50 ಮೆಟ್ರೋ ನಿಲ್ದಾಣಗಳಲ್ಲಿ ಒಳಾಂಗಣ ಜಾಹೀರಾತಿಗಾಗಿ ಟೆಂಡರ್ ಕರೆದ ಬಿಎಂಆರ್‌ಸಿಎಲ್

Date:

  • ಶುಲ್ಕ ವಿಧಿಸಬಹುದಾದ 70,000 ಚದರ ಅಡಿ ಜಾಗವನ್ನು ನೀಡುತ್ತಿರುವ ನಿಗಮ
  • ಕಳೆದ 15-20 ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ 50,000 ಏರಿಕೆ ಕಂಡಿದೆ

50 ಮೆಟ್ರೋ ನಿಲ್ದಾಣಗಳಲ್ಲಿ ಒಳಾಂಗಣ ಜಾಹೀರಾತಿಗಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಟೆಂಡರ್‌ ಆಹ್ವಾನಿಸಿದೆ.

ಜಾಹೀರಾತುಗಳನ್ನು ಪ್ರದರ್ಶಿಸಲು ಶುಲ್ಕ ವಿಧಿಸಬಹುದಾದ ಸುಮಾರು 70,000 ಚದರ ಅಡಿ ಜಾಗವನ್ನು ನೀಡುತ್ತಿದೆ. ಆದರೆ, ಟೆಂಡರ್ ದಾಖಲೆ ಪ್ರಕಾರ, ತನ್ನ ಪ್ರಚಾರಕ್ಕಾಗಿ ಒಟ್ಟು ಡಿಜಿಟಲ್ ಜಾಹೀರಾತು ಪ್ರದೇಶದ 5% ಅನ್ನು ಮಾತ್ರ ಪಡೆದುಕೊಳ್ಳಲು ಅವಕಾಶ ನೀಡಲಾಗಿತ್ತು. ನಿಲ್ದಾಣದ ಜಾಗಗಳ ಸಾಮರ್ಥ್ಯವನ್ನು ನಗದೀಕರಿಸಲು ಜಾಹೀರಾತುದಾರರು ಬೇಡಿಕೆ ಇಟ್ಟ ಬಳಿಕ ಹೊಸ ನಿರ್ಧಾರಕ್ಕೆ ಬರಲಾಗಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

“ಆಯ್ದ ನಿಲ್ದಾಣಗಳ ಒಳಭಾಗದಲ್ಲಿ ಮೆಟ್ಟಿಲುಗಳು, ಲಿಫ್ಟ್‌ಗಳು, ಎಸ್ಕಲೇಟರ್‌ಗಳು, ಫ್ರಿಸ್ಕಿಂಗ್ ಪ್ಯಾನೆಲ್‌ಗಳು ಇತ್ಯಾದಿಗಳನ್ನು ಜಾಹೀರಾತು ಪ್ರಕಟಿಸಲು ನೀಡಬಹುದು. ಗುತ್ತಿಗೆ ಪಡೆಯುವವರು ಬಿಎಂಆರ್‌ಸಿಎಲ್‌ನ ಅನುಮೋದನೆಯೊಂದಿಗೆ ಜಾಹೀರಾತು ಜಾಗವನ್ನು ಗುರುತಿಸಲು ಅವಕಾಶ ನೀಡಲಾಗುವುದು. ಒಳಾಂಗಣ ಜಾಹೀರಾತಿನ ಮೂಲಕ ನಿಗಮವು ₹30 ರಿಂದ 35 ಕೋಟಿ ಗಳಿಸುವ ನಿರೀಕ್ಷೆಯಿದೆ” ಎಂದು ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಇಂದಿರಾ ಕ್ಯಾಂಟೀನ್‌ನಲ್ಲಿ ಇನ್ನುಮುಂದೆ ಊಟದ ಜೊತೆಗೆ ಮೊಟ್ಟೆ ನೀಡಲು ಚಿಂತನೆ

“ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಪ್ರತಿ ದಿನ 6.3 ಲಕ್ಷ ಪ್ರಯಾಣಿಕರು ಮೆಟ್ರೊದಲ್ಲಿ ಪ್ರಯಾಣಿಸುತ್ತಿದ್ದರು. ಇದೀಗ ಗರಿಷ್ಠ ಮಟ್ಟದಲ್ಲಿದೆ. ಇದು ಕೋವಿಡ್ ಪೂರ್ವದ ಮಟ್ಟವನ್ನು ದಾಟಿದೆ. ಕಳೆದ 15-20 ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ 50,000 ಏರಿಕೆ ಕಂಡಿದೆ. ಇದೇ ರೀತಿ ಮುಂದುವರಿದರೆ ಪ್ರಸಕ್ತ ಹಣಕಾಸು ವರ್ಷದಲ್ಲಿಯೂ ನಮ್ಮ ಸಂಸ್ಥೆ ಲಾಭ ಗಳಿಸಬಹುದು” ಎಂದರು.

“2022-23ರ ಹಣಕಾಸು ಗಳಿಕೆ ಮತ್ತು ವೆಚ್ಚಗಳ ಕುರಿತು ಇತ್ತೀಚೆಗೆ ನಡೆದ ಸಭೆಯಲ್ಲಿ ಸಂಸ್ಥೆಯು ಕಾರ್ಯಾಚರಣೆಯ ಲಾಭವನ್ನು ಗಳಿಸಿದೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳಿಗೆ ತಿಳಿಸಲಾಯಿತು. ಇದು ನಮಗೆ ಬಹಳ ಒಳ್ಳೆಯ ಸುದ್ದಿ. ಸ್ವಲ್ಪ ಸಮಯದ ನಂತರ ಅಂಕಿಅಂಶಗಳನ್ನು ಬಹಿರಂಗಪಡಿಸಲಾಗುವುದು” ಎಂದು ಪರ್ವೇಜ್ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...