ಭಾರತದ ಅಭಿವೃದ್ಧಿಗೆ ಬಂಡವಾಳಶಾಹಿ ಮಾತ್ರವೇ ಏಕೈಕ ಪರಿಹಾರ: ಇಸ್ಫೋಸಿಸ್ ನಾರಾಯಣ ಮೂರ್ತಿ

Date:

ಭಾರತದಂತಹ ಬಡ ದೇಶವು ಅಭಿವೃದ್ಧಿ ರಾಷ್ಟ್ರವಾಗಲು ಸಹಾನುಭೂತಿಯುಳ್ಳ ಬಂಡವಾಳಶಾಹಿಯ ಅಗತ್ಯವಿದೆ. ಅದೊಂದೇ ಏಕೈಕ ಪರಿಹಾರವಾಗಿದೆ ಎಂದು ಇನ್ಫೋಸಿಸ್ ಸ್ಥಾಪಕ ಎನ್‌.ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಟೆಕ್ ಶೃಂಗಸಭೆಯಲ್ಲಿ ಅವರು ಮಾತನಾಡಿದರು. “ಯಾವುದನ್ನೂ ಉಚಿತವಾಗಿ ನೀಡಬಾರದು. ಪ್ರತಿಯೊಂದಕ್ಕೂ ಒಂದು ಮೌಲ್ಯವಿದೆ. ಸರ್ಕಾರ ಜನರಿಗೆ ಉಚಿತವಾಗಿ ಸೇವೆಯನ್ನು ಒದಗಿಸಿದರೆ, ಪಡೆದವರು ಏನನ್ನಾದರೂ ಮಾಡಲು ಸಿದ್ಧರಾಗಿರಬೇಕು. ಉಚಿತ ಸಬ್ಸಿಡಿಗಳನ್ನು ಪಡೆದ ಜನರಲ್ಲಿ ದೊಡ್ಡ ಜವಾಬ್ದಾರಿಗಳಿರುತ್ತವೆ. ಉಚಿತ ಸೇವೆ ಪಡೆದವರು ಹಿಂತಿರುಗಿ ಸಮಾಜಕ್ಕೆ ಏನನ್ನಾದರೂ ಕೊಡಬೇಕು” ಎಂದರು.

”ಪ್ರಪಂಚದಲ್ಲಿ ಸಮಾಜವಾದ, ಎಡಪಂಥೀಯ ತತ್ವ ಸಿದ್ಧಾಂತಗಳನ್ನು ನೆಚ್ಚಿಕೊಂಡಿದ್ದ ದೇಶಗಳು ಉತ್ತಮ ಸ್ಥಿತಿಯಲ್ಲಿಲ್ಲ. ಸಮಾಜವಾದಿ ತತ್ವಗಳನ್ನು ನಂಬಿದ್ದ ಸೋವಿಯತ್ ಒಕ್ಕೂಟವೇ ಈಗ ಇಲ್ಲವಾಗಿದೆ. ಇಂತಹ ಸಂದರ್ಭದಲ್ಲಿ, ನಮ್ಮ ದೇಶದ ಅಭಿವೃದ್ಧಿಗೆ ಸಹಾನುಭೂತಿಯುಳ್ಳ ಬಂಡವಾಳಶಾಹಿ ವ್ಯವಸ್ಥೆ ಅಗತ್ಯವಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವುದೇ ದೇಶದ ಬಡತನ ಸಮಸ್ಯೆಯನ್ನು ಪರಿಹರಿಸಲು ಮುಕ್ತ ಮಾರುಕಟ್ಟೆ ಮತ್ತು ಉದ್ಯಮಶೀಲತೆಯನ್ನು ಆಧರಿಸಿದ ಬಂಡವಾಳಶಾಹಿ ಒಂದೇ ಪರಿಹಾರವಾಗಿದೆ” ಎಂದು ಹೇಳಿದರು.

ಎನ್‌ಇಪಿಯನ್ನು ಸಮರ್ಥಿಸಿ, ಪ್ರಧಾನಿ ಮೋದಿಯನ್ನು ಹೊಗಳಿದ ನಾರಾಯಣ ಮೂರ್ತಿ, “ವಿದ್ಯಾರ್ಥಿಗಳು ಹೆಚ್ಚು ಸಮರ್ಥರಾಗಲು ಎನ್ಇಪಿ ನೆರವಾಗಲಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಎನ್ಇಪಿ ಕರಡು ರಚನೆ ಅಧ್ಯಕ್ಷ ಕೆ. ಕಸ್ತೂರಿ ರಂಗನ್ ಅವರನ್ನು ಅಭಿನಂದಿಸುತ್ತೇನೆ. ಸ್ವತಂತ್ರ ಚಿಂತನೆ, ಕ್ರಿಯಾತ್ಮಕ ಆಲಿಸುವಿಕೆ, ವಿಶ್ಲೇಷಣಾ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಹೆಚ್ಚಿಸಿಕೊಳ್ಳುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಎನ್ಇಪಿ ಸಕಾರಾತ್ಮಕ ಹೆಜ್ಜೆಯಾಗಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...