ಬಿಎಂಟಿಸಿ | ವಜ್ರ ಬಸ್‌ಗೂ ರಿಯಾಯಿತಿ ವಿದ್ಯಾರ್ಥಿ ಪಾಸ್ ವಿತರಣೆ

Date:

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ವಜ್ರ ಬಸ್‌ಗಳಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಮಾಸಿಕ ಬಸ್ ಪಾಸ್ ವಿತರಿಸುತ್ತಿದೆ. ವಜ್ರ ಮಾಸಿಕ ಬಸ್ ಪಾಸ್ ದರ ₹1,800 ಇದ್ದು, ವಿದ್ಯಾರ್ಥಿಗಳಿಗೆ ₹1,200ಗೆ ಪಾಸ್ ವಿತರಿಸಲು ಸಂಸ್ಥೆ ನಿರ್ಧರಿಸಿದೆ.

ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸ್‌ಗಳನ್ನು ವಾಸಸ್ಥಳದಿಂದ ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕ್ರಮ ಕೈಗೊಳ್ಳಲಾಗಿದ್ದು, ಮಾಸಿಕ ಬಸ್ ಪಾಸ್ ಪಡೆಯುವ ವಿದ್ಯಾರ್ಥಿಗಳು ವಜ್ರ ಸೇರಿದಂತೆ ಸಾಮಾನ್ಯ ಬಸ್‌ಗಳಲ್ಲಿ ಅನಿಯಮಿತವಾಗಿ ಪ್ರಯಾಣಿಸಬಹುದು ಎಂದು ಹೇಳಿದೆ.

ವಜ್ರ ವಿದ್ಯಾರ್ಥಿ ಪಾಸ್ ಪಡೆಯುವ ವಿಧಾನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸ್ಥೆಯ ವೆಬ್‌ಸೈಟ್‌ www.mybmtc.karnataka.gov.in ನಲ್ಲಿ ವಿದ್ಯಾರ್ಥಿ ಬಸ್‌ ಪಾಸ್‌ ಅರ್ಜಿಯು ಲಭ್ಯವಿದೆ. ಸದರಿ ಅರ್ಜಿಯನ್ನು ಭರ್ತಿ ಮಾಡಿ, ಸಂಬಂಧಿಸಿದ ಶಾಲಾ/ಕಾಲೇಜಿನ ಮುಖ್ಯಸ್ಥರಿಂದ ದೃಢೀಕರಿಸಬೇಕು. ನಂತರ ದೃಢೀಕರಿಸಿದ ಅರ್ಜಿಯನ್ನು ಸಂಸ್ಥೆಯ ಕೆಳಕಂಡ ಬಸ್‌ ನಿಲ್ದಾಣದಲ್ಲಿ ಸಲ್ಲಿಸಿ, ಪಾಸಿನ ಮೊತ್ತವನ್ನು ಪಾವತಿಸಿ, ವಜ್ರ ವಿದ್ಯಾರ್ಥಿ ಪಾಸ್‌ ಅನ್ನು ಪಡೆಯಬಹುದು ಎಂದು ಸಂಸ್ಥೆ ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಎಲ್ಲ ಆಸ್ತಿಗಳನ್ನು ಡಿಜಿಟಲೀಕರಣ ಮಾಡಿ; ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಎಲ್ಲೆಲ್ಲಿ ಬಸ್ ಪಾಸ್ ಪಡೆಯಬಹುದು?

ಕೆಂಪೇಗೌಡ ಬಸ್ ನಿಲ್ದಾಣ, ಬನಶಂಕರಿ ಟಿಟಿಎಂಸಿ, ವೈಟ್ ಫೀಲ್ಡ್ ಟಿಟಿಎಂಸಿ, ದೊಮ್ಮಲೂರು ಟಿಟಿಎಂಸಿ, ಹೆಬ್ಬಾಳ, ಕೆಂಗೇರಿ ಟಿಟಿಎಂಸಿ, ಶಿವಾಜಿನಗರ ಬಸ್ ನಿಲ್ದಾಣ, ಕಾಡುಗೋಡಿ ಬಸ್ ನಿಲ್ದಾಣ, ಎಲೆಕ್ಟ್ರಾನಿಕ್ ಸಿಟಿ, ಯಲಹಂಕ ಹಳೆ ಬಸ್ ನಿಲ್ದಾಣ, ಶಾಂತಿನಗರ ಟಿಟಿಎಂಸಿ, ಸರ್ಜಾಪುರ ಬಸ್ ನಿಲ್ದಾಣಗಳಲ್ಲಿ ಬಸ್‌ ಪಾಸ್‌ ಪಡೆಯಬಹುದಾಗಿದೆ ಎಂದು ಬಿಎಂಟಿಸಿ ಪ್ರಕಟಣೆ ಮೂಲಕ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...