ದರ ಏರಿಕೆಯಿಂದ ನಿತ್ಯ 1 ಲಕ್ಷ ಪ್ರಯಾಣಿಕರನ್ನು ಕಳೆದುಕೊಂಡ ನಮ್ಮ ಮೆಟ್ರೋ

Date:

ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳದಿಂದ ಪ್ರಯಾಣಿಕರ ಸಂಖ್ಯೆ ಮೇಲೆ ನೇರ ಪರಿಣಾಮ ಉಂಟಾಗಿದೆ. ಕೇವಲ ಒಂದು ತಿಂಗಳಲ್ಲಿ ಪ್ರಯಾಣಿಕ ಸಂಖ್ಯೆ 25 ಲಕ್ಷಕ್ಕೂ ಅಧಿಕ ಇಳಿಕೆಯಾಗಿದೆ. ಬಿಎಂಆರ್‌ಸಿಎಲ್‌ ಅಂಕಿಅಂಶಗಳ ಪ್ರಕಾರ ಪ್ರತಿನಿತ್ಯವು ಒಂದು ಲಕ್ಷ ಪ್ರಯಾಣಿಕರು ಕಡಿಮೆಯಾಗಿದ್ದಾರೆ. ಇದೇ ವೇಳೆ ಬಿಎಂಟಿಸಿಯಲ್ಲಿ ಸರಾಸರಿ 1 ಲಕ್ಷ ಜನರು ಹೆಚ್ಚಾಗಿದ್ದಾರೆ.

ನಮ್ಮ ಮೆಟ್ರೋದಲ್ಲಿ 2024 ಡಿಸೆಂಬರ್‌ ಹಾಗೂ 2025 ಜನವರಿಯಲ್ಲಿ ನಿತ್ಯ 9 ಲಕ್ಷ ಮಂದಿ ಪ್ರಯಾಣಿಸುತ್ತಿದ್ದರು. ಸೋಮವಾರ ಹಾಗೂ ಶುಕ್ರವಾರ ಈ ಸಂಖ್ಯೆ 10 ಲಕ್ಷ ದಾಟುತ್ತಿತ್ತು. ಇನ್ನು ಮಾಸಿಕ ಪ್ರಯಾಣಿಕರ ಸಂಖ್ಯೆ ನೋಡುವುದಾದರೆ, 2025 ಜನವರಿಯಲ್ಲಿ ಬರೋಬ್ಬರಿ 2.5 ಕೋಟಿ ಮಂದಿ ಪ್ರಯಾಣಿಸಿದ್ದರು. ನಮ್ಮ ಮೆಟ್ರೋದ ಒಟ್ಟಾರೆ ಪ್ರಯಾಣಿಕರ ಸಂಖ್ಯೆ ಜನವರಿಯಲ್ಲಿ 2.5 ಕೋಟಿ ಇದ್ದರೆ, ಫೆಬ್ರವರಿಯಲ್ಲಿ 2.09 ಕೋಟಿಗೆ ಇಳಿಕೆಯಾಗಿದೆ.

ಬಿಎಂಟಿಸಿ ಆಯ್ಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೆಟ್ರೋ ದರವು ಕೆಲ ಪ್ರಯಾಣಿಕರಿಗೆ ಶೇ 60 ರಿಂದ 80 ರಷ್ಟು ಹೆಚ್ಚಾಗಿದೆ. ದರ ಏರಿಕೆಗೂ ಮುನ್ನ ಹೋಲಿಸಿದರೆ ದುಪ್ಪಟ್ಟು ದರ ನೀಡಬೇಕಿದೆ. ಈ ಕಾರಣದಿಂದ ಪ್ರಯಾಣಿಕರು ಪರ್ಯಾಯ ಆಯ್ಕೆ ಮಾಡಿಕೊಂಡಿದ್ದಾರೆ. ಮಹಿಳೆಯರಿಗೆ ಉಚಿತ ಬಸ್‌ ಸೌಲಭ್ಯ ಇದ್ದರೂ ಬಸ್‌ಗೆ ಹೋಲಿಸಿದರೆ ಮೆಟ್ರೋದಲ್ಲಿ ಸಂಚಾರ ದಟ್ಟಣೆಯಿಲ್ಲದೆ ವೇಗವಾಗಿ ಪ್ರಯಾಣ ಮಾಡಬಹುದು ಎಂದು ಮಹಿಳೆಯರ ಒಂದು ವರ್ಗ ಮೆಟ್ರೋದಲ್ಲಿ ಸಂಚರಿಸುತ್ತಿದ್ದರು. ಆದರೆ ದುಪ್ಪಟ್ಟು ಹಣ ವೆಚ್ಚವಾಗುವ ಕಾರಣದಿಂದ ಕಚೇರಿ ಹಾಗೂ ಕೆಲಸಕಾರ್ಯಗಳಿಗೆ ಉಚಿತವಾಗಿ ದೊರಕುವ ಬಿಎಂಟಿಸಿಯನ್ನು ಅವಲಂಬಿಸಿದ್ದಾರೆ.

ಸಂಚಾರ ದಟ್ಟಣೆ ಮತ್ತಷ್ಟು ಹೆಚ್ಚಳ

ಇನ್ನು ಒಂದಿಷ್ಟು ಮಂದಿ ಮೆಟ್ರೋ ದರ ಏರಿಕೆಯಿಂದ ನಿತ್ಯದ ಪ್ರಯಾಣಕ್ಕೆ ತಮ್ಮ ತಮ್ಮ ಖಾಸಗಿ ವಾಹನಗಳಾದ ಬೈಕ್‌ ಹಾಗೂ ಕಾರುಗಳನ್ನು ಅವಲಂಬಿಸಿದ್ದಾರೆ. ಇದು ನೇರವಾಗಿ ನಗರದ ವಾಹನ ಸಂಚಾರ ದಟ್ಟಣೆ ಮತ್ತಷ್ಟು ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದು ಒಂದು ತಿಂಗಳಿಂದ ವಾಹನಗಳ ಸಂಖ್ಯೆ ಗಣನೀಯವಾಗಿ ಏರಿಕೆಗೊಂಡಿದೆ. ಮೆಟ್ರೋ ಪ್ರಯಾಣಿಕರಲ್ಲಿ ನಿತ್ಯ ಕಡಿಮೆಯಾಗುವ ಒಂದು ಲಕ್ಷ ಪ್ರಯಾಣಿಕರಲ್ಲಿ ಸರಿಸುಮಾರು 50 ಸಾವಿರ ಮಂದಿ ಬೈಕ್‌ ಅಥವಾ ಕಾರುಗಳ ಮೂಲಕ ಸಂಚರಿಸುತ್ತಿದ್ದಾರೆ. ಇದು  ಪ್ರತಿ ನಗರದಲ್ಲೂ ಸಂಚಾರ ದಟ್ಟಣೆ ಹೆಚ್ಚಳಕ್ಕೆ ಕಾರಣವಾಗಿದೆ.

ನಿತ್ಯ ಸುಮಾರು 8.5 ಲಕ್ಷ ಪ್ರಯಾಣಿಕರು ಓಡಾಡುತ್ತಿದ್ದ ಮೆಟ್ರೋ ರೈಲಿನಲ್ಲಿ ಇದೀಗ 7.5 ಲಕ್ಷ ಮಂದಿ ಪ್ರಯಾಣಿಕರು ಮಾತ್ರ ಓಡಾಡುತ್ತಿದ್ದಾರೆ. ಅಂದರೆ ಸುಮಾರು 1 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಮೆಟ್ರೋ ತೊರೆದಿದ್ದಾರೆ. ದರ ಏರಿಕೆ ಬಳಿಕ ಮೆಟ್ರೋ ರೈಲು ಪ್ರಯಾಣಿಕರ ಸಂಖ್ಯೆಯಲ್ಲಿ ಶೇ. 25 ರಷ್ಟು ಕುಸಿತ ಕಂಡುಬಂದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳಾ ದಿನ ಕೇವಲ ಆಚರಣೆ ಮಾತ್ರವಲ್ಲ ಹಿರಿಮೆ

ಕಳೆದ ಫೆಬ್ರವರಿ 5 ರಂದು ದರ ಏರಿಕೆಗೂ ಮುನ್ನ ನಮ್ಮ ಮೆಟ್ರೋದಲ್ಲಿ 8,67, 660 ಮಂದಿ ಪ್ರಯಾಣಿಕರು ಪ್ರಯಾಣಿಸಿದ್ದರು. ದರ ಏರಿಕೆ ಬಳಿಕ ಅಂದರೆ ಫೆಬ್ರವರಿ 12 ಬುಧವಾರದಂದು 7,62,811 ಮಂದಿ ಪ್ರಯಾಣಿಕರ ದಾಖಲಾಗಿದೆ. ಅಂದರೆ 1,04,749 ಪ್ರಯಾಣಿಕರ ಸಂಖ್ಯೆ ಕುಸಿದಿದೆ. ಮೆಟ್ರೋ ಪ್ರಯಾಣಿಕರಿಂದ ನಿತ್ಯ ಬಿಎಂಆರ್‌ಸಿಎಲ್‌ಗೆ 2 ರಿಂದ 2.5 ಕೋಟಿ ರೂ ಸಂಗ್ರಹವಾಗುತ್ತಿತ್ತು.

ಮೆಟ್ರೋ ಪ್ರಯಾಣ ದರ ಏರಿಕೆ ಫೆ.9ರಿಂದ ಅನ್ವಯವಾಗಿತ್ತು. ದರ ಏರಿಕೆಯ ಮೊದಲಿನ ಸೋಮವಾರಗಳಿಗೆ ಹೋಲಿಸಿದರೆ, ಫೆ.10 ರಂದು(ಸೋಮವಾರ) ಮೆಟ್ರೋದಲ್ಲಿ ಪ್ರಯಣಿಸಿದವರ ಸಂಖ್ಯೆ ಕಡಿಮೆಯಾಗಿತ್ತು. ಫೆ.3ರಂದು 8.7ಲಕ್ಷ ಜನ ಪ್ರಯಾಣಿಸಿದ್ದರು, ಅದೇ ಫೆ.10ರಂದು 8.2 ಲಕ್ಷ ಜನ ಪ್ರಯಾಣಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ

ವ್ಯತ್ಯಾಸವಾಗದ ದರ

ನಮ್ಮ ಮೆಟ್ರೋ ದರ ಏರಿಕೆಯಿಂದ ಪ್ರಯಾಣಿಕರಿಂದ ಹಾಗೂ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ನಂತರ ಎಚ್ಚೆತ್ತುಕೊಂಡಿದ್ದ ಬಿಎಂಆರ್​​ಸಿಎಲ್, ಎಲ್ಲೆಲ್ಲಿ ಟಿಕೆಟ್ ದರ ಹೆಚ್ಚಾಗಿದೆಯೋ ಅಲ್ಲೆಲ್ಲ ಕಡಿಮೆ ಮಾಡುವುದಾಗಿ ಭರವಸೆ ನೀಡಿತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಟಿಕೆಟ್ ದರ ಕಡಿಮೆಯಾಗಿಲ್ಲ. ಈ ಕಾರಣ ಕೂಡ ಸಾರ್ವಜನಿಕರು ಪರ್ಯಾಯ ಸಂಚಾರ ಆಯ್ಕೆ ಮಾಡಿಕೊಳ್ಳಲು ಕಾರಣವಾಗಿದೆ. ಟ್ರಾಫಿಕ್‌ ದಟ್ಟಣೆಯನ್ನು ತಗ್ಗಿಸುವ ಸಲುವಾಗಿ ಆರಂಭಗೊಂಡಿದ್ದು ಮೆಟ್ರೋ ಸಂಚಾರ ವ್ಯವಸ್ಥೆ. ಆದರೆ ಈಗ ದರ ಏರಿಕೆಯಿಂದ ಮೆಟ್ರೋದ ಮೂಲ ಉದ್ದೇಶಕ್ಕೆ ಅರ್ಥವೇ ಇಲ್ಲದಂತಾಗಿದೆ. ಕೇಂದ್ರ ಸರ್ಕಾರದವರು ರಾಜ್ಯದ ಮೇಲೆ, ರಾಜ್ಯ ಸರ್ಕಾರದವರು ಕೇಂದ್ರದ ಮೇಲೆ ದೂರುವುದನ್ನ ಬಿಟ್ಟು, ದರ ಏರಿಕೆ ಕಡಿಮೆ ಮಾಡಿದರೆ, ಸರ್ಕಾರಗಳನ್ನು ಜನ ದೂರುವುದನ್ನು ಬಿಡಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...