ಬೆಂಗಳೂರು | ಮಳೆ ಅಬ್ಬರಕ್ಕೆ ನಲುಗಿದ ರಾಜಧಾನಿ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಮಧ್ಯಾಹ್ನದಿಂದಲೇ ಮಳೆ ಆರ್ಭಟ ಹೆಚ್ಚಾಗಿದೆ. ನಗರ ವಿವಿಧ ಭಾಗಗಳಲ್ಲಿ ರಸ್ತೆಯ ಮೇಲೆ ಒಂದು ಅಡಿಗೂ ಎತ್ತರದಷ್ಟು ನೀರು ಹರಿಯುತ್ತಿದ್ದು, ಹಲವೆಡೆ ಸಂಚಾರ ದಟ್ಟಣೆ ಉಂಟಾಗಿದೆ. ಮಳೆಯ ನಡುವೆ ರಸ್ತೆಯಲ್ಲಿಯೇ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮೆಜೆಸ್ಟಿಕ್, ಆರ್‌ಟಿ ನಗರ, ಶ್ರೀರಾಮ್‌ಪುರ, ವಿಜಯನಗರ, ಮಲ್ಲೇಶ್ವರಂ, ರಾಜಾಜಿನಗರ, ಜೆಪಿ ನಗರ, ಜಯನಗರ, ಕೆ.ಆರ್ ಮಾರುಕಟ್ಟೆಯಲ್ಲಿ ಭಾರೀ ಮಳೆಯಾಗಿದೆ. ಜೆ.ಸಿ ರಸ್ತೆ, ಕಾರ್ಪೋರೇಷನ್ ವೃತ್ತ, ಮಾಗಡಿ ರೋಡ್ ಟೋಲ್‌ ಗೇಟ್‌ ಸೇರಿದಂತೆ ಹಲವೆಡೆ ಸಂಚಾರ ದಟ್ಟಣೆ ಉಂಟಾಗಿದೆ. ಜೊತೆಗೆ, 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಿದೆ.

ಕೆಲವೆಡೆ ಮರಗಳು ಧರೆಗುಳಿವೆ ಮತ್ತು ಮರದ ಕೊಂಬೆಗಳು ಮುರಿದುಬಿದ್ದಿವೆ. ಯುಬಿ ಸಿಟಿ ಬಳಿಕ ಸ್ಟರ್ಲಿಂಗ್ ಅಪಾರ್ಟ್‌ಮೆಂಟ್‌ ರಸ್ತೆಯಲ್ಲಿ ನೀರು ನುಗ್ಗುತ್ತಿದ್ದು, ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ ಎಂದು ಒಆರ್‌ಆರ್‌ಸಿಎ ಟ್ವೀಟ್‌ ಮಾಡಿದ್ದು, ವಿಡಿಯೋವೊಂದನ್ನು ಹಂಚಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...