ವಿದ್ಯುತ್ ದರ ಹೆಚ್ಚಳಕ್ಕೆ ಸ್ಪಷ್ಟನೆ ನೀಡಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ

Date:

  • ಮೇ 12ರಂದು ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 70 ಪೈಸೆ ಏರಿಕೆ ಮಾಡಿದ ಕೆಇಆರ್‌ಸಿ
  • ಬೆಸ್ಕಾಂ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ 59 ಪೈಸೆ ಯಷ್ಟು ವಿಧಿಸಲು ಕೆಇಆರ್‌ಸಿ ಅನುಮತಿ ನೀಡಿದೆ

ರಾಜ್ಯದಲ್ಲಿ ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ತನ್ನ ಘೋಷಿತ ಐದು ಗ್ಯಾರಂಟಿಗಳಲ್ಲಿ ಒಂದಾದ 200 ಯೂನಿಟ್‌ ಉಚಿತ ವಿದ್ಯುತ್ ಅನ್ನು ಕೆಲವು ಷರತ್ತುಗಳೊಂದಿಗೆ ಜುಲೈಗೆ ಅನ್ವಯವಾಗುವಂತೆ ಜಾರಿಗೆ ತಂದಿದೆ. ಈ ಬಾರಿಯ ವಿದ್ಯುತ್ ಕಳೆದ ಬಾರಿಗಿಂತ ಹೆಚ್ಚಿಗೆ ಬಂದಿರುವುದು ಜನರಲ್ಲಿ ಗೊಂದಲ ಸೃಷ್ಟಿ ಮಾಡಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಮೇ 12 ರಂದು ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 70 ಪೈಸೆ ಏರಿಕೆ ಮಾಡಿದೆ. ಈ ಹಿನ್ನೆಲೆ ಬೆಸ್ಕಾಂ ಜೂನ್ ತಿಂಗಳಲ್ಲಿ ನೀಡುವ ಮೇ ತಿಂಗಳ ವಿದ್ಯುತ್ ಬಳಕೆಯ ಬಿಲ್‌ನಲ್ಲಿ ಪರಿಷ್ಕೃತ ವಿದ್ಯುತ್ ಶುಲ್ಕವನ್ನು ನಮೂದಿಸಿದೆ. ವಿದ್ಯುತ್ ದರ ಪರಿಷ್ಕರಣೆ ಆದೇಶ ಏಪ್ರಿಲ್‌ನಿಂದ ಪೂರ್ವನ್ವಯವಾಗುವುದರಿಂದ ಬಿಲ್‌ನಲ್ಲಿ ಏಪ್ರಿಲ್ ತಿಂಗಳ ಹಿಂಬಾಕಿಯನ್ನು ನೀಡಲಾಗಿದೆ.

ಕೆಇಆರ್‌ಸಿ ಆದೇಶದ ಪ್ರಕಾರ, ಎರಡು ಶ್ರೇಣಿಗಳಲ್ಲಿ ವಿದ್ಯುತ್ ಶುಲ್ಕವನ್ನು ಸಂಗ್ರಹಿಸಲಾಗುತ್ತಿದೆ. ಗ್ರಾಹಕರು ಬಳಸುವ ಮೊದಲ 100 ಯೂನಿಟ್‌ ವಿದ್ಯುತ್‌ಗೆ ಪ್ರತಿ ಯೂನಿಟ್‌ ದರ ₹4.75 ವಿಧಿಸಲಾಗಿದೆ. 100 ಯೂನಿಟ್ ಮೀರಿದರೆ ಬಳಸಿದ ಅಷ್ಟೂ ಯೂನಿಟ್‌ಗೆ ಎರಡನೇ ಶ್ರೇಣಿ ದರ ಪ್ರತಿ ಯೂನಿಟ್‌ಗೆ ₹7 ಅನ್ವಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೊದಲು ಮೂರು ಶ್ರೇಣಿ ದರಗಳಲ್ಲಿ ಸಂಗ್ರಹಿಲಾಗುತ್ತಿತ್ತು. (ಮೊದಲ 50 ಯೂನಿಟ್‌ಗೆ ₹4.15, ನಂತರದ 50 ಯೂನಿಟ್‌ಗೆ ₹5.6 ಹಾಗೂ 100 ಯೂನಿಟ್ ಮೀರಿದರೆ ₹7.15 ಸಂಗ್ರಹಿಸಲಾಗುತ್ತಿತ್ತು) ಇದೀಗ ಎರಡು ಶ್ರೇಣಿ ದರಗಳಲ್ಲಿ ಸಂಗ್ರಹಿಸಲು ಕೆಇಆರ್‌ಸಿ ಮೇ 12 ರಂದು ಹೊರಡಿಸಿರುವ ಆದೇಶದಲ್ಲಿ ಸ್ಪಷ್ಟಪಡಿಸಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ನಿಗದಿತ ಶುಲ್ಕ ಪರಿಷ್ಕರಣೆ

ಕೆಇಆರ್‌ಸಿ ದರ ಪರಿಷ್ಕರಣೆ ಆದೇಶದಲ್ಲಿ ನಿಗದಿತ ಶುಲ್ಕದಲ್ಲಿ 1 ರಿಂದ 50 ಕಿಲೋ ವ್ಯಾಟ್‌ ವಿದ್ಯುತ್‌ ಮಂಜೂರಾತಿ ಲೋಡ್‌ಗೆ ₹110 ಮತ್ತು 50 ಕೆವಿಗೆ ಮೇಲ್ಪಟ್ಟ ವಿದ್ಯುತ್‌ ಮುಂಜೂರಾತಿ ಲೋಡ್‌ಗೆ ₹210 ಬರಲಿದೆ.

ಕೆಇಆರ್‌ಸಿ ದರ ಪರಿಷ್ಕರಣೆ ನೀತಿ  

ಕೆಇಆರ್‌ಸಿ ದರ ನಿಯಂತ್ರಣ ಅಧಿಸೂಚನೆ 2006ರ ಪ್ರಕಾರ ಎಲ್ಲ ಎಸ್ಕಾಂಗಳೂ ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ವಿದ್ಯುತ್ ದರ ಪರಿಷ್ಕರಣೆಗೆ ಕೆಇಆರ್‌ಸಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಿ ಎಸ್ಕಾಂಗಳ ಮನವಿಯನ್ನು ಪರಿಗಣಿಸಿ ಕೆಇಆರ್‌ಸಿ ಪ್ರತಿ ವರ್ಷ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ದರ ಪರಿಷ್ಕರಣೆ ಆದೇಶವನ್ನು ನೀಡುತ್ತದೆ. ಇದು ಕೆಇಆರ್‌ಸಿಯ ಸಾಮಾನ್ಯ ನಡವಳಿಯಾಗಿದ್ದು, ಎಸ್ಕಾಂಗಳು ದರ ಪರಿಷ್ಕಣೆಗೆ ಅರ್ಜಿ ಸಲ್ಲಿಸದಿದ್ದ ಪಕ್ಷದಲ್ಲಿ ಕೆಇಆರ್‌ಸಿ ಸ್ವಯಂಪ್ರೇರಿತವಾಗಿ ವಿದ್ಯುತ್ ದರ ಏರಿಕೆ ಆದೇಶ ನೀಡಲು ಕಾನೂನಿನಲ್ಲಿ ಅವಕಾಶವಿದೆ.

ಈ ವರ್ಷದ ಮಾರ್ಚ್/ಏಪ್ರಿಲ್ ನಲ್ಲಿ ಜಾರಿಗೆ ಬರಬೇಕಿದ್ದ ದರ ಪರಿಷ್ಕರಣೆ ಆದೇಶವನ್ನು ಮಾರ್ಚ್ 29, 2023ರಂದು ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದ ಹಿನ್ನೆಲೆಯಲ್ಲಿ ಕೆಇಆರ್‌ಸಿ ತಡೆ ಹಿಡಿದಿತ್ತು, ಚುನಾವಣೆ ಮುಗಿದ ತಕ್ಷಣ, ಮೇ 12ರಂದು ದರ ಪರಿಷ್ಕರಣೆ ಮಾಡಿ ಏಪ್ರಿಲ್‌ನಿಂದ ಪೂರ್ವನ್ವಯವಾಗುವಂತೆ ಜಾರಿಗೊಳಿಸಿ ಕೆಇಆರ್‌ಸಿ ಆದೇಶ ನೀಡಿತ್ತು.

2022ರ ನವೆಂಬರ್‌ನಲ್ಲಿ ವಿದ್ಯುತ್ ದರ ಪರಿಷ್ಕರಣೆಗೆ ನೀಡಿದ್ದ ಮನವಿಯನ್ನು ಪುರಸ್ಕರಿಸಿ ಏಪ್ರಿಲ್ ತಿಂಗಳಿಂದ ಅನ್ವಯವಾಗುವಂತೆ ಪ್ರತಿ ಯೂನಿಟ್ ಗೆ 70 ಪೈಸೆ ಯಷ್ಟು ಹೆಚ್ಚಳ ಮಾಡಿದ ಮೊತ್ತವನ್ನು ಜೂನ್ ತಿಂಗಳಲ್ಲಿ ಸಂಗ್ರಹಿಸಲಾಗುತ್ತಿದೆ ಎಂದು ಬೆಸ್ಕಾಂ ಎಂಡಿ ಹೇಳಿದ್ದಾರೆ.

ವಿದ್ಯುತ್ ದರ ಪರಿಷ್ಕರಣೆಯನ್ನು ನವೆಂಬರ್ 4, 2020 ರಂದು ಪ್ರತಿ ಯೂನಿಟ್ ಗೆ 40 ಪೈಸೆ, ಜೂನ್ 6, 2021ರಂದು ಪ್ರತಿ ಯೂನಿಟ್ ಗೆ 30 ಪೈಸೆ ಹಾಗೂ ಏಪ್ರಿಲ್ 4, 2022ರಂದು ಪ್ರತಿ ಯೂನಿಟ್‌ಗೆ 35 ಪೈಸೆಗಳಷ್ಟು ಹೆಚ್ಚಳ ಮಾಡಿ ಕೆಇಆರ್‌ಸಿ ಆದೇಶ ಹೊರಡಿಸಿತ್ತು.

ಈ ಸುದ್ದಿ ಓದಿದ್ದೀರಾ? 5 ತಿಂಗಳಿನಲ್ಲಿ 55 ಬಲಿ ಪಡೆದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ

ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕ

ಕಾಲಕಾಲಕ್ಕೆ ಕೆಇಆರ್‌ಸಿ ಜಾರಿಗೊಳಿಸುವ ವಿದ್ಯುತ್ ದರ ಪರಿಷ್ಕರಣೆಗೂ ಮತ್ತು ಎಸ್ಕಾಂಗಳು ಜನರೇಟರ್ ಗಳಿಂದ ಖರೀದಿಸುವ ವಿದ್ಯುತ್ ಮೇಲಿನ ಇಂಧನ ವೆಚ್ಚದಲ್ಲಿನ ಬೆಲೆಯಲ್ಲಿ ವ್ಯತ್ಯಾಸ ಉಂಟಾಗುವುದಿರಂದ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕವನ್ನು ವಿಧಿಸಲು ಕೆಇಆರ್‌ಸಿ ಎಸ್ಕಾಂಗಳಿಗೆ ಅನುಮತಿ ನೀಡುತ್ತದೆ.

ಕೇಂದ್ರ ಸರ್ಕಾರ 2005ರ ವಿದ್ಯುಚ್ಚಕ್ತಿ ನಿಯಮಗಳಿಗೆ ಡಿಸೆಂಬರ್ 29, 2002ರಲ್ಲಿ ತಿದ್ದುಪಡಿ ತಂದು ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚವನ್ನು ಸಮಯಕ್ಕೆ ಸರಿಯಾಗಿ ಸಂಗ್ರಹಿಸಲು ಸೂಚಿಸಿತ್ತು.

ಈ ತಿದ್ದುಪಡಿ ಅನ್ವಯ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚವನ್ನು ಪ್ರತಿ ತಿಂಗಳು ಗ್ರಾಹಕರಿಂದ ಸಂಗ್ರಹಿಸಲು ಕೆಇಆರ್‌ಸಿ ಫೆಬ್ರವರಿ 23, 2023ರಂದು ಅಧಿಸೂಚನೆ ಹೊರಡಿಸಿತ್ತು.

ಹಾಗಾಗಿ, ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚವನ್ನು ಬೆಸ್ಕಾಂ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ 59 ಪೈಸೆ ಯಷ್ಟು ವಿಧಿಸಲು ಕೆಇಆರ್‌ಸಿ ಅನುಮತಿ ನೀಡಿದ್ದು, ಈ ಮೊತ್ತವನ್ನು ಜೂನ್ ತಿಂಗಳಲ್ಲಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ ಎಂದು ಬೆಸ್ಕಾಂ ಎಂಡಿ ತಿಳಿಸಿದ್ದಾರೆ.  

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...