ಆಗಸ್ಟ್‌ 15 ರಿಂದ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

Date:

77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿಎಲ್) ಮೆಟ್ರೋ ನಿಲ್ದಾಣಗಳಲ್ಲಿ ನಾಟಕ, ಲಾವಣಿಪದ ಸೇರಿದಂತೆ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನಿಗಮ, “ನಮ್ಮ ಮೆಟ್ರೋ ಬಣ್ಣದ ಬಳಗ ಯುವ ಮೌಲ್ಯ ಕಲಾ ವೇದಿಕೆ ವತಿಯಿಂದ ಕರ್ನಾಟಕದ ಗಾಂಧಿ ಎಂದು ಪ್ರಸಿದ್ಧರಾದ ‘ಹರ್ಡೇಕರ್ ಮಂಜಪ್ಪ’ ಅವರ ಜೀವನಾಧಾರಿತ ಎಲ್ಲಿಗೆ ಬಂತು – ಯಾರಿಗೆ ಬಂತು…? ನಾಟಕ, ಲಾವಣಿಪದಗಳು ಹಾಗೂ ದೇಶ ಭಕ್ತಿಗೀತೆ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಆ.15 ರಿಂದ ಆ.21ರವರೆಗೆ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಡೆಯಲಿವೆ” ಎಂದು ತಿಳಿಸಿದೆ.

ನಮ್ಮ ಮೆಟ್ರೋ ನಿಲ್ದಾಣದಲ್ಲಿ ಆಗಸ್ಟ್‌ 15 ರಿಂದ ಆಗಸ್ಟ್‌ 21ರವರೆಗೆ ಪ್ರತಿ ದಿನ ಸಾಯಂಕಾಲ 6:15 ರಿಂದ 7:15 ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಎಂಆರ್‌ಸಿಎಲ್

ಯಾವ ನಿಲ್ದಾಣದಲ್ಲಿ ಕಾರ್ಯಕ್ರಮ ನಡೆಯಲಿದೆ?

ಆಗಸ್ಟ್‌ 15 ಯಶವಂತಪುರ ಮೆಟ್ರೋ ನಿಲ್ದಾಣ

ಆಗಸ್ಟ್‌ 16 ಕೆ.ಆರ್.ಪುರಂ ಮೆಟ್ರೋ ನಿಲ್ದಾಣ

ಆಗಸ್ಟ್‌ 17 ಬನಶಂಕರಿ ಮೆಟ್ರೋ ನಿಲ್ದಾಣ

ಆಗಸ್ಟ್‌ 18 ವಿಜಯನಗರ ಮೆಟ್ರೋ ನಿಲ್ದಾಣ

ಆಗಸ್ಟ್‌ 19 ಮಹಾತ್ಮಗಾಂಧಿ ರಸ್ತೆ ಮೆಟ್ರೋ ನಿಲ್ದಾಣ

ಆಗಸ್ಟ್‌ 20 ಮೈಲಸಂದ್ರ ಮೆಟ್ರೋ ನಿಲ್ದಾಣ

ಆಗಸ್ಟ್‌ 21 ಕೆಂಪೇಗೌಡ ಮೆಟ್ರೋ ನಿಲ್ದಾಣ (ಮೆಜೆಸ್ಟಿಕ್)

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...