ನ.27 ರಿಂದ ನ.29ರವರೆಗೆ ರಾಜ್ಯದ ನಾನಾ ಕಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Date:

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನ.27 ರಿಂದ ನ.29ರವರೆಗೆ ಸಾಧಾರಣ ಮಳೆಯಾಗಲಿದೆ. ಜತೆಗೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ, ಬಹುತೇಕ ಜಲಾಶಯಗಳ ನೀರಿನ ಮಟ್ಟ ಕಡಿಮೆಯಿತ್ತು. ನವೆಂಬರ್‌ನಿಂದ ಹಿಂಗಾರು ಮಳೆ ಚುರುಕುಗೊಂಡಿದೆ. ಭಾನುವಾರ ಕೆಲವು ಕಡೆ ಮಳೆಯಾಗಿರುವುದನ್ನು ಹೊರತುಪಡಿಸಿ, ಇನ್ನುಳಿದ ಕಡೆ ಮಳೆಯ ಅಬ್ಬರ ಅಷ್ಟಾಗಿ ಇರಲಿಲ್ಲ. ಇದೀಗ ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಬುಧವಾರದವರೆಗೂ ಸಾಧಾರಣ ಮಳೆಯಾಗಬಹುದು. ರಾಜ್ಯದಾದ್ಯಂತ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಹಾಗೂ ಮಂಗಳವಾರ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಈ ಎರಡು ದಿನವೂ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 20 ಡಿಗ್ರಿ ಸೆಲ್ಸಿಯಸ್‌ ಇರಬಹುದು.

ಭಾನುವಾರ ಎಚ್​ಎಎಲ್​ನಲ್ಲಿ 25.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 25.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಲ್ಲೆಲ್ಲಿ ಮಳೆ?

ಬೆಂಗಳೂರು ನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನ.27 ಮತ್ತು ನ.28 ರಂದು ಈ ಮಾರ್ಗದಲ್ಲಿ ಸಂಚಾರ ಬಂದ್; ಎಲ್ಲೆಲ್ಲಿ? ಇಲ್ಲಿದೆ ನೋಡಿ

ಭಾನುವಾರ ಶಿವಮೊಗ್ಗ ಜಿಲ್ಲೆಯ ತಾಳಗುಪ್ಪದಲ್ಲಿ 4 ಸೆ.ಮೀ ನಷ್ಟು ಮಳೆಯಾಗಿದೆ. ತುಮಕೂರು ಜಿಲ್ಲೆಯ ಗುಬ್ಬಿ, ಹಾಸನ ಜಿಲ್ಲೆಯ ಕೊಣನೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ವಿಜಯಪುರದಲ್ಲಿ 17.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ತಾಪಮಾನ ದಾಖಲಾಗಿದೆ. ಉತ್ತರ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಒಣ ಹವೆಯ ವಾತಾವರಣ ಕಂಡು ಬಂದಿತು.

ನೆರೆಯ ಕೇರಳ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಮಳೆಯಾಗುತ್ತಿದ್ದರೂ, ಕರ್ನಾಟಕದಲ್ಲಿ ಮಳೆ ಪ್ರಮಾಣ ಬಹುತೇಕ ತಗ್ಗಿದೆ. ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...