ಬ್ರ್ಯಾಂಡ್ ಬೆಂಗಳೂರು | ಸಲಹೆಗಳ ವರದಿ ಸಲ್ಲಿಸಲು ನೋಡಲ್ ಅಧಿಕಾರಿಗಳಿಗೆ ಸೂಚನೆ

Date:

‘ಬ್ರ್ಯಾಂಡ್ ಬೆಂಗಳೂರು’ ಪರಿಕಲ್ಪನೆ ಅಡಿಯಲ್ಲಿ 8 ವಿಷಯಗಳ ಕುರಿತು ಈಗಾಗಲೇ ತಜ್ಞರು, ಪರಿಸರವಾದಿಗಳು ಸೇರಿದಂತೆ ಸಾರ್ವಜನಿಕರಿಂದ ಸಲಹೆಗಳನ್ನು ಪಡೆಯಲಾಗಿದೆ. ಇದೀಗ, ಬಂದಿರುವ ಸಲಹೆಗಳನ್ನು ಸಂಗ್ರಹಿಸಿ ಒಟ್ಟುಗೂಡಿಸಿ ವರದಿಯನ್ನು ಸಿದ್ಧಪಡಿಸಲಾಗಿದೆ. ಈ ಸಿದ್ದಪಡಿಸಿರುವ ವರದಿಯನ್ನು ಸಲ್ಲಿಸಬೇಕು ಎಂದು ಬ್ರ್ಯಾಂಡ್ ಬೆಂಗಳೂರು ಸಮಾವೇಶ ಸಮಿತಿಯ ಅಧ್ಯಕ್ಷ ಹಾಗೂ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ್ ರಾಯಪುರ ಅವರು ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬ್ರ್ಯಾಂಡ್ ಬೆಂಗಳೂರಿನ ಸಮಾವೇಶವನ್ನು ನಡೆಸುವ ಸಂಬಂಧ ಪಾಲಿಕೆ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಅವರು, “ಬ್ರ್ಯಾಂಡ್ ಬೆಂಗಳೂರು ಯೋಜನೆಯ ಅನುಷ್ಠಾನಕ್ಕಾಗಿ ಈಗಾಗಲೇ ಸಾಕಷ್ಟು ಸಿದ್ದತೆ ಮಾಡಿಕೊಳ್ಳಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಈಗಾಗಲೇ ಸರ್ವಪಕ್ಷಗಳ ಶಾಸಕರು, ಸಂಸದರು ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಲಾಗಿದೆ” ಎಂದರು.

“ನಾನಾ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರು, ಸ್ಥಳೀಯ ಎನ್‌ಜಿಒ/ಆರ್.ಡಬ್ಲ್ಯೂ.ಎ ಗಳ ಜತೆ ಸಭೆ ನಡೆಸಿ ಸಲಹೆ/ಅಭಿಪ್ರಾಯ ಪಡೆಯಲಾಗಿದೆ. ಜತೆಗೆ ಸಾರ್ವಜನಿಕರಿಂದ ವೆಬ್ ಪೋರ್ಟಲ್ ಮೂಲಕ ಸಲಹೆ ಪಡೆಯಲಾಗಿದೆ. ಬೆಂಗಳೂರಿನ ಅಭಿವೃದ್ಧಿಗಾಗಿ ಸಂಚಾರಯುಕ್ತ ಬೆಂಗಳೂರು, ಹಸಿರು ಬೆಂಗಳೂರು, ಸ್ವಚ್ಛ ಬೆಂಗಳೂರು, ಜನಹಿತ ಬೆಂಗಳೂರು, ಆರೋಗ್ಯಕರ ಬೆಂಗಳೂರು, ಟೆಕ್ ಬೆಂಗಳೂರು ಹಾಗೂ ಜಲಸುರಕ್ಷಾ ಬೆಂಗಳೂರು ಸೇರಿದಂತೆ ಒಟ್ಟು 7 ವಿಷಯಗಳ ಕುರಿತು 70 ಸಾವಿರಕ್ಕೂ ಹೆಚ್ಚು ಅಭಿಪ್ರಾಯ/ಅನಿಸಿಕೆ/ಸಲಹೆಗಳು ಬಂದಿವೆ. 8ನೇ ವಿಷಯವಾದ ಶೈಕ್ಷಣಿಕ ಬೆಂಗಳೂರು ವಿಷಯವಾಗಿ ಸಭೆ ನಡೆಸಲಾಗಿದೆ. ಅದರಂತೆ 8 ವಿಷಯಗಳ ಕುರಿತು ಸಿದ್ದಪಡಿಸಿರುವ ವರದಿಯನ್ನು ಕೂಡಲೇ ಸಲ್ಲಿಸಬೇಕು” ಎಂದು ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯ 8 ವಿಷಯಗಳ ಕುರಿತಾಗಿ ಸಿದ್ದಪಡಿಸಿರುವ ವರದಿಗಳ ಆಧಾರದ ಮೇಲೆ 8 ವಿಷಯಗಳನ್ನೊಳಗೊಂಡ ಸಂಕ್ಷಿಪ್ತ ಪ್ರಾತ್ಯಕ್ಷಿಕೆಯನ್ನು ಸಿದ್ದಪಡಿಸಿಕೊಳ್ಳಬೇಕು. ಸಾರ್ವಜನಿಕರಿಂದ ಬಂದಿರುವ ಅಭಿಪ್ರಾಯಗಳ ಬಗ್ಗೆ ಹಾಗೂ ತಜ್ಞರೊಂದಿಗೆ ವಿಚಾರ ವಿನಿಮಯ ನಡೆಸುವ ಬಗ್ಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಮಾವೇಶ ಸಭೆ ನಡೆಸಬೇಕು. ಈ ಸಭೆ ಏರ್ಪಡಿಸುವ ಸಲುವಾಗಿ ಅಗತ್ಯವಿರುವ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು” ಎಂದು ಆಡಳಿತ ವಿಭಾಗದ ಉಪ ಆಯುಕ್ತರಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಣೇಶ ಪ್ರತಿಷ್ಠಾಪನೆಗೆ ಒಂದೇ ಸೂರಿನಡಿ ಸಿಗಲಿದೆ ಅನುಮತಿ: ಬಿಬಿಎಂಪಿ ಆಯುಕ್ತ

ಬ್ರ್ಯಾಂಡ್ ಬೆಂಗಳೂರು ಕಲ್ಪನೆಯ ಬಗ್ಗೆ 8 ಸಮಿತಿಗಳು ಸಿದ್ದಪಡಿಸುತ್ತಿರುವ ವರದಿಗಳ ಆಧಾರದ ಮೇಲೆ ಮುಂದಿನ ಕಾರ್ಯಯೋಜನೆಯನ್ನು ಸೂಚಿಸುವಂತೆ ಹಾಗೂ ಅಗತ್ಯ ಆಡಳಿತಾತ್ಮಕ ಸಿದ್ದತೆಗಳ ಬಗ್ಗೆ ಸಲಹೆ ನೀಡುವಂತೆ ಸೂಚಿಸಿದರು.

ಸಭೆಯಲ್ಲಿ ಸಮಾವೇಶದ ಸಮಿತಿಯ ಸದಸ್ಯರಾದ ಡಾ.ತ್ರಿಲೋಕ್ ಚಂದ್ರ, ಡಾ. ಹರೀಶ್ ಕುಮಾರ್, ಆಡಳಿತ ವಿಭಾಗದ ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, 8 ವಿಷಯಗಳ ನೋಡಲ್ ಅಧಿಕಾರಿಗಳು, ಸಮನ್ವಯಾಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...