ಕ್ರಿಸ್ಮಸ್, ಹೊಸ ವರ್ಷಾಚರಣೆ‌ | ಪೊಲೀಸ್ ಬಂದೋಬಸ್ತ್‌ಗೆ ಸೂಚನೆ, ಸಚಿವ ಪರಮೇಶ್ವರ್ ಸಭೆ

Date:

ಬೆಂಗಳೂರು ನಗರದಲ್ಲಿ ಕ್ರಿಸ್ಮಸ್ ಆಚರಣೆ ಹಾಗೂ ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅನಾಹುತಗಳು ಸಂಭವಿಸದಂತೆ‌ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಸೂಚಿಸಿದರು.

ನಗರ ಪೊಲೀಸ್ ಆಯುಕ್ತ ಕಚೇರಿಯಲ್ಲಿ ಸೋಮವಾರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, “ಕಳೆದ ವರ್ಷ ಅಚ್ಚುಕಟ್ಟಾಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಂಡು ಕ್ರಿಸ್ಮಸ್ ಹಾಗೂ ಹೊಸ ವರ್ಷ ಆಚರಣೆಗೆ ಕ್ರಮ ವಹಿಸಲಾಗಿತ್ತು. ಬೆಂಗಳೂರು ವಿಶ್ವದ ಗಮನ ಸೆಳೆಯುವ ನಗರವಾಗಿರುವುದರಿಂದ ಯಾವುದನ್ನು ನಿರ್ಲಕ್ಷಿಸದೇ ,ಅತ್ಯಂತ ಜವಾಬ್ಧಾರಿಯುತವಾಗಿ ಬಂದೋಬಸ್ತ್ ಕೈಗೊಳ್ಳಬೇಕು” ಎಂದರು.

“ಕ್ರಿಸ್ಮಸ್ ಆಚರಣೆ ಹಿನ್ನೆಲೆಯಲ್ಲಿ ಗುಪ್ತದಳ ಇಲಾಖೆಯೊಂದಿಗೆ ನಿರಂತರವಾಗಿ‌ ಸಂಪರ್ಕದಲ್ಲಿರಬೇಕು. ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಸಣ್ಣ ಪುಟ್ಟ ಅನಾಹುತಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕಿದೆ. ಹೊಸ ವರ್ಷ ಆಚರಿಸುವವರಿಗೆ ಆಡಚಣೆ ಮಾಡುವುದು ಬೇಡ. ಅವರಿಗೆ ಸುರಕ್ಷತೆ ನೀಡಬೇಕು. ತೊಂದರೆ ಉಂಟು ಮಾಡುವ ಕಿಡಿಗೇಡಿಗಳ ಮೇಲೆ ನಿಗಾವಹಿಸಿ ಕ್ರಮ ಜರುಗಿಸಬೇಕು” ಎಂದು ಸೂಚಿಸಿದರು‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಗತ್ಯ ಬಂದೋಬಸ್ತ್ ಹಿನ್ನೆಲೆಯಲ್ಲಿ ನಗರ‌ದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ರಜೆ ನೀಡುವುದು ಬೇಡ. ತೀರ ಅಗತ್ಯತೆ ಮತ್ತು ಅನಿವಾರ್ಯತೆ ಇದ್ದವರಿಗೆ ರಜೆ ನೀಡಿ. ಕ್ರಿಸ್ಮಸ್ ಮತ್ತು ಹೊಸ ವರ್ಷ ಆಚರಣೆ ವೇಳೆ ಯಾವುದೇ ರೀತಿಯ ಅನಾಹುತಗಳು ಸಂಭವಿಸಿದರೆ ಸಂಬಂಧಪಟ್ಟ ಡಿಸಿಪಿ, ಎಸಿಪಿ, ಇನ್‌ಸ್ಪೆಕ್ಟರ್‌ಗಳನ್ನೇ ಹೊಣೆ ಮಾಡಲಾಗುವುದು. ಈ ವಿಚಾರದಲ್ಲಿ ಯಾರು ಏನೇ ಹೇಳಿದರು ಕೇಳುವುದಿಲ್ಲ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಹಾರ ಹಕ್ಕಿಗೆ ಮಂಡ್ಯ ನಾಂದಿ; ಮುಂದಿದೆ ಸರ್ಕಾರಿ ಸವಾಲು

“ಬಿಬಿಎಂಪಿ, ಬಿಎಂಟಿಸಿ ಬಿಎಂಆರ್‌ಸಿಎಲ್, ಆರೋಗ್ಯ ಮತ್ತು ಅಗ್ನಿಶಾಮಕ ಇಲಾಖೆಯ ನೆರವು ಪಡೆದುಕೊಳ್ಳಬೇಕು. ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನಚ್ಚರಿಕೆ ವಹಿಸಬೇಕು. ಡ್ರಂಕ್ ಆ್ಯಂಡ್ ಡ್ರೈವ್, ಬೈಕ್ ವ್ಹೀಲಿಂಗ್ ಮಾಡುವ ಕಿಡಿಗೇಡಿಗಳು ಹಾಗೂ ಹಳೇ‌ ಪ್ರಕರಣಗಳ ಆರೋಪಿಗಳ ಮೇಲೆ ನಿಗಾ ಇರಿಸಬೇಕು. ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕೈಗೊಳ್ಳುವಂತೆ” ಸೂಚಿಸಿದರು.

ಏಳು ಲಕ್ಷ ಜನ ಸೇರುವ ಸಾಧ್ಯತೆ

“ನಗರದಲ್ಲಿ ಹೊಸ ವರ್ಷ ಆಚರಣೆಗೆ 7 ಲಕ್ಷ ಜನ ಸೇರುವ ಸಾಧ್ಯತೆ ಇದೆ. ಪೊಲೀಸರು ಕೈಗೊಂಡಿರುವ ಮುಂಜಾಗ್ರತಾ ಕ್ರಮದ ಬಗ್ಗೆ ಚರ್ಚಿಸಲಾಗಿದೆ.‌ ಎಲ್ಲರು ಸಂತೋಷದಿಂದ ಕ್ರಿಸ್ಮಸ್ ಮತ್ತು ಹೊಸ ವರ್ಷ ಆಚರಿಸಲು ಸಹಕರಿಸಲಾಗುವುದು‌. ಮಹಿಳಾ‌ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಮೆಟ್ರೋ ವ್ಯವಸ್ಥೆ, ಓಲಾ, ಊಬರ್ ಮುಂತಾದ ವ್ಯವಸ್ಥೆ ಬಗ್ಗೆ ಪರಿಶೀಲಿಸಲಾಗಿದೆ” ಎಂದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್‌ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಸಿಸಿಬಿ ವಿಭಾಗದ ಹೆಚ್ಚುವರಿ ಆಯುಕ್ತ ಡಾ. ಚಂದ್ರಗುಪ್ತ ಹಾಗೂ ಎಲ್ಲ ವಿಭಾಗದ ಉಪ ಪೊಲೀಸ್ ಆಯುಕ್ತರು, ಸಹಾಯಕ ಪೊಲೀಸ್ ಆಯುಕ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...