ವಿದ್ಯುತ್ ತಗುಲಿ ತಾಯಿ, ಮಗು ಸಾವು ಪ್ರಕರಣ | ಸ್ವತಂತ್ರ ಸಮಿತಿಯಿಂದ ತನಿಖೆ: ಕೆ ಜೆ ಜಾರ್ಜ್

Date:

  • ಕಾಡುಗೋಡಿಯಲ್ಲಿ ವಿದ್ಯುತ್ ತಂತಿ ತಗುಲಿ ತಾಯಿ, ಮಗು ಸಾವು
  • ಮೃತರ ಕುಟುಂಬಕ್ಕೆ ಹತ್ತು ಲಕ್ಷ ರೂ. ಪರಿಹಾರ: ಕೆ ಜೆ ಜಾರ್ಜ್

ಕಾಡುಗೋಡಿಯಲ್ಲಿ ವಿದ್ಯುತ್ ತಂತಿ ತಗುಲಿ ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಸ್ವತಂತ್ರ ಸಮಿತಿಯಿಂದ ನಡೆಸಲಾಗುವುದು. ಮೃತರ ಕುಟುಂಬಕ್ಕೆ ಹತ್ತು ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ತಿಳಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಇದೊಂದು ದುಖಃಕರ ಘಟನೆ. ತಕ್ಷಣ ಸ್ಥಳಕ್ಕೆ ಅಧಿಕಾರಿಗಳು ಹೋಗಿ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ಐದು ಜನರನ್ನು ಅಮಾನತು ಮಾಡಲಾಗಿದೆ” ಎಂದರು.

“ಘಟನೆಯಲ್ಲಿ ಸೌಂದರ್ಯ ಹಾಗೂ ಅವರ 9 ತಿಂಗಳ ಮಗು ಮೃತಪಟ್ಟಿದೆ. ಘಟನೆ ಗಮನಕ್ಕೆ ಬರುತ್ತಿದ್ದಂತೆ ಸ್ಥಳೀಯರು ಬೆಸ್ಕಾಂ ಕಚೇರಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಆದರೆ, ತುರ್ತಾಗಿ ಯಾರೊಬ್ಬರೂ ಸ್ಥಳಕ್ಕೆ ಬರಲಿಲ್ಲ ಎಂಬ ಆರೋಪವನ್ನು ಸ್ಥಳೀಯರು ಮಾಡುತ್ತಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಡುಗೋಡಿ ಪ್ರಕರಣದ ಸಂಪೂರ್ಣ ತನಿಖೆಗೆ ಸ್ವತಂತ್ರ ಸಮಿತಿಯನ್ನು ರಚನೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಸ್ಕಾಂ, ಪೊಲೀಸ್ ಇಲಾಖೆ ಹಾಗೂ ಎಲೆಕ್ಟ್ರಿಕ್ ಇನ್ ಪೆಕ್ಟ‌ರ್‌ನಿಂದ ತನಿಖೆ‌ ನಡೆಸಲಾಗುತ್ತಿದೆ. ಇದಷ್ಟೇ ಅಲ್ಲದೆ, ನಿವೃತ್ತ ಚೀಫ್ ಎಂಜಿನಿಯರ್ ನೇತೃತ್ವದಲ್ಲಿ ನಾಲ್ಕು ಜನರ ಸಮಿತಿ ಸ್ವತಂತ್ರ ತನಿಖೆ ನಡೆಸಲಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರದ ಆರು ತಿಂಗಳ ‘ಅನನ್ಯ ಸಾಧನೆ’ ಮತ್ತು ವಿರೋಧ ಪಕ್ಷಗಳ ‘ಜವಾಬ್ದಾರಿ’

ಈ ಘಟನೆಯ ತನಿಖೆಗೆ ಪೊಲೀಸರಿಗೆ ಮುಕ್ತ ಅವಕಾಶಕೊಟ್ಟಿದ್ದೇವೆ. ನಾವು ಯಾವುದೇ ರೀತಿಯಲ್ಲಿ ತನಿಖೆಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಇಂತಹ ಘಟನೆ ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದರು.

“ವಿದ್ಯುತ್ ಪರಿಸ್ಥಿತಿಯ ಕುರಿತು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. ವಿದ್ಯುತ್​ಗೆ ಈ ಬಾರಿ ಬೇಡಿಕೆ ಇದೆ. ಈ ವರ್ಷ ಮಳೆಯ ಕೊರತೆ ಉಂಟಾಗಿದೆ. ಈ ವರ್ಷ ಒನ್​ ಟು ಡಬಲ್ ಇಂಧನಕ್ಕೆ ಬೇಡಿಕೆ ಜಾಸ್ತಿಯಾಗಿದೆ. ನಮಗೆ ಮುಖ್ಯಮಂತ್ರಿಗಳು ಸಾಕಷ್ಟು ಬೆಂಬಲ ನೀಡಿದ್ದಾರೆ. ವಿದ್ಯುತ್ ಖರೀದಿ‌ ಮಾಡಲು ಹಣ ಬಿಡುಗಡೆ ಮಾಡಿದ್ದಾರೆ. ಪಂಚಾಬ್ ಮತ್ತು ಯುಪಿಯಿಂದ ವಿದ್ಯುತ್ ಖರೀದಿಗೆ ಮುಂದಾಗುತ್ತಿದ್ದೇವೆ” ಎಂದು ಇದೇ ವೇಳೆ ಸಚಿವ ಜಾರ್ಜ್‌ ಮಾಹಿತಿ ಹಂಚಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...