ಬಿಎಂಟಿಸಿ | ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ ₹6.20 ಲಕ್ಷ ದಂಡ ಸಂಗ್ರಹ

Date:

  • ಕಡ್ಡಾಯವಾಗಿ ಟಿಕೆಟ್ ಪಡೆದು ಬಸ್‌ನಲ್ಲಿ ಪ್ರಯಾಣ ಬೆಳೆಸಿ: ಬಿಎಂಟಿಸಿ
  • ಆದಾಯದ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ತನಿಖೆ ನಡೆಸಿದ ಬಿಎಂಟಿಸಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳಲ್ಲಿ ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ ಜುಲೈನಲ್ಲಿ ಒಟ್ಟು ₹6,20,510 ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಟಿಸಿ, “ಸಂಸ್ಥೆಯ ಆದಾಯವನ್ನು ಸೋರಿಕೆ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಸ್ಥೆಯ ತನಿಖಾ ತಂಡ ಜುಲೈ ತಿಂಗಳಿನಲ್ಲಿ ಕಾರ್ಯಾಚರಣೆ ನಡೆಸಿದೆ. ಒಟ್ಟು 15,198 ಟ್ರಿಪ್‌ಗಳನ್ನು ತಪಾಸಣೆ ಮಾಡಲಾಗಿದೆ. ಇದರಲ್ಲಿ 2953 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಲಾಗಿದ್ದು, ಅವರಿಂದ ಒಟ್ಟು ₹5,87,310 ದಂಡ ವಸೂಲಿ ಮಾಡಲಾಗಿದೆ. ಸಂಸ್ಥೆಯ ನಿರ್ವಾಹಕರ ವಿರುದ್ಧ 925 ಪ್ರಕರಣ ದಾಖಲಿಸಲಾಗಿದೆ” ಎಂದು ಹೇಳಿದೆ.

“ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94ರ ಪ್ರಕಾರ ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 332 ಪುರುಷ ಪ್ರಯಾಣಿಕರಿಂದ ಒಟ್ಟು ₹33,200 ದಂಡ ಸಂಗ್ರಹಿಸಲಾಗಿದೆ. ಒಟ್ಟಾರೆಯಾಗಿ ಜುಲೈನಲ್ಲಿ 3285 ಪ್ರಯಾಣಿಕರಿಂದ ಒಟ್ಟು ₹6,20,510 ದಂಡ ವಸೂಲಿ ಮಾಡಲಾಗಿದೆ” ಎಂದು ಸಂಸ್ಥೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತರಾತುರಿ ಸಿಐಡಿ ಬದಲು ನ್ಯಾಯಾಂಗ ತನಿಖೆ ಆಗಬೇಕು: ಮುಖ್ಯಮಂತ್ರಿ ಚಂದ್ರು

“ಪ್ರಯಾಣಿಕರು ಬಸ್‌ನಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್ / ದಿನದ ಪಾಸು / ಮಾಸಿಕ ಪಾಸುಗಳನ್ನು ಹೊಂದಿರಬೇಕು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದು. ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ. ಮಹಿಳಾ ಪ್ರಯಾಣಿಕರಿಗೆಂದು ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಕುಳಿತುಕೊಳ್ಳಬಾರದು. ಮಹಿಳೆಯರಿಗೆ ಆಸನವನ್ನು ಬಿಟ್ಟುಕೊಡಬೇಕು” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...