ಮದ್ಯ ಕುಡಿಸಿ ಅತ್ಯಾಚಾರವೆಸಗಿದ ಬಿಜೆಪಿ ಮುಖಂಡ; ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಆರೋಪಿ

Date:

ಮದುವೆಗೆ ಸಾಲ ಕೊಡುವುದಾಗಿ ಯುವತಿಯನ್ನು ಫ್ಲ್ಯಾಟ್‌ಗೆ ಕರೆದೊಯ್ದು ಮದ್ಯ ಕುಡಿಸಿ ಆಕೆಯ ಮೇಲೆ ಬಿಜೆಪಿ ಮುಖಂಡನೊಬ್ಬ ಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

26 ವರ್ಷದ ಯುವತಿ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ಮುಖಂಡ ಜಿಮ್ ಸೋಮ ಅಲಿಯಾಸ್ ಸೋಮಶೇಖರ್ ಮೇಲೆ ಅಶೋಕನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತ ಯುವತಿಗೆ ಆಕೆಯ ಸ್ನೇಹಿತೆ ಮೂಲಕ ಸೋಮಶೇಖರ್ ಪರಿಚಯವಾಗಿತ್ತು. ಕಳೆದ ವರ್ಷ ಯುವತಿಗೆ ಮದುವೆ ನಿಶ್ಚಯವಾಗಿತ್ತು. ಈ ಸಮಯದಲ್ಲಿ ಯುವತಿ ಮದುವೆಗಾಗಿ ಸೋಮಶೇಖರ್ ಬಳಿ ಸುಮಾರು 6 ಲಕ್ಷ ಹಣದ ಸಹಾಯ ಕೇಳಿದ್ದರು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹಣ ಕೊಡುವುದಾಗಿ ಸಂತ್ರಸ್ತೆಯನ್ನು ಪಿಜಿಯಿಂದ ಲ್ಯಾಂಗ್ ಫೋರ್ಡ್ ರಸ್ತೆಯ ತನ್ನ ಫ್ಲಾಟ್‌ಗೆ ಕರೆದೊಯ್ದು ಇಚ್ಚೆಗೆ ವಿರುದ್ಧವಾಗಿ ಮದ್ಯಕುಡಿಸಿ ಅತ್ಯಾಚಾರವೆಸಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾದಾರ ಚೆನ್ನಯ್ಯ ಸ್ವಾಮೀಜಿ ಹೇಳಿಕೆ ಅಪಾಯಕಾರಿ

ಈ ವಿಚಾರ ಹೊರಗಡೆ ಹೇಳಿದರೆ ಪ್ರಾಣ ಹಾಗೂ ಮಾನ ಹರಾಜು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ.

ಘಟನೆ ನಡೆದು ಮೂರು ತಿಂಗಳ ಬಳಿಕ ಸಂತ್ರಸ್ತೆ ಅಶೋಕನಗರ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಸೋಮಶೇಖರ್ 2018ರಲ್ಲಿ ಸಕಲೇಶಪುರ ವಿಧಾನಸಭೆ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಫರ್ಧಿಸಿ ಸೋಲು ಅನುಭವಿಸಿದ್ದ. ಪ್ರಕರಣ ದಾಖಲಾಗುತ್ತಿದ್ದಂತೆ ಸೋಮಶೇಖರ್ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...