ಬೆಂಗಳೂರಿನಲ್ಲಿ ಇಂದು ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Date:

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು (ನ.7) ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಳಿಗ್ಗೆಯಿಂದಲೂ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ.

ಚಾಮರಾಜ ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರಿಯಲಿದೆ.

ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರ ಪ್ರಕಟಿಸಿದ ಹವಾಮಾನ ಮುನ್ಸೂಚನೆ ವರದಿ ಪ್ರಕಾರ, ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...