ಕಂಬಳ | ನವೆಂಬರ್‌ 25, 26 ರಂದು ಸಂಚಾರ ಮಾರ್ಗ ಬದಲಾವಣೆ; ಇಲ್ಲಿದೆ ಮಾಹಿತಿ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ನವೆಂಬರ್ 25 ಮತ್ತು 26ರಂದು ಎರಡು ದಿನ ಕಂಬಳ ಕಾರ್ಯಕ್ರಮ ನಡೆಯಲಿದೆ. ನಗರದ ಅರಮನೆ ಮೈದಾನದಲ್ಲಿ ಕೋಣಗಳ ಓಟ ನಡೆಯಲಿದ್ದು, ಇದನ್ನು ನೋಡಲು 5 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದೆ. ಜತೆಗೆ ಕಾರ್ಯಕ್ರಮದಲ್ಲಿ ಹಲವು ಗಣ್ಯರು, ಸಿನಿ ತಾರೆಯರು, ರಾಜಕಾರಣಿಗಳು ಭಾಗವಹಿಸಲಿದ್ದಾರೆ. ಜತೆಗೆ, ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ನಗರಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆ, ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಲು ಬೆಂಗಳೂರು ಸಂಚಾರ ಪೊಲೀಸರು ಕೆಲವು ನಿರ್ಬಂಧ ವಿಧಿಸಿದ್ದಾರೆ.

ನ.24 ರಿಂದ ನ.26ರ ವರೆಗೆ ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ (ಸರ್ಕಸ್ ಗ್ರೌಂಡ್‌ನಲ್ಲಿ) “ಬೆಂಗಳೂರು ಕಂಬಳ-ನಮ್ಮ ಕಂಬಳ” ಕಾರ್ಯಕ್ರಮ ನಡೆಯಲಿದೆ. ನ.25 ಹಾಗೂ ನ.26 ರಂದು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ಸಾಧ್ಯತೆ ಇದೆ. ಹಾಗಾಗಿ, ಬೆಂಗಳೂರು ಸಂಚಾರ ಪೊಲೀಸರು ಕೆಲವು ಮಾರ್ಗಗಳಿಗೆ ನಿರ್ಬಂಧ ವಿಧಿಸಿದ್ದಾರೆ.

ಕಾರ್ಯಕ್ರಮಕ್ಕೆ ಪ್ರವೇಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
  • ನಗರದ ಸಿಬಿಡಿ ಏರಿಯಾದಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳು ಮೇಖ್ರಿ ಸರ್ಕಲ್ ಬಳಿ ತಿರುವು ಪಡೆದು ಮೇಖ್ರಿ ಸರ್ಕಲ್ ಗೇಟ್ ನಂ-01 (ಕೃಷ್ಣವಿಹಾರ್) ರಲ್ಲಿ ಪ್ರವೇಶಿಸಿ, ವಾಹನಗಳನ್ನು ಪಾರ್ಕ್ ಮಾಡಿ ನಂತರ ಕಾರ್ಯಕ್ರಮದ ಸ್ಥಳವನ್ನು ನಡೆದು ತಲುಪುವುದು.
  • ಬಳ್ಳಾರಿ ರಸ್ತೆ ಹೆಬ್ಬಾಳ ಕಡೆಯಿಂದ ಬರುವ ವಾಹನಗಳು ಮೇಖ್ರಿ ಸರ್ಕಲ್ ಅಂಡರ್ ಪಾಸ್‌ನಲ್ಲಿ ಬಂದು ಗೇಟ್ ನಂ-01 ಕೃಷ್ಣವಿಹಾರ್ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ನಂತರ ಕಾರ್ಯಕ್ರಮದ ಸ್ಥಳವನ್ನು ನಡೆದು ತಲುಪುವುದು.
  • ಯಶವಂತಪುರ ಕಡೆಯಿಂದ ಬರುವ ವಾಹನಗಳು ಜಂಕ್ಷನ್-ಮೇಖ್ರಿ ಸರ್ಕಲ್ ಬಲ ತಿರುವು ಪಡೆದು ಗೇಟ್ ನಂ-01 ಕೃಷ್ಣ ವಿಹಾರ್ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ನಂತರ ಕಾರ್ಯಕ್ರಮದ ಸ್ಥಳವನ್ನು ನಡೆದು ತಲುಪುವುದು.
  • ಕ್ಯಾಬ್ ಸೇವೆಯನ್ನು ಬಳಸಿಕೊಳ್ಳುವವರು ಗೇಟ್ ನಂ-2ರಲ್ಲಿ ಪ್ರವೇಶಿಸಿ ನಿಗದಿತ ಸ್ಥಳದಲ್ಲಿ ಇಳಿದು ಗೇಟ್ ನಂ-03 ಮುಖಾಂತರ ಕ್ಯಾಬ್‌ಗಳು ನಿರ್ಗಮಿಸಬಹುದಾಗಿದೆ.
  • ಹಿಂತಿರುಗಿ ಹೋಗುವಾಗ ಎಲ್ಲ ವಾಹನಗಳು ಕಡ್ಡಾಯವಾಗಿ ಜಯಮಹಲ್ ರಸ್ತೆಯ ಅಮಾನುಲ್ಲಾ ಖಾನ್‌ ಗೇಟ್ ಮುಖಾಂತರ ನಿರ್ಗಮಿಸಬೇಕು.
  • ಕಾರ್ಯಕ್ರಮವನ್ನು ಹೊರತುಪಡಿಸಿ, ಇತರೆ ಸ್ಥಳಗಳಿಗೆ ಹೋಗುವ ರಸ್ತೆ ಬಳಕೆದಾರರು ಈ ಕೆಳಕಂಡ ರಸ್ತೆಗಳನ್ನು ಬಳಸದೇ ಬದಲಿ ಮಾರ್ಗದಲ್ಲಿ ಸಂಚರಿಸಲು ಬೆಂಗಳೂರು ಟ್ರಾಫಿಕ್ ಪೊಲೀಸರು ಕೋರಿದ್ದಾರೆ.

ವಾಹನ ನಿಲುಗಡೆ ಸ್ಥಳ

  • ಅರಮನೆ ರಸ್ತೆ: ಮೈಸೂರು ಬ್ಯಾಂಕ್ ವೃತ್ತದಿಂದ ವಸಂತನಗರ ಅಂಡರ್ ಪಾಸ್ ವರೆಗೆ.
  • ಎಂವಿ ಜಯರಾಮ್ ರಸ್ತೆ: ಬಿಡಿಎ ಜಂಕ್ಷನ್ ಅರಮನೆ ರಸ್ತೆಯಿಂದ ಚಕ್ರವರ್ತಿ ಲೇಔಟ್‌ನಿಂದ ವಸಂತನಗರ ಅಂಡರ್‌ಪಾಸ್‌ನಿಂದ ಹಳೆ ಉದಯ ಟಿವಿ ಜಂಕ್ಷನ್‌ವರೆಗೆ. (ಎರಡೂ ದಿಕ್ಕುಗಳು)
  • ಬಳ್ಳಾರಿ ರಸ್ತೆ: ಮೇಖ್ರಿ ವೃತ್ತದಿಂದ ಎಲ್‌ಆರ್‌ಡಿಇ ಜಂಕ್ಷನ್‌ವರೆಗೆ.
  • ಕನ್ನಿಂಗ್‌ಹ್ಯಾಮ್ ರಸ್ತೆ: ಬಾಳೆಕುಂದ್ರಿ ಜಂಕ್ಷನ್‌ನಿಂದ ಲೆ ಮೆರಿಡಿಯನ್ ಅಂಡರ್‌ಪಾಸ್‌ವರೆಗೆ.
  • ಮಿಲ್ಲರ್ಸ್ ರಸ್ತೆ: ಹಳೆ ಉದಯ ಟಿವಿ ಜಂಕ್ಷನ್‌ನಿಂದ ಎಲ್‌ಆರ್‌ಡಿಇ ಜಂಕ್ಷನ್‌ವರೆಗೆ.
  • ಜಯಮಹಲ್ ರಸ್ತೆ: ಬೆಂಗಳೂರಿನ ಸುತ್ತಮುತ್ತಲಿನ ರಸ್ತೆಗಳು ಸೇರಿದಂತೆ ಜಯಮಹಲ್ ರಸ್ತೆ

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಡಿಸಿಪಿ ಕಚೇರಿ ಎದುರು ಯುವತಿಗೆ ಕಿರುಕುಳ; ಯುವಕನ ಬಂಧನ

ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ

ಅರಮನೆ ರಸ್ತೆ, ಜಯಮಹಲ್ ರಸ್ತೆ, ಎಂ.ವಿ.ಜಯರಾಮ್ ರಸ್ತೆ, ಸಿ.ವಿ.ರಾಮನ್ ರಸ್ತೆ, ವಸಂತನಗರ ರಸ್ತೆ, ಬಳ್ಳಾರಿ ರಸ್ತೆ, ತರಳಬಾಳು ರಸ್ತೆ, ರಮಣ ಮಹರ್ಷಿ ರಸ್ತೆ, ನಂದಿದುರ್ಗ ರಸ್ತೆ, ಮೌಂಟ್ ಕಾರ್ಮೆಲ್ ಕಾಲೇಜು ರಸ್ತೆ.

ನಗರದ ಮಧ್ಯ ಭಾಗದಲ್ಲಿ ದಟ್ಟಣೆ ಉಂಟಾಗದಂತೆ ಬೆಳಗ್ಗೆ ಮತ್ತು ಸಂಜೆ ವೇಳೆ ಭಾರೀ ವಾಹನಗಳ ಸಂಚಾರವನ್ನು ಸಹ ನಿಷೇಧಿಸಲಾಗಿದೆ. ಕರ್ನಾಟಕ ಸರ್ಕಾರವು ಬೆಂಗಳೂರಿನಲ್ಲಿ ಮೊದಲ ನಮ್ಮ ಕಂಬಳ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಲು ಎಲ್ಲ ವ್ಯವಸ್ಥೆಗಳನ್ನು ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...