ಕಾಂಗ್ರೆಸ್‌ ಆನಂದ್‌ ಕುಮಾರ್‌ ಆಸ್ತಿ ವಿವರದಲ್ಲಿ ವಿಪರೀತ ಸುಳ್ಳು ಮಾಹಿತಿ : ಮೋಹನ್‌ ದಾಸರಿ ಆರೋಪ

Date:

  • ಆನಂದ್‌ ಕುಮಾರ್‌ ಅವರು ಒಟ್ಟು ₹30.04 ಲಕ್ಷ ಆಸ್ತಿ ಇರುವುದಾಗಿ ಘೋಷಿಸಿಕೊಂಡಿದ್ದಾರೆ
  • 2015ರಲ್ಲಿ ಯಾವುದೇ ಆದಾಯವಿಲ್ಲ ಎಂದಿದ್ದ ಅವರು ಈಗ ₹30 ಲಕ್ಷ ಆಸ್ತಿ ಘೋಷಿಸಿಕೊಂಡಿದ್ದಾರೆ

ಬೆಂಗಳೂರಿನ ಸಿ.ವಿ.ರಾಮನ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಮಾಜಿ ಕಾರ್ಪೊರೇಟರ್‌ ಆನಂದ್‌ ಕುಮಾರ್‌ ಅವರು ನಾಮಪತ್ರದಲ್ಲಿ ಹಲವು ತಪ್ಪು ಮಾಹಿತಿ ನೀಡಿದ್ದಾರೆ ಹಾಗೂ ಮಾಹಿತಿಗಳನ್ನು ಮುಚ್ಚಿಟ್ಟಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿಯ ಸಿ.ವಿ.ರಾಮನ್‌ ಕ್ಷೇತ್ರದ ಅಭ್ಯರ್ಥಿ ಮೋಹನ್‌ ದಾಸರಿ ಆರೋಪ ಮಾಡಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಆರೋಪಕ್ಕೆ ಸಂಬಂಧಿಸಿ ಹಲವು ದಾಖಲೆಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, “ಆನಂದ್‌ ಕುಮಾರ್‌ ಅವರು 2015ರಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ತಮಗೆ ಯಾವುದೇ ಆದಾಯವಿಲ್ಲವೆಂದು ಘೋಷಿಸಿಕೊಂಡಿದ್ದರು. ಆದರೆ, ಈ ಬಾರಿಯ ನಾಮಪತ್ರದಲ್ಲಿ, ಉಳಿತಾಯ ಖಾತೆಯಲ್ಲಿ ₹2.49 ಲಕ್ಷ, ನಗದು ರೂಪದಲ್ಲಿ ₹2.25 ಲಕ್ಷ ಹಾಗೂ ತಾಯಿಯ ಬಳಿ ₹8.8 ಲಕ್ಷ ಮೌಲ್ಯದ 160 ಗ್ರಾಂ ಚಿನ್ನವಿದೆ ಹಾಗೂ ಮಣಿಕಂಠನ್‌ ಎಂಬುವವರಿಗೆ ₹16.5 ಲಕ್ಷ ಸಾಲ ನೀಡಿರುವುದಾಗಿ ತಿಳಿಸಿದ್ದಾರೆ” ಎಂದರು.

“ಆನಂದ್‌ ಕುಮಾರ್‌ ಅವರು ಒಟ್ಟು ₹30.04 ಲಕ್ಷ ಆಸ್ತಿ ಇರುವುದಾಗಿ ಘೋಷಿಸಿಕೊಂಡಿದ್ದಾರೆ. ₹29.57 ಲಕ್ಷ ಆದಾಯವಿದೆಯೆಂದು ಐಟಿಆರ್‌ ಸಲ್ಲಿಸಿದ್ದಾರೆ. 2015ರಲ್ಲಿ ಯಾವುದೇ ಆದಾಯವಿಲ್ಲವೆಂದು ಹೇಳಿದ್ದ ಅವರು ಈಗ ₹30 ಲಕ್ಷ ಆಸ್ತಿ ಘೋಷಿಸಿಕೊಂಡಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2015ರ ಪ್ರಮಾಣಪತ್ರದಲ್ಲಿ 3ನೇ ತರಗತಿ ಪಾಸಾಗಿದೆ ಎಂದು ಹೇಳಿದ್ದರು. ಆದರೆ, ಈಗಿನ ಪ್ರಮಾಣಪತ್ರದಲ್ಲಿ ಎಂಟನೇ ತರಗತಿ ಎಂದು ಹೇಳಿದ್ದಾರೆ. ಅವರು ಸ್ವಂತ ಮನೆ ಕಟ್ಟಿಸುತ್ತಿರುವ ಬಗ್ಗೆ ಕ್ಷೇತ್ರದ ಜನತೆಗೆ ತಿಳಿದಿದೆ. ಆದರೆ, ಅದರ ಮಾಹಿತಿಯನ್ನು ಏಕೆ ನೀಡಿಲ್ಲ? ಆನಂದ್‌ ಕುಮಾರ್‌ ವಿರುದ್ಧ ಚುನಾವಣಾ ಆಯೋಗಕ್ಕೆ ಈಗಾಗಲೇ ಆಕ್ಷೇಪಣೆ ಸಲ್ಲಿಸಲಾಗಿದ್ದು, ಹೈಕೋರ್ಟ್‌ ಮೊರೆ ಹೋಗಲು ಕೂಡ ನಿರ್ಧರಿಸಿದ್ದೇವೆ” ಎಂದು ಮೋಹನ್‌ ದಾಸರಿ ತಿಳಿಸಿದರು.

“ಆನಂದ್‌ ಕುಮಾರ್‌ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣವಿದೆ. ಲೋಕಾಯುಕ್ತವು ಎಷ್ಟೇ ನೋಟಿಸ್‌ ಜಾರಿ ಮಾಡಿದರೂ ಇವರು ವಿಚಾರಣೆಗೆ ಹಾಜರಾಗಿಲ್ಲ. ಅದು ಎಸ್‌ಸಿ/ಎಸ್‌ಟಿ ಸಮುದಾಯದವರಿಗೆ ಸಂಬಂಧಿಸಿದ ಒಂಟಿ ಮನೆ ಯೋಜನೆಯಲ್ಲಾದ ₹8 ಕೋಟಿ ಮೊತ್ತದ ಭ್ರಷ್ಟಾಚಾರದ ಪ್ರಕರಣ. ಕಾನೂನುಗಳನ್ನು ಉಲ್ಲಂಘಿಸಿ ಒಂದೇ ಮನೆ ಮೇಲೆ ಹಲವು ಸಾಲ ಮಾಡಲಾಗಿದೆ ಹಾಗೂ ಅನರ್ಹರಿಗೂ ಮನೆ ನೀಡಲಾಗಿದೆ. ತಪ್ಪು ಮಾಡಿಲ್ಲ ಎನ್ನುವುದಾದರೆ ಲೋಕಾಯುಕ್ತಕ್ಕೆ ಹೋಗಲು ಹೆದರಿಕೆಯೇಕೆ?” ಎಂದು ಮೋಹನ್‌ ದಾಸರಿ ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೌಡಿಶೀಟರ್ ಮನೆಯಲ್ಲಿ 105 ಕೆಜಿ ಗಾಂಜಾ, ಮಾರಕಾಸ್ತ್ರ ವಶಪಡಿಸಿಕೊಂಡ ಪೊಲೀಸರು

ಎಎಪಿಯ ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್‌ ಕುಮಾರ್‌ ಮಾತನಾಡಿ, “ಲಿಂಗಾಯತ ಸಿಎಂ ವಿಚಾರದಲ್ಲಿ ಬಿಜೆಪಿ-ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಬಿಜೆಪಿಯು ಹಿರಿಯ ನಾಯಕರನ್ನೆಲ್ಲ ಕಡೆಗಣಿಸುತ್ತಿದೆ. ಲಕ್ಷ್ಮಣ ಸವದಿ, ಜಗದೀಶ್‌ ಶೆಟ್ಟರ್‌ ಈಗಾಗಲೇ ಬಿಜೆಪಿಯನ್ನು ತೊರೆದಿದ್ದಾರೆ. ಈಶ್ವರಪ್ಪನವರಿಗೆ ಟಿಕೆಟ್‌ ನೀಡಿಲ್ಲ. ಸೋಮಣ್ಣರವರನ್ನು ಹರಕೆಯ ಕುರಿ ಮಾಡಿ ಬೇರೆ ಎರಡು ಕ್ಷೇತ್ರಗಳಿಗೆ ಕಳುಹಿಸಿದ್ದಾರೆ. ಇದರಲ್ಲಿ ಸಂಘ ಪರಿವಾರದ ಹುನ್ನಾರ ಕಾರ್ಯರೂಪಕ್ಕೆ ಬರುತ್ತಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ. ಯಡಿಯೂರಪ್ಪನವರ ಮಕ್ಕಳಿಗೆ ಪ್ರಾತಿನಿಧ್ಯ ಸಿಕ್ಕಿದೆ. ಆದರೆ, ಈಶ್ವರಪ್ಪ, ಸೋಮಣ್ಣರವರ ಮಕ್ಕಳಿಗೆ ಸಿಕ್ಕಿಲ್ಲ. ಬಿಜೆಪಿಯು ಎಲ್ಲ ಸಮುದಾಯಗಳನ್ನು ಮೆಟ್ಟಿಲಾಗಿ ಬಳಸಿಕೊಂಡು, ಒಂದೊಂದೇ ಸಮುದಾಯಗಳನ್ನು ತಿರಸ್ಕಾರ ಮಾಡುತ್ತಿದೆ” ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಿ.ವಿ.ರಾಮನ್‌ ನಗರ ಕ್ಷೇತ್ರದ ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಲೋಕೇಶ್‌, ಮಂಜುನಾಥ್‌ ಗೌಡ, ಜಗದೀಶ್‌ ಬಾಬು ಮತ್ತಿತರರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...