ಬ್ರ್ಯಾಂಡ್‌ ಬೆಂಗಳೂರು | ಜುಲೈ 15ರವರೆಗೆ ಸಲಹೆ ನೀಡುವ ಅವಧಿ ವಿಸ್ತರಣೆ

Date:

  • ಸಾರ್ವಜನಿಕರ ಅಭಿಪ್ರಾಯ ಪಡೆಯುವ ಉದ್ದೇಶದಿಂದ ‘ಬ್ರ್ಯಾಂಡ್‌ ಬೆಂಗಳೂರು’ ಪೋರ್ಟಲ್‌ ಆರಂಭ
  • ನಾಗರಿಕರಿಂದ ನಿರೀಕ್ಷೆಗೂ ಮೀರಿ ಸಲಹೆಗಳು ಬರುತ್ತಿರುವ ಹಿನ್ನೆಲೆ, ಅವಧಿ ವಿಸ್ತರಣೆ ಮಾಡಿದ ಸರ್ಕಾರ

ರಾಜಧಾನಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆರಂಭ ಮಾಡಿರುವ ‘ಬ್ರ್ಯಾಂಡ್‌ ಬೆಂಗಳೂರು’ ಅಭಿಯಾನಕ್ಕೆ ಕಳೆದ ಹತ್ತು ದಿನಗಳಲ್ಲಿ ಸಾರ್ವಜನಿಕರಿಂದ ಬರೋಬ್ಬರಿ 20 ಸಾವಿರಕ್ಕೂ ಅಧಿಕ ಸಲಹೆಗಳು ಬಂದಿವೆ. ನಾಗರಿಕರಿಂದ ಸಲಹೆಗಳನ್ನು ಪಡೆಯುವ ಅವಧಿಯನ್ನು ಜೂನ್ 30 ರಿಂದ ಜುಲೈ 15 ರವರೆಗೆ ವಿಸ್ತರಿಸಲಾಗಿದೆ.

ಬೆಂಗಳೂರು ನಗರ ಸಮಗ್ರ ಅಭಿವೃದ್ಧಿ ಹಾಗೂ ಬ್ರ್ಯಾಂಡ್ ಬೆಂಗಳೂರು ಮಾಡುವ ಉದ್ದೇಶದಿಂದ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌ ಅವರು ಬ್ರ್ಯಾಂಡ್‌ ಬೆಂಗಳೂರು ಅಭಿಯಾನ ಪ್ರಾರಂಭಿಸಿ, ಇದರ ನೇತೃತ್ವ ವಹಿಸಿದ್ದರು.

ಡಿ ಕೆ ಶಿವಕುಮಾರ್ ಅವರು ಸರ್ವಪಕ್ಷ ಶಾಸಕರ ಜೊತೆ ಹಾಗೂ ನಾನಾ ಕ್ಷೇತ್ರಗಳ ಗಣ್ಯರ ಜೊತೆ ಸಭೆ ನಡೆಸಿ ಸಲಹೆಗಳನ್ನು ಪಡೆದಿದ್ದಾರೆ. ಇದರ ಜತೆಗೆ ಸಾರ್ವಜನಿಕರ ಅಭಿಪ್ರಾಯ ಪಡೆಯುವ ಉದ್ದೇಶದಿಂದ ‘ಬ್ರ್ಯಾಂಡ್‌ ಬೆಂಗಳೂರು’ ಪೋರ್ಟಲ್‌ ಆರಂಭಿಸಿದ್ದರು. ನಾಗರಿಕರಿಗೆ ಜೂ.30ರವರೆಗೆ ಸಲಹೆ ಸಲ್ಲಿಸುವುದಕ್ಕೆ ಅವಕಾಶ ನೀಡಿದ್ದರು. ಇದೀಗ ಈ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಚಾರಯುಕ್ತ ಬೆಂಗಳೂರು, ಹಸಿರು ಬೆಂಗಳೂರು, ಸ್ವಚ್ಛ ಬೆಂಗಳೂರು, ಜನಹಿತ ಬೆಂಗಳೂರು, ಆರೋಗ್ಯಕರ ಬೆಂಗಳೂರು, ಟೆಕ್ ಬೆಂಗಳೂರು ಹಾಗೂ ಜಲಸುರಕ್ಷಾ ಬೆಂಗಳೂರು ಕುರಿತು ನಾಗರಿಕರಿಂದ ಬೆಂಗಳೂರಿನ ಅಭಿವೃದ್ಧಿಗಾಗಿ ಏಳು ವಿಚಾರಗಳ ಬಗ್ಗೆ ಅಭಿಪ್ರಾಯ ಮತ್ತು ಸಲಹೆ ಪಡೆಯುವ ಸಲುವಾಗಿ ಜೂನ್ 21ರಂದು ಪ್ರತ್ಯೇಕ ವೆಬ್ ಫೋರ್ಟಲ್ www.brandbengaluru.karnataka.gov.in ಬಿಡುಗಡೆಗೊಳಿಸಿದ್ದರು.

ಜೂನ್ 30ರವರೆಗೆ ನಾಗರಿಕರು ಸಲಹೆಗಳನ್ನು ನೀಡುವಂತೆ ನಾಗರಿಕರಲ್ಲಿ ಮನವಿ ಮಾಡಲಾಗಿತ್ತು. ನಾಗರಿಕರಿಂದ ನಿರೀಕ್ಷೆಗೂ ಮೀರಿ ಸಲಹೆಗಳು ಬರುತ್ತಿರುವ ಹಿನ್ನೆಲೆಯಲ್ಲಿ, ಬೆಂಗಳೂರು ಸಮಗ್ರ ಅಭಿವೃದ್ಧಿಗೆ ನಾಗರಿಕರು ನೀಡುವ ಸಲಹೆಗಳ ಸಮೀಕ್ಷೆಯ ಅವಧಿಯನ್ನು ವಿಸ್ತರಿಸಲಾಗಿದೆ.

ಎಲ್ಲ ನಾಗರಿಕರು ಈ ಸದವಕಾಶವನ್ನು ಉಪಯೋಗಿಸಿಕೊಂಡು #BrandBengaluru, #BetterBengaluru ಸಮೀಕ್ಷೆಯಲ್ಲಿ ಪಾಲ್ಗೊಂಡು ಇನ್ನೂ ಹೆಚ್ಚು-ಹೆಚ್ಚು ಸಲಹೆಗಳನ್ನು ನೀಡುವ ಮೂಲಕ ಬೆಂಗಳೂರು ನಗರ ಸಮಗ್ರ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ವಿನಂತಿಸಿದೆ.

ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ | ವಿದ್ಯಾರ್ಥಿಗಳಿಗೆ ಜುಲೈ 15ರವರೆಗೆ ಬಸ್‌ನಲ್ಲಿ ಪ್ರಯಾಣಿಸಲು ಅವಕಾಶ

ನಾಗರಿಕರು ವೆಬ್ ಪೋರ್ಟಲ್ www.brandbengaluru.karnataka.gov.in ಮೂಲಕ ಮಾತ್ರವಲ್ಲದೆ ವ್ಯಾಟ್ಸ್ಆಪ್ ಸಂಖ್ಯೆ: 9480685700 ಮೂಲಕವೂ ಸಲಹೆಗಳನ್ನು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ಸಂಖ್ಯೆ 1533ಗೆ ಕರೆಮಾಡಬಹುದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...