಿಳೆಯ ಪತಿ ಸೇರಿ ಏಳು ಮಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ತನ್ನ ತಾಯಿಯ ಮೇಲೂ ಹಲ್ಲೆಗೈದಿದ್ದಾನೆ. ಬಳಿಕ, ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಹಲ್ಲೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಹಿಳೆಯು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಾಗಿ ಶೋಧ ನಡೆಯುತ್ತಿದೆ. ಆರೋಪಿ ಈ ಹಿಂದೆಯೇ ಹಲವು ಮಹಿಳೆಯರೊಂದಿಗೆ ಇದೇ ರೀತಿ ಅನುಚಿತವಾಗಿ ವರ್ತಿಸಿರುವುದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...