ಸಂವಿಧಾನ ದಿನಾಚರಣೆ | ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

Date:

ಸಂವಿಧಾನ ದಿನಾಚರಣೆಯ ಅಂಗವಾಗಿ ಭಾನುವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು‌.

ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಸಂವಿಧಾನ ದಿನಾಚರಣೆಯ ಪ್ರಯುಕ್ತ ಬಿಬಿಎಂಪಿಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಭಾರತದ ಸಂವಿಧಾನ ಪ್ರಸ್ತಾವನೆ ಭಾಗವನ್ನು ಬೋಧಿಸಿದರು.

ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ.ಹರೀಶ್ ಕುಮಾರ್, ವಲಯ ಆಯುಕ್ತರಾದ ಸ್ನೇಹಲ್, ವಿನೋತ್ ಪ್ರಿಯಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂವಿಧಾನ

ಬಿಎಂಟಿಸಿ ಕೇಂದ್ರ ಕಛೇರಿಯಲ್ಲಿ ಸಂವಿಧಾನ ದಿನಾಚರಣೆ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ ಗುಣಮಟ್ಟದ ಸಮರ್ಪಕ ಸುರಕ್ಷಿತ ಸಾರಿಗೆ ಸೇವೆಯನ್ನು ಮಿತವ್ಯಯ ದರದಲ್ಲಿ ಒದಗಿಸುತ್ತಿದೆ. ನ.26 ಸಂವಿಧಾನ ದಿನಾಚರಣೆ ಅಂಗವಾಗಿ ಸಂಸ್ಥೆಯ ಕೇಂದ್ರ ಕಛೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ|| ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಿ ಸಂವಿಧಾನ ಪಿಠೀಕೆ ಓದಿದರು.

ಈ ವೇಳೆ, ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕಿ ಜಿ.ಸತ್ಯವತಿ”ಸಂವಿಧಾನ ತಜ್ಞರಿಂದ ಸಂವಿಧಾನದ ಕುರಿತು ಉಪನ್ಯಾಸ, ಸಂಸ್ಥೆಯ ಸಿಬ್ಬಂದಿಗೆ ಹಾಗೂ ಸಿಬ್ಬಂದಿ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಮುಂತಾದ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮುಂದಿನ ಪೀಳಿಗೆಗೆ ನಮ್ಮ ಹೆಮ್ಮೆಯ ಸಂವಿಧಾನದ ಬಗ್ಗೆ ಅರಿವು ಮೂಡಿಸಬಹುದಾಗಿದೆ” ಎಂದು ತಿಳಿಸಿದರು.

ನಿರ್ದೇಶಕಿ (ಭ&ಜಾ) ಕಲಾ ಕೃಷ್ಣಸ್ವಾಮಿ ಮಾತನಾಡಿ “ಸಂವಿಧಾನ ದಿನನಿತ್ಯ ಜೀವನದ ಒಂದು ಭಾಗ, ಅದನ್ನು ಸರಿಯಾಗಿ ಅಳವಡಿಸಿಕೊಂಡಲ್ಲಿ ಶ್ರೇಯೊಭಿವೃದ್ಧಿ ಸಾಧ್ಯ” ಎಂದು ತಿಳಿಸಿದರು.

ಈ ವೇಳೆ, ಎಲ್ಲ ಇಲಾಖಾ ಮುಖ್ಯಸ್ಥರು, ವಿಭಾಗೀಯ ನಿಯಂತ್ರಣಾಧಿಕಾರಿಗಳು, ಅಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪದಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಜೊತೆಯಾಗಿ ಭಾರತ ಸಂವಿಧಾನದ ಪೀಠಿಕೆಯನ್ನು ಓದಿದರು.

ಸಂವಿಧಾನ

 

ಸಂವಿಧಾನ

 

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...