ಬೆಂಗಳೂರಿನ ಗರುಡಾ ಮಾಲ್‌ ಬಳಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

Date:

ಅಶೋಕನಗರದ ಗರುಡಾ ಮಾಲ್ ಬಳಿ ತಡರಾತ್ರಿ 1 ಗಂಟೆ ಸುಮಾರಿಗೆ ಕಾಂಗ್ರೆಸ್​ ಮುಖಂಡರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯಾದವರನ್ನು ಹೈದರ್ ಅಲಿ ಎಂದು ಗುರುತಿಸಲಾಗಿದೆ.

ಹೈದರ್ ಅಲಿ ಅವರು ಶನಿವಾರ (ಫೆ.22) ರಾತ್ರಿ ಲೈವ್ ಬ್ಯಾಂಡ್​ ಕಾರ್ಯಕವೊಂದನ್ನು ಮುಗಿಸಿಕೊಂಡು ಸ್ನೇಹಿತನ ಜೊತೆಗೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್​ನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ತೀವ್ರವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಅಶೋಕ ನಗರ ಠಾಣೆ ಪೊಲೀಸರು ಗಾಯದ ಮಡುವಲ್ಲಿ ಬಿದ್ದ ಹೈದರ್ ಅಲಿಯನ್ನು ಕೂಡಲೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಅಷ್ಟರಲ್ಲಾಗಲೇ ಹೈದರ್ ಅಲಿ ಮೃತಪಟ್ಟಿದ್ದರು.
ವಿಚಾರ ತಿಳಿದು ಹೈದರ್​ ಅಲಿಯ ಬೆಂಬಲಿಗರು ಬೌರಿಂಗ್ ಆಸ್ಪತ್ರೆ ಬಳಿ ಜಮಾಯಿಸಿ ಮಾರಕಾಸ್ತ್ರಗಳನ್ನು ಹಿಡಿದು ಆಸ್ಪತ್ರೆ ಬಳಿ ದಾಂಧಲೆ ನಡೆಸಿದರು ಎನ್ನಲಾಗಿದೆ. ಸ್ಥಳದಲ್ಲಿದ್ದ ಅಶೋಕನಗರ ಠಾಣೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕೆ ದೇವರು ಬೇಕಿಲ್ಲ – ಇಚ್ಛಾಶಕ್ತಿ ಸಾಕು

ಘಟನೆ ಸಂಬಂಧ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಆರೋಪಿಗಳ ಪತ್ತೆಗೆ ಅಶೋಕನಗರ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಹೈದರ್ ಅಲಿ ಜೊತೆಯಲ್ಲಿದ್ದ ಸ್ನೇಹಿತನಿಗೂ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆನೆಪಾಳ್ಯ ನಿವಾಸಿಯಾಗಿರುವ ಹೈದರ್ ಅಲಿ ಕಾಂಗ್ರೆಸ್​ ಶಾಸಕ ಎನ್ ಎ ಹ್ಯಾರಿಸ್ ಜೊತೆ ಗುರುತಿಸಿಕೊಂಡಿದ್ದರು. ಚುನಾವಣೆ ಸಂದರ್ಭದಲ್ಲಿ ಎನ್​ ಎ ಹ್ಯಾರಿಸ್ ಪರ ಪ್ರಚಾರ ಮಾಡಿದ್ದರು ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಡಿಸಿಪಿ ಶೇಖರ್ ಮಾತನಾಡಿ, ತಡರಾತ್ರಿ 1 ಗಂಟೆ ವೇಳೆ ಫುಟ್ಬಾಲ್ ಸ್ಟೇಡಿಯಂ ಗೇಟ್ ಬಳಿ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿ ರೌಡಿಶೀಟರ್. ಹೈದರ್ ಅಲಿ ವಿರುದ್ಧ 11 ಪ್ರಕರಣಗಳಿವೆ. ಮಾರಣಾಂತಿಕ ಹಲ್ಲೆ, ಸಾಮಾನ್ಯ ಹಲ್ಲೆ, ಎನ್‌ಡಿಪಿಎಸ್‌ ಪ್ರಕರಣಗಳು ಇದೆ. ಹೈದರ್ ಅಶೋಕನಗರ ಪೊಲೀಸ್ ಠಾಣಾ ರೌಡಿಶೀಟರ್. 2016ರಿಂದ ರೌಡಿಶೀಟರ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...