ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಕಾರು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸಾವು

Date:

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದಿದ್ದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಹಾಗೆಯೇ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮೃತರನ್ನು ವಿಶ್ವ (22) ಮತ್ತು ಸೂರ್ಯ (18) ಎಂದು ಗುರುತಿಸಲಾಗಿದ್ದು, ಇಬ್ಬರೂ ಬೆಂಗಳೂರಿನ ಬೊಮ್ಮಸಂದ್ರದವರಾಗಿದ್ದಾರೆ.

ವಿಶ್ವ ಡಿಪ್ಲೊಮಾ ಕೋರ್ಸ್ ಓದುತ್ತಿದ್ದರೆ, ಆತನ ಸ್ನೇಹಿತ ಸೂರ್ಯ ಬೆಂಗಳೂರಿನಲ್ಲಿ ಎರಡನೇ ವರ್ಷದ ಪ್ರಿ-ಯೂನಿವರ್ಸಿಟಿ ವಿದ್ಯಾರ್ಥಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ | 28 ದಿನಗಳಲ್ಲಿ 74,915 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ

ಇಬ್ಬರು ವಿದ್ಯಾರ್ಥಿಗಳು ಮೈಸೂರಿನಿಂದ ಹಿಂತಿರುಗುತ್ತಿದ್ದ ಕಾರನ್ನು ಸುಹಾಸ್ ಚಲಾಯಿಸುತ್ತಿದ್ದ. ಶುಕ್ರವಾರ ರಾತ್ರಿ ಇಲ್ಲಿನ ರಾಮನಗರದ ಕೆಂಪೈನದೊಡ್ಡಿ ಗ್ರಾಮದ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ಸಂಭವಿಸಿದೆ.

ಸೂರ್ಯ ಮತ್ತು ವಿಶ್ವ ಇಬ್ಬರನ್ನೂ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು ಅಲ್ಲಿ ವಿದ್ಯಾರ್ಥಿಗಳು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ತೀವ್ರ ಗಾಯಗೊಂಡಿರುವ ಕಾರು ಚಾಲಕ ಸುಹಾಸ್ ಅಪಾಯದಿಂದ ಪಾರಾಗಿದ್ದಾನೆ ಎಂದು ಹಿರಿಯ ಸಂಚಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

“ಭಾರತೀಯ ದಂಡ ಸಂಹಿತೆಯ ಸೆಕ್ಷನ್ 297 (ಸಾರ್ವಜನಿಕ ಮಾರ್ಗದಲ್ಲಿ ಅತಿರೇಕವಾಗಿ ಚಾಲನೆ ಮಾಡುವುದು ಅಥವಾ ಸವಾರಿ ಮಾಡುವುದು) ಮತ್ತು 304 ಎ (ನಿರ್ಲಕ್ಷ್ಯದಿಂದ ಸಾವು ಸಂಭವಿಸುವುದು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಆರೋಪಿ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...