ಬಿಎಂಟಿಸಿ | ವಿದ್ಯಾರ್ಥಿಗಳಿಗೆ ಜುಲೈ 15ರವರೆಗೆ ಬಸ್‌ನಲ್ಲಿ ಪ್ರಯಾಣಿಸಲು ಅವಕಾಶ

Date:

2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭವಾಗಿದೆ. ಈ ಹಿನ್ನೆಲೆ, ಜುಲೈ 15 ರವರೆಗೆ ವಿದ್ಯಾರ್ಥಿಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ನಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಟಿಸಿ, “ರಾಜ್ಯ ಸರ್ಕಾರದ ನಿರ್ದೇಶನದಂತೆ ವಿದ್ಯಾಸಂಸ್ಥೆಗಳು ಶೈಕ್ಷಣಿಕ ಚಟುವಟಿಕೆ ಪ್ರಾರಂಭಿಸಿವೆ. ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ” ಎಂದು ತಿಳಿಸಿದೆ.

“1 ರಿಂದ 12 ನೇ ತರಗತಿವರೆಗೆ ಪದವಿ, ವೃತ್ತಿಪರ, ಸ್ನಾತಕೋತ್ತರ ಪದವಿ, ಸಂಜೆ ಕಾಲೇಜು, ಪಿಎಚ್ಡಿ ವಿದ್ಯಾರ್ಥಿಗಳು 2022-23 ನೇ ಸಾಲಿನ ವಿದ್ಯಾರ್ಥಿ ಪಾಸು ಅಥವಾ 2023-24 ನೇ ಸಾಲಿನ ಶಾಲಾ, ಕಾಲೇಜಿನ ಶುಲ್ಕ ರಸೀದಿ ಅಥವಾ ಗುರುತಿನ ಚೀಟಿ ತೋರಿಸಿ ಬಸ್‌ನಲ್ಲಿ ಪ್ರಯಾಣಿಸಬಹುದಾಗಿದೆ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...