ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ಮುಂಜಾನೆ 5:10ಕ್ಕೆ ಹೋಗುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಸುಮಾರು 75 ಮಂದಿ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಲಿಸುತ್ತಿದ್ದ ಬಸ್ ಮಾರ್ಗ ಮಧ್ಯದ ಹೆಚ್‌ಎಎಲ್ ಮುಖ್ಯದ್ವಾರದ ಬಳಿ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಚಾಲಕ, ನಿರ್ವಾಹಕರು ಬಸ್ ನಿಲ್ಲಿಸಿ ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಚಾಲಕನ ಸಮಯಪ್ರಜ್ಷೆಯಿಂದ ಪ್ರಯಾಣಿಕರು ಪಾರಾಗಿದ್ದಾರೆ. ಎಲ್ಲ ಪ್ರಯಾಣಿಕರು ಬಸ್ ನಿಂದ ಇಳಿದ ಕೆಲವೇ ಕ್ಷಣದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡು ಬಸ್ ಧಗಧಗಿಸಿದೆ.
ಸುದ್ದಿ ತಿಳಿದ ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ. ಹೆಚ್‌ಎಎಲ್ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.





