ಬೆಂಗಳೂರು | ವಿಡಿಯೋ; ರ‍್ಯಾಪಿಡೋ ಬೈಕ್ ಚಾಲಕನ ಮೇಲೆ ಯುವತಿ ಹಲ್ಲೆ; ತಿರುಗಿಸಿ ಹೊಡೆದ ಚಾಲಕ

Date:

ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನ ಮೇಲೆ ಯುವತಿಯೊಬ್ಬಳು ಹಲ್ಲೆ ನಡೆಸಿದ್ದು, ಕೋಪಗೊಂಡ ಸವಾರ ಯುವತಿಗೆ ಹಲ್ಲೆ ತಿರುಗಿಸಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ಮೂರು ದಿನಗಳ ಹಿಂದೆ ನಡೆದಿದೆ. ಘಟನೆಯ ಎರಡೂ ವಿಡಿಯೋಗಳು ವೈರಲ್‌ ಆಗಿವೆ.

ಮೊದಲು ಶ್ರೇಯಾ ಎಂಬ ಯುವತಿ ಹಲ್ಲೆ ನಡೆಸಿದ್ದು ಸಿಸಿ ಟಿವಿಯಲ್ಲಿ ಸೆರೆಯಾದರೆ, ಆನಂತರ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕ ಸುಹಾಸ್‌ ಯುವತಿ ಮೇಲೆ ಹಲ್ಲೆ ನಡೆಸಿರುವುದು ಎಲ್ಲಡೆ ವೈರಲ್‌ ಆಗಿದೆ. ಜೂನ್ 13ರಂದು ಈ ಘಟನೆ ನಡೆದಿದೆ. ಇಂದು (ಜೂನ್ 16) ಈ ಪ್ರಕರಣ ಬೆಳಕಿಗೆ ಬಂದ ಕಾರಣ ಜಯನಗರ ಪೊಲೀಸರು ಎನ್‌ಸಿಆರ್‌ ದಾಖಲಿಸಿಕೊಂಡಿದ್ದಾರೆ.

ಶ್ರೇಯಾ ಅವರು ಆ ದಿನದಂದು ರ‍್ಯಾಪಿಡೋ ಸೇವೆ ಬಳಸಿಕೊಂಡು ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನು ಅತಿ ವೇಗವಾಗಿ ವಾಹನ ಚಲಾಯಿಸುತ್ತಿದ್ದುದರಿಂದ, ಶ್ರೇಯಾ ಚಾಲಕನನ್ನು ಪ್ರಶ್ನಿಸಿ ಎರಡು ಮೂರು ಬಾರಿ ಹಲ್ಲೆ ನಡೆಸಿದ್ದಾರೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಚಾಲಕ ಸುಹಾಸ್ ಯುವತಿ ಮೇಲೆ ಹಲ್ಲೆ ನಡೆಸಿದ್ದಾನೆ. ಹೊಡೆದ ಏಟಿಗೆ ಯುವತಿ ರಸ್ತೆಗೆ ಬಿದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ನಡೆದ ನಂತರವೂ ಮಹಿಳೆ ಹೋಗಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಘಟನೆಯ ಬಗ್ಗೆ ಸಂಪೂರ್ಣವಾಗಿ ವಿಡಿಯೋ ಸಮೇತ ಮಾಹಿತಿ ಪಡೆದುಕೊಂಡ ಜಯನಗರ ಪೊಲೀಸ್ ಠಾಣೆ ಸಿಬ್ಬಂದಿ ಎನ್‌ಸಿಆರ್ ದಾಖಲಿಸಿದ್ದಾರೆ.

ಇದನ್ನು ಓದಿದ್ದೀರಾ? ಈಶಾನ್ಯ ಮತ್ತು ದಕ್ಷಿಣ ಭಾರತದಲ್ಲಿ ಪ್ರವಾಹ ಸಾಧ್ಯತೆ: ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಚಾಲಕನಿಂದ ಆರೋಪ

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಶ್ರೇಯಾ ಮೇಲೆ ಹಲ್ಲೆ ಮಾಡಿದ ಬೈಕ್‌ ಚಾಲಕ ಸುಹಾಸ್ ಪ್ರತಿಕ್ರಿಯಿಸಿದ್ದು, ಮೊದಲು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದು ಆ ಯುವತಿ. ಶರ್ಟ್ ಕಟ್ ನಲ್ಲಿ ಬಂದೆ ಅಂತ ಅರ್ಧ ದಾರಿಯಲ್ಲಿ ನಿಲ್ಲಿಸಿ ಇಂಗ್ಲಿಷ್ ನಲ್ಲಿ ಬೈದರು. ನಾನು ಐದು ವರ್ಷದಿಂದ ರ‍್ಯಾಪಿಡೋ ಓಡಿಸುತ್ತಿದ್ದೇನೆ. ದಾರಿ ಗೊತ್ತು ಅಂದೆ. ಬಳಿಕ ಗಾಡಿ‌ ನಿಲ್ಲಿಸಿ ಇಂಗ್ಲಿಷ್‌ನಲ್ಲಿ ನನಗೆ ಕೆಟ್ಟದಾಗಿ ಬೈದರು. ಟಿಫಿನ್ ಬಾಕ್ಸ್ ನಿಂದ ಹೊಡೆದರು. ಅಷ್ಟು ಜನರ ಮುಂದೆ ಹೊಡೆದಾಗ ಸಿಟ್ಟಲ್ಲಿ‌ ನಾನು ಹೊಡೆದೆ ಎಂದು ಸ್ಪಷ್ಟಪಡಿಸಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...