ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಚಾಲಕ ಮತ್ತು ನಿರ್ವಾಹಕರ ಮೇಲಿದ್ದ 6,960 ಪ್ರಕರಣಗಳನ್ನು ಖುಲಾಸೆ ಮಾಡಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ಆದೇಶ ಹೊರಡಿಸಿದ್ದಾರೆ.
ಬಸ್ ಚಾಲನೆ ವೇಳೆ ಮೊಬೈಲ್ ಬಳಕೆ, ಟಿಕೆಟ್ ಸರಿಯಾಗಿ ನೀಡದಿರುವುದು, ಗೈರು ಹಾಜರಿ, ಸಂಚಾರ ನಿಯಮ ಉಲ್ಲಂಘನೆ, ಬಸ್‌ಗಳನ್ನು ಎಲ್ಲಂದರಲ್ಲಿ ನಿಲ್ಲಿಸುವುದು, ಡೋರ್ ಹಾಕದೆ ಬಸ್ ಚಾಲನೆ ಮಾಡುವುದು, ಯೂನಿಫಾರಂ ಹಾಕದೆ ಡ್ಯೂಟಿ ಮಾಡಿರುವುದು ಸೇರಿದಂತೆ ಇನ್ನಿತರ ಎಲ್ಲ ತಪ್ಪುಗಳಿಂದ ಶಿಕ್ಷೆಗೆ ಒಳಗಾಗಿದ್ದ ಚಾಲಕರ ಮತ್ತು ನಿರ್ವಾಹಕರ ಪ್ರಕರಣಗಳನ್ನು ಬಿಎಂಟಿಸಿ ವಜಾ ಮಾಡಿದೆ.
ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ | ಮೃತ ಸಿಬ್ಬಂದಿಯ ಅವಲಂಬಿತರಿಗೆ ₹50 ಲಕ್ಷ ವಿಮಾ ಪರಿಹಾರ
ಡಿಸ್ಮಿಸ್, ಸಸ್ಪೆಂಡ್, ಐದು ಸಾವಿರ ರೂಪಾಯಿ ದಂಡ ಕಟ್ಟಬೇಕಿದ್ದ, ಇನ್ಕ್ರಿಮೆಂಟ್ ಕಟ್ ಆಗುವ ಭಯದಲ್ಲಿದ್ದ 6,960 ನೌಕರರಿಗೆ ಇಂದಿನಿಂದಲೇ ಜಾರಿಯಾಗುವಂತೆ ಆದೇಶ ಹೊರಡಿಸಿದ್ದು, ಈ ಮೂಲಕ ನೌಕರರಿಗೆ ಸಿಹಿಸುದ್ದಿ ಸಿಕ್ಕಿದೆ.




