ವಿಶೇಷಚೇತನರಿಗೆ ಅಪಮಾನ: ಬ್ರಹ್ಮಾಂಡ ಗುರೂಜಿ ವಿರುದ್ಧ ದೂರು ದಾಖಲು

Date:

ವಿಶೇಷಚೇತನರನ್ನು ಕುರೂಪಿಗಳು, ಭಿಕ್ಷುಕರು ಎಂದು ಅವಹೇಳನ ಮಾಡಿರುವ ನರೇಂದ್ರ ಬಾಬು ಶರ್ಮಾ ಅಲಿಯಾಸ್ ಬ್ರಹ್ಮಾಂಡ ಗುರೂಜಿ ವಿರುದ್ಧ ದೂರು ದಾಖಲಾಗಿದೆ. ಆತನ ವಿರುದ್ಧ ಬೆಂಗಳೂರಿನ ಕಾಡುಗೋಡಿ ಪೊಲೀಸ್‌ ಠಾಣೆಯಲ್ಲಿ ವಿಶೇಷಚೇತನ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದಾರೆ.

ಖಾಸಗಿ ಸುದ್ದಿ ವಾಹಿನಿ ‘ಗ್ಯಾರಂಟಿ ನ್ಯೂಸ್‌’ನಲ್ಲಿ ಪ್ರತಿನಿತ್ಯ ಕಾರ್ಯಕ್ರಮ ನಡೆಸುವ ಬ್ರಹ್ಮಾಂಡ ಗುರೂಜಿ, ಮಹಾಲಯ ಅಮಾವಾಸ್ಯೆಯಂದು ಆಚರಿಸಲಾಗುವ ‘ಪಿತೃಪಕ್ಷ’ ಹಬ್ಬದ ಕುರಿತು ಸೆಪ್ಟೆಂಬರ್‌ 20ರ ಕಾರ್ಯಕ್ರಮದಲ್ಲಿ ಮಾತನಾಡಿದ್ದರು. ಈ ವೇಳೆ, “ಪಿತೃಪಕ್ಷದ ದಿನ ಯಾರೆಲ್ಲ ಮಾಂಸಾಹಾರವನ್ನು ತಮ್ಮ ಪಿತೃಗಳಿಗೆ ಎಡೆ ಇಡುತ್ತೀರಾ. ಆ ಮಾಂಸಾಹಾರದ ಎಡೆಯನ್ನು ನೀವೇ ತಿನ್ನಬಾರದು. ಅದ್ನು ಅಂಗವಿಕಲ, ಕುರೂಪಿ, ಭಿಕ್ಷುಕನಿಗೆ ಕೊಡಿ. ಯಾಕೆಂದರೆ, ನಿಮ್ಮ ಪಿತೃಗಳು ಅವರ ರೂಪದಲ್ಲಿ ಬಂದು ಎಡೆಯನ್ನ ತಿನ್ನುತ್ತಾರೆ” ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

ಮಾಂಸಾಹಾರವನ್ನು ಹೊಲಸು ಎಂದು ನೋಡುವ ಈ ಬ್ರಹ್ಮಾಂಡ ಗುರೂಪಿ ಮಾಂಸಾಹಾರ ತಿನ್ನುವವರಿಗೂ ಅವಮಾನಿಸಿದ್ದಾರೆ. ತನ್ನ ಮನದಲ್ಲಿರುವ ವಿಕೃತಿಯನ್ನು ಹೊರಹಾಕುವ ಮೂಲಕ ವಿಶೇಷಚೇತನರನ್ನೂ ಅಪಮಾನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆತನ ಮಾತುಗಳಿಂದ ನೊಂದ, ವಿಶೇ‍ಷಚೇತನ ಹರೀಶ್ ಎಂಬುವರು, ಬ್ರಹ್ಮಾಂಡ ಗೂರುಜಿ ಅಲಿಯಾಸ್ ನರೇಂದ್ರ ಬಾಬು ಶರ್ಮಾ ಮತ್ತು ಗ್ಯಾರಂಟಿ ನ್ಯೂಸ್‌ ಚಾನೆಲ್ ವಿರುದ್ಧ ದೂರು ದಾಖಲಿಸಿದ್ದಾರೆ.

“ಉತ್ತಮ ಸಂದೇಶಗಳನ್ನು ನೀಡಬೇಕಾದ ಗುರೂಜಿಗಳು ಮೌಡ್ಯತೆ ಬಿತ್ತಿ ಸಮಾಜದಲ್ಲಿ ಶಾಂತಿ ಹಾಳುಮಾಡುತ್ತಿದ್ದಾರೆ. ಹುಟ್ಟಿನಿಂದ ನಾನು ಅಂಗವೈಕಲ್ಯಕ್ಕೆ ತುತ್ತಾಗಿದ್ದೇನೆ. ಅದರೂ, ಸ್ವಾವಲಂಬನೆಯಿಂದ ಜೀವನ ಮಾಡುತ್ತಿದ್ದೇನೆ. ಮೃತಪಟ್ಟವರಿಗೆ ಇಡುವ ಪಿಂಡವನ್ನು ನಮ್ಮಂಥವರಿಗೆ ನೀಡುವಂತೆ ಹೇಳುವುದು ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹರೀಶ್‌ ಅವರ ದೂರಿನ ಆಧಾರದ ಮೇಲೆ ನರೇಂದ್ರ ಬಾಬು ಮತ್ತು ನ್ಯೂಸ್‌ ಚಾನೆಲ್ ವಿರುದ್ಧ ಎನ್‌ಸಿಆ‌ರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...