ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ ಎಂದು ವರದಿಯಾಗಿದೆ. ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿದೆ.
ಹಲಸೂರು ಗೇಟ್ ಠಾಣೆ ಪೊಲೀಸರು, ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಫೋಟಕ ವಸ್ತು, ಇತರೆ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ ಎನ್ನಲಾಗಿದೆ.
ಇದನ್ನು ಓದಿದ್ದೀರಾ? ಬೆಂಗಳೂರಿನ 40 ಶಾಲೆಗಳಿಗೆ ಬಾಂಬ್ ಬೆದರಿಕೆ
ಕಳೆದ ತಿಂಗಳು ಬೆಂಗಳೂರು ನಗರದ ಸುಮಾರು 40ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು. ಶೋಧ ನಡೆಸಿದ ಬಳಿಕ ಅದು ಹುಸಿ ಬೆದರಿಕೆ ಎಂದು ತಿಳಿದುಬಂದಿತ್ತು.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬೆಂಗಳೂರು ಕಚೇರಿಗೂ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಈ ಹಿನ್ನೆಲೆ ಭದ್ರತೆ ಹೆಚ್ಚಿಸಲಾಗಿತ್ತು.





