ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Date:

  • ಜೂನ್ 4 ರಂದು ನೈಋತ್ಯ ಮಾನ್ಸೂನ್ ಕೇರಳ ಪ್ರವೇಶ
  • ಗುರುವಾರ ನಗರದಲ್ಲಿ 31.3 ಡಿ.ಸೆ ಗರಿಷ್ಠ ಉಷ್ಣಾಂಶ ದಾಖಲು

ರಾಜ್ಯದಲ್ಲಿ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವು ಜನ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜೂನ್ 4ರಂದು ನೈಋತ್ಯ ಮಾನ್ಸೂನ್ ಕೇರಳ ಪ್ರವೇಶಿಸಲಿದೆ. ರಾಜ್ಯದಲ್ಲಿಯೂ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. 

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಯಾವುದೇ ಸಂದರ್ಭದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ. ಗುರುವಾರ ಬೆಂಗಳೂರಿನಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಲ್ಲಿ ಮೇ ತಿಂಗಳಿನಲ್ಲಿ ದಾಖಲೆ ಮಳೆ

ಮೇ ತಿಂಗಳಿನಲ್ಲಿ ಸಾಮಾನ್ಯವಾಗಿ ಹೆಚ್ಚಾಗಿ ಬಿಸಿಲು ಇರುತ್ತದೆ. ಆದರೆ, ಈ ವರ್ಷ ಹೆಚ್ಚಾಗಿ ಮಳೆ ಸುರಿದಿದೆ. ಹವಾಮಾನ ಇಲಾಖೆಯ ಪ್ರಕಾರ ಮೇ ತಿಂಗಳಲ್ಲಿ 13 ಸೆಂ.ಮೀ ವಾಡಿಕೆ ಮಳೆಯಾಗುತ್ತದೆ. ಈ ಬಾರಿ ಮೇ ತಿಂಗಳಿನಲ್ಲಿ ಬೆಂಗಳೂರಿನಲ್ಲಿ 31 ಸೆಂ.ಮೀ ಮಳೆಯಾಗಿದ್ದು, ಇದು 123 ವರ್ಷಗಳ ದಾಖಲೆಯನ್ನು ಮುರಿದಿದೆ ಎಂದು ಹೇಳಿದೆ.

ಕಳೆದ 123 ವರ್ಷದಲ್ಲಿ ಈ ಬಾರಿಯ ಮೇ ತಿಂಗಳಿನಲ್ಲಿ ಮಹಾಮಳೆ ಸುರಿದಿದೆ. 1901ರಿಂದ ಮಳೆಯ ಪ್ರಮಾಣ ದಾಖಲು ಮಾಡುವ ವ್ಯವಸ್ಥೆ ಆರಂಭಗೊಂಡಿದ್ದು, ಇದಕ್ಕೂ ಹಿಂದಿನ ವರ್ಷಗಳ ಅಂಕಿ-ಅಂಶ ಹವಾಮಾನ ಇಲಾಖೆ ಬಳಿ ಇಲ್ಲ. ಹೀಗಾಗಿ, 1,901ರ ನಂತರ ಮೇನಲ್ಲಿ ಸುರಿದ ಅತಿ ದೊಡ್ಡ ಮಳೆ ಇದಾಗಿದೆ.

ಮೇ ತಿಂಗಳಿನಲ್ಲಿ ಬೆಂಗಳೂರು ದಾಖಲೆಯ ಇತಿಹಾಸದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಈ ಹಿಂದೆ, ಮೇ 1957ರಲ್ಲಿ 28 ಸೆಂ.ಮೀ ಮಳೆಯಾಗಿತ್ತು. ಇಲ್ಲಿಯವರೆಗೂ ಇದು ದಾಖಲೆಯ ಮಳೆಯಾಗಿತ್ತು. ಇದೀಗ ಹಳೆ ವರ್ಷದ ದಾಖಲೆಯನ್ನು ಈ ವರ್ಷದ ಮಳೆ ಮುರಿದಿದೆ ಎಂದು ಇಲಾಖೆ ತಿಳಿಸಿದೆ.  

2015 ರಿಂದ ಪ್ರತಿ ವರ್ಷ ಬೆಂಗಳೂರಿನ ಮೇ ಮಳೆಯು ಸರಾಸರಿ ಮಾಸಿಕ ಒಟ್ಟು 128.7 ಮಿಮೀ ಮಳೆಗಿಂತ ಮೇಲಿರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದತ್ತಾಂಶ ಹೇಳಿದೆ.

ಕಳೆದ ಎಂಟು ವರ್ಷಗಳಲ್ಲಿ ಮೇ ತಿಂಗಳ ಸರಾಸರಿ ಮಳೆ 18.5 ಸೆಂ.ಮೀ. ಕಳೆದ ವರ್ಷ ಅತಿ ಹೆಚ್ಚು 27 ಸೆಂ.ಮೀ ಮಳೆಯಾಗಿದ್ದು, 2020 ಮತ್ತು 2021ರಲ್ಲಿ 13 ಸೆಂ.ಮೀ ಅತಿ ಕಡಿಮೆ ಮಳೆಯಾಗಿದೆ.

2023ರ ಮಾರ್ಚ್ 1 ರಿಂದ ಮೇ 31 ರವರೆಗಿನ ಇಲಾಖೆಯ ಋತುಮಾನದ ಸಂಚಿತ ಮಳೆಯ ಮಾಹಿತಿಯು ಬೆಂಗಳೂರು ನಗರದಲ್ಲಿ 343 ಮಿಮೀ ಮಳೆಯಾಗಿದ್ದು, ಸಾಮಾನ್ಯಕ್ಕಿಂತ 173 ಮಿಮೀ ಹೆಚ್ಚು ಮಳೆಯಾಗಿದೆ ಎಂದಿದೆ.

ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ 275 ಮಿ.ಮೀ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 227 ಮಿ.ಮೀ ಮಳೆ ದಾಖಲಾಗಿದೆ.

ಮಾರ್ಚ್‌ನಿಂದ ಮೇ ವರೆಗೆ, ಬೆಂಗಳೂರು ನಗರ ಜಿಲ್ಲೆಯಲ್ಲಿ 245.8 ಮಿಮೀ ಮಳೆಯಾಗಿದೆ, ಮುಂಗಾರು ಪೂರ್ವ ಅವಧಿಯಲ್ಲಿ ಸಾಮಾನ್ಯ ಸರಾಸರಿ 156.1 ಮಿಮೀಗಿಂತ 57% ಹೆಚ್ಚಾಗಿದೆ. ಇದೇ ಅವಧಿಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ 131.5 ಮಿಮೀ ಮಳೆಯಾಗಿದೆ. ಇದು ಸಾಮಾನ್ಯ ಸರಾಸರಿ 140.7 ಮಿಮೀಗಿಂತ 6.5% ಕಡಿಮೆಯಾಗಿದೆ.

ಈ ಸುದ್ದಿ ಓದಿದ್ದೀರಾ? 96 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ: ಬಿಎಂಆರ್‌ಸಿಎಲ್

ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ಮುಂಗಾರು ಋತುವಿನಲ್ಲಿ ವಾರ್ಷಿಕವಾಗಿ ಸರಾಸರಿ 60 ಸೆಂ.ಮೀ ಮಳೆಯಾಗುತ್ತದೆ. ಜೂನ್‌ನಲ್ಲಿ 11 ಸೆಂ.ಮೀ., ಜುಲೈನಲ್ಲಿ 12 ಸೆಂ.ಮೀ., ಆಗಸ್ಟ್‌ನಲ್ಲಿ 16 ಸೆಂ.ಮೀ ಮತ್ತು ಸೆಪ್ಟೆಂಬರ್‌ನಲ್ಲಿ ಸರಾಸರಿ 21 ಸೆಂ.ಮೀ ಮಳೆಯಾಗುತ್ತದೆ.

ಹವಾಮಾನ ಇಲಾಖೆಯ ತಜ್ಞ ಪ್ರಸಾದ್ ಮಾತನಾಡಿ, “ಗಾಳಿಯಲ್ಲಿ ತೇವಾಂಶದ ಪ್ರಮಾಣ ಹೆಚ್ಚಾಗಿದೆ. ಸಮುದ್ರ ಮಟ್ಟದಿಂದ 900 ಮೀಟರ್ ಎತ್ತರದಲ್ಲಿ ಗಾಳಿಯ ಚಲನೆ ಸ್ಥಗಿತವಾಗಿದೆ. ಇದು ಮೋಡಗಳ ಚಲನೆಯ ಮೇಲೂ ಪರಿಣಾಮ ಬೀರಿದ್ದು, ರಾಜ್ಯದಲ್ಲಿ ತೀವ್ರ ಮಳೆಯಾಗುತ್ತಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...