ಬ್ಯಾರಿ ಸಮುದಾಯದವರು ಜಾತ್ಯತೀತರು; ಅಸ್ಮಿತೆ, ಒಗ್ಗಟ್ಟು ಉಳಿಸಿಕೊಳ್ಳಿ: ಸಿಎಂ ಸಿದ್ದರಾಮಯ್ಯ

Date:

ಬ್ಯಾರಿಗಳು ಜಾತ್ಯತೀತರು. ಜಾತಿ ವ್ಯಾಮೋಹವಾಗಲಿ, ಧರ್ಮದ ವ್ಯಾಮೋಹವಾಗಲಿ ಅವರಿಗಿಲ್ಲ. ಬ್ಯಾರಿಗಳನ್ನು ಯಾರೇ ವಿಭಜಿಸಲು ಪ್ರಯತ್ನಿಸಿದರೂ ತಮ್ಮ ಅಸ್ಮಿತೆಯನ್ನು, ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಭಾನುವಾರ ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಬ್ಯಾರಿ ಕೂಟ -2026 ಉದ್ಘಾಟಿಸಿ ಮಾತನಾಡಿದ ಅವರು, “ಬ್ಯಾರಿ ಭಾಷೆಗೆ ಲಿಪಿ ಇಲ್ಲದ್ದರಿಂದ ಕನ್ನಡದಲ್ಲಿಯೇ ನಿಮ್ಮತನವನ್ನು ಉಳಿಸಿಕೊಂಡಿರುವುದು ಮುಖ್ಯ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಬೆಂಗಳೂರು | ಬ್ಯಾರಿಸ್ ಸೆಂಟ್ರಲ್ ಕಮಿಟಿ ವತಿಯಿಂದ ಇಫ್ತಾರ್ ಕೂಟ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಕ್ಷಿಣ ಕನ್ನಡ ಜಿಲ್ಲೆಯ ಬ್ಯಾರಿಗಳು ದೇಶ, ವಿದೇಶ ಅನೇಕ ಭಾಗಗಳಲ್ಲಿ ಕೆಲಸ ಮಾಡುವವರಾದರೂ ಬ್ಯಾರಿ ಅಸ್ಮಿತೆಯನ್ನು ಬಿಟ್ಟುಕೊಟ್ಟಿಲ್ಲ. ಮೂಲತಃ ವ್ಯಾಪಾರಿಗಳಾದ ಬ್ಯಾರಿಗಳು ಎಲ್ಲಾ ಸಮುದಾಯಗಳೊಂದಿಗೆ ಹೊಂದಿಕೊಂಡು ಉದ್ಯೋಗದೊಂದಿಗೆ ತಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳುತ್ತಿರುವುದು ದೊಡ್ಡ ವಿಚಾರ” ಎಂದು ಅಭಿಪ್ರಾಯಿಸಿದರು.

byari1

“ಎಲ್ಲರೂ ಜಾತ್ಯತೀತರಾಗಿರುವುದು ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಪರಸ್ಪರ ಪ್ರೀತಿಸಬೇಕು , ಮನುಷ್ಯರಾಗಿ ಬಾಳಬೇಕು ಎಂದು ಎಲ್ಲಾ ಧರ್ಮಗಳೂ ಹೇಳುತ್ತವೆ. ಧರ್ಮವನ್ನು ಅನುಕೂಲಕ್ಕೆ ತಕ್ಕಂತೆ ವ್ಯಾಖ್ಯಾನಿಸುವುದು ಸರಿಯಲ್ಲ” ಎಂದರು.

byari2

“ಬ್ಯಾರಿ ಸಮುದಾಯದವರು ತಮ್ಮ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಸ್ವಾಗತಾರ್ಹ. ಒಂದು ಕಾಲದಲ್ಲಿ ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಹೆಣ್ಣು ಮಕ್ಕಳು ವಿದ್ಯಾವಂತರಾಗುವುದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿರುವುದು ಒಳ್ಳೆಯ ಬೆಳವಣಿಗೆ. ಲಿಂಗ ತಾರತಮ್ಯ ಹೋಗಲಾಡಿಸಲು ವಿದ್ಯಾಭ್ಯಾಸ ಅವಶ್ಯಕ” ಎಂದು ತಿಳಿಸಿದರು.

byari3

ಬ್ಯಾರಿ ಸಮುದಾಯಕ್ಕೆ ಸೇರಿದ ಯು. ಟಿ. ಖಾದರ್ ವಿಧಾನಸಭಾಧ್ಯಕ್ಷರಾಗಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

byari4

ಬ್ಯಾರಿ ಭಾಷೆ, ಕಲೆ ಉಳಿಸಲು ಸರ್ಕಾರ ನೆರವು

ಈ ಸಂದರ್ಭದಲ್ಲೇ ಬ್ಯಾರಿ ಭಾಷೆ, ಕಲೆ ಉಳಿಸಲು ಸರ್ಕಾರ ನೆರವು ನೀಡಲಿದೆ ಎಂದು ಹೇಳಿದ ಸಿಎಂ, ಬ್ಯಾರಿ ಭವನ ನಿರ್ಮಾಣಕ್ಕೆ 5 ಕೋಟಿ ರೂ ನೀಡಿದ್ದನ್ನು ಸ್ಮರಿಸಿದರು. ಹಾಗೆಯೇ ಮಂಗಳೂರು ಬ್ಯಾರಿ ಅಕಾಡೆಮಿಗೆ 3 ಕೋಟಿ, ಹಜ್ ಭವನಕ್ಕೆ 10 ಕೋಟಿ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...