ದೇವನಹಳ್ಳಿ ರೈತರೊಂದಿಗೆ ಸಿಎಂ ಮಹತ್ವದ ಸಭೆ; ರೈತರ ಹೋರಾಟ-ಹಕ್ಕೊತ್ತಾಯ ಗೌರವಿಸುತ್ತದಾ ಸರ್ಕಾರ?

Date:

ದೇವನಹಳ್ಳಿ ತಾಲೂಕಿನ 13 ಗ್ರಾಮಗಳ 1,770 ಎಕರೆ ಕೃಷಿ ಭೂಮಿಯನ್ನು ಕೈಗಾರಿಕೆಗಾಗಿ ಭೂಸ್ವಾಧೀನಕ್ಕೆ ಮುಂದಾಗಿದ್ದ ಸರ್ಕಾರದ ಧೋರಣೆಯ ವಿರುದ್ಧ ಸುಮಾರು ಮೂರುವರೆ ವರ್ಷಗಳಿಂದ ಅಲ್ಲಿನ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬರೋಬ್ಬರಿ ಸಾವಿರಕ್ಕೂ ಹೆಚ್ಚು ದಿನಗಳಿಂದ ಹೋರಾಟ ನಡೆಸುತ್ತಿರುವ ರೈತ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 4ರಂದು ಸಭೆ ಕರೆದಿದ್ದಾರೆ. ಇಂದು (ಶುಕ್ರವಾರ-ಜು.4) ರೈತ ಹೋರಾಟದ ನಿರ್ಣಾಯಕ ದಿನವೆಂದೇ ಭಾವಿಸಲಾಗಿದೆ. ಶುಕ್ರವಾರ 11:30ಕ್ಕೆ ಸಭೆ ಆರಂಭವಾಗಲಿದೆ. ಸರ್ಕಾರವು ರೈತರ ಹೊರಾಟ, ಹಕ್ಕೊತ್ತಾಯಗಳನ್ನು ಗೌರವಿಸಿ, ಭೂಸ್ವಾಧೀನ ಪ್ರಕ್ರಿಯೆಯಿಂದ ಹಿಂದೆ ಸರಿಯುವುದೇ ಎಂದು ರಾಜ್ಯವು ಎದುರು ನೋಡುತ್ತಿದೆ.

ಜೂನ್ 25ರಂದು ರೈತರು ಮತ್ತು ರಾಜ್ಯದ ನಾನಾ ಸಂಘಟನೆಗಳ ಹೋರಾಟಗಾರರು ದೇವನಹಳ್ಳಿ ಚಲೋ ಪ್ರತಿಭಟನೆ ನಡೆಸಿದ್ದು, ರೈತ ಹೋರಾಟದ ಕುರಿತು ದೇಶದ ಗಮನ ಸೆಳೆದಿದ್ದಾರೆ. ಜೂನ್ 24ರಂದು ಸುದ್ದಿಗೋಷ್ಟಿ ನಡೆಸಿದ್ದ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ಮೂರು ಗ್ರಾಮಗಳ 450 ಎಕರೆ ಭೂಮಿಯನ್ನು ಮಾತ್ರವೇ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವುದಾಗಿ ಘೋಷಿಸಿದ್ದರು. ಪಾಟೀಲರ ಈ ಘೋಷಣೆಯು ಸರ್ಕಾರವು ರೈತರು, ರೈತ ಹೋರಾಟವನ್ನು ಹೊಡೆದು ಆಳುವ ಧೋರಣೆ ತಳೆದಿರುವುದನ್ನು ಸೂಚಿಸುತ್ತದೆ. ದೇವನಹಳ್ಳಿ ತಾಲೂಕಿನ 1,770 ಎಕರೆ ಭೂಮಿಯನ್ನೂ ಭೂಸ್ವಾಧೀನದಿಂದ ಕೈಬಿಡಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಜೂನ್ 27ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅನಿರ್ದಿಷ್ಠಾವಧಿ ಧರಣಿ ಆರಂಭಿಸಿದ್ದಾರೆ.

ಈ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರೊಂದಿಗೆ ಜುಲೈ 4ರಂದು ಸಭೆ ನಡೆಸುವುದಾಗಿ ತಿಳಿಸಿದ್ದರು. ಇದೀಗ, ಇಂದು ಸಭೆ ನಡೆಯಲಿದೆ. ಈ ಸಭೆಗೂ ಮುನ್ನ ಪೂರ್ವಭಾವಿಯಾಗಿ ಜುಲೈ 3ರಂದು ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾನೂನು ಸಚಿವ ಎಚ್.ಕೆ. ಪಾಟೀಲ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಇಂಧನ ಸಚಿವ ಕೆ.ಜೆ. ಜಾರ್ಜ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಕೆಐಎಡಿಬಿ (KIADB) ಸಿಇಒಗಳೊಂದಿಗೆ ಸಭೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಭೂಸ್ವಾಧೀನಕ್ಕೆ ಒಳಗಾದ ಭೂಮಿಯ ರೈತರಿಗೆ ಸೂಕ್ತ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಆರೆ, ನಮಗೆ ಪರಿಹಾರ ಬೇಡ, ನಾವು ಪರಿಹಾರದ ಹಣಕ್ಕಾಗಿ ಪ್ರತಿಭಟನೆ ನಡೆಸುತ್ತಿಲ್ಲ. ನನಗೆ ನಮ್ಮ ಭೂಮಿ ಬೇಕು. ತಮ್ಮ ಭೂಮಿ, ಬದುಕು ಮತ್ತು ಪರಿಸರವನ್ನು ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ಧೇವೆ ಎಂದು ರೈತರು ಘೋಷಿಸಿದ್ದಾರೆ.

ಈ ಲೇಖನ ಓದಿದ್ದೀರಾ?; ಬಿಹಾರದಲ್ಲಿ ಮತದಾರ ಪಟ್ಟಿ ಪರಿಷ್ಕರಣೆ: ‘ಎನ್‌ಆರ್‌ಸಿ’ಗಿಂತಲೂ ಹೆಚ್ಚು ಅಪಾಯಕಾರಿ

ದೇವನಹಳ್ಳಿ ತಾಲೂಕಿನ ರೈತರ ಹೋರಾಟವು ಕರ್ನಾಟಕದ ಆತ್ಮಸಾಕ್ಷಿಯನ್ನು ಬಡಿದೆಬ್ಬಿಸಿದೆ. ರೈತರ ದನಿಯೊಂದಿಗೆ ಇಂದು ಇಡೀ ನಾಡು ದನಿಗೂಡಿಸಿದೆ. ಮಾತ್ರವಲ್ಲದೆ, ದೆಹಲಿ ರೈತ ಹೋರಾಟವನ್ನು ಮುನ್ನಡೆಸಿದ್ದ ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ನಾಯಕರಾದ ದರ್ಶನ್ ಪಾಲ್, ರಾಕೇಶ್‌ ಟಿಕಾಯತ್ ಸೇರಿದಂತೆ ದೇಶದ ನಾನಾ ಭಾಗಗಳಿಂದ ರೈತ ಮುಖಂಡರು ಬೆಂಗಳೂರಿಗೆ ಬಂದಿದ್ದು, ರೈತ ಹೋರಾಟದಲ್ಲಿ ಭಾಗಿಯಾಗಿದ್ದಾರೆ.

ಇಡೀ ದೇಶದ ರೈತರು, ಹೋರಾಟಗಾರರು ದೇವನಹಳ್ಳಿ ರೈತರ ಜೊತೆಗಿದ್ದಾರೆ. ರೈತರು ಭೂಮಿ ಕೊಡುವುದಿಲ್ಲ ಎಂದ ಮೇಲೆ ಅವರ ಭೂಮಿಯನ್ನು ಕಸಿದುಕೊಳ್ಳಲು ಸರ್ಕಾರಕ್ಕೆ ಯಾವುದೇ ಅಧಿಕಾರ ಇಲ್ಲ. ಒಂದು ವೇಳೆ, ಸಿದ್ದರಾಮಯ್ಯ ಅವರು ಸಭೆಯಲ್ಲಿ ರೈತಪರವಾದ ನಿರ್ಧಾರ ತೆಗೆದುಕೊಳ್ಳದಿದ್ದರೆ, ದೇಶದ ಎಲ್ಲ ಭಾಗಗಳ ರೈತರು ಬೆಂಗಳೂರಿಗೆ ಬರಲಿದ್ದಾರೆ. ದೇವನಹಳ್ಳಿ ರೈತರೊಂದಿಗೆ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ. ರೈತರ ಭೂಮಿ ಉಳಿಯುವವರೆಗೂ ಹೋರಾಟ ನಡೆಯಲಿದೆ ಎಂದು ರೈತ ನಾಯಕರು ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...