ಸೈಬರ್ ವಂಚನೆ | ₹15 ಸಾವಿರಕ್ಕೆ ಹಳೇ ಬೆಡ್ ಮಾರಲು ಹೋಗಿ ₹68 ಲಕ್ಷ ಕಳೆದುಕೊಂಡ ಸಾಫ್ಟ್‌ವೇರ್‌ ಉದ್ಯೋಗಿ

Date:

ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ದಿನಕ್ಕೊಂದು ಸೈಬರ್ ವಂಚನೆ ಪ್ರಕರಣಗಳು ನಡೆಯುತ್ತಲೇ ಇವೆ. ಬೆಂಗಳೂರು ನಗರ ಪೊಲೀಸ್ ಇಲಾಖೆ ಯಾವುದೇ ರೀತಿಯ ಓಟಿಪಿ ಹಂಚಿಕೊಳ್ಳದಂತೆ ಎಚ್ಚರಿಕೆ ನೀಡಿದ್ದರೂ ಸಹ ಇಂತಹ ಕೃತ್ಯಗಳಿಗೆ ಜನರು ಬಲಿಯಾಗುತ್ತಿದ್ದಾರೆ. ಇದೀಗ, ಓಎಲ್‌ಎಕ್ಸ್‌ನಲ್ಲಿ ₹15 ಸಾವಿರಕ್ಕೆ ತಮ್ಮ ಹಳೆಯ ಬೆಡ್ ಮಾರಾಟ ಮಾಡಲು ಹೋಗಿ ವ್ಯಕ್ತಿಯೊಬ್ಬರು ಬರೋಬ್ಬರಿ ₹68 ಲಕ್ಷ ಕಳೆದುಕೊಂಡ ಪ್ರಕರಣ ವರದಿಯಾಗಿದೆ.

ಸಂತೋಷ್ (ಹೆಸರು ಬದಲಾಯಿಸಲಾಗಿದೆ) ಹಣ ಕಳೆದುಕೊಂಡವರು. ಇವರು ಬೆಂಗಳೂರಿನ ಖಾಸಗಿ ಸಾಫ್ಟ್‌ವೇರ್‌ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ನೆಲೆಸಿದ್ದಾರೆ.

ಇವರು ತಮ್ಮ ಹಳೆಯ ಬೆಡ್‌ ಮಾರಾಟ ಮಾಡಲು ಮುಂದಾಗಿದ್ದರು. ಈ ಹಿನ್ನೆಲೆ, ಕೆಲವು ಫೋಟೋಗಳ ಸಮೇತ ₹15 ಸಾವಿರಕ್ಕೆ ಓಎಲ್‌ಎಕ್ಸ್‌ನಲ್ಲಿ ಮಾರಾಟಕ್ಕೆ ಇಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಕಂಡ ರೋಹಿತ್ ಮಿಶ್ರಾ ಎಂಬ ವ್ಯಕ್ತಿ ಡಿಸೆಂಬರ್ 6ರಂದು ಸಾಯಂಕಾಲ 7 ಗಂಟೆ ಸುಮಾರಿಗೆ ಸಂತೋಷ್ ಅವರಿಗೆ ಕರೆ ಮಾಡಿ ಬೆಡ್‌ ತೆಗೆದುಕೊಳ್ಳುವ ಬಗ್ಗೆ ವಿಚಾರಿಸುತ್ತಾನೆ ಹಾಗೂ ಇಂದಿರಾನಗರದಲ್ಲಿ ತನ್ನದು ಫರ್ನಿಚರ್ ಮಳಿಗೆ ಎಂದು ಹೇಳಿಕೊಂಡಿದ್ದಾನೆ.

ಬೆಡ್‌ ಖರೀದಿಸುತ್ತೇನೆ ಎಂದು ಹೇಳಿದ ಈತ ಡಿಜಿಟಲ್‌ ಮೂಲಕ ಹಣ ಪಾವತಿ ಮಾಡುತ್ತೇನೆ ಎಂದು ಹೇಳಿದ್ದಾನೆ. ಸ್ವಲ್ಪ ಸಮಯದ ಬಳಿಕ ಕರೆ ಮಾಡಿ ನಿಮಗೆ ಹಣ ಪಾವತಿಯಾಗುತ್ತಿಲ್ಲ. ಹಾಗಾಗಿ, ನಿಮ್ಮ ಖಾತೆಯಿಂದ ₹5 ಕಳಿಸಿ, ಅದಕ್ಕೆ ನಾನು ಹಣ ಹಾಕುತ್ತೇನೆ ಎಂದು ಹೇಳಿದ್ದಾನೆ.

ಇದನ್ನು ನಂಬಿದ ಸಂತೋಷ್ ಆತನಿಗೆ ₹5 ಕಳಿಸಿದ್ದಾನೆ. ಆ ಕಡೆಯಿಂದ ಆತ ಪ್ರತಿಯಾಗಿ ₹10 ಕಳಿಸಿದ್ದಾನೆ. ಮತ್ತೆ ಹಣ ಕಳಿಸಲು ತೊಂದರೆಯಾಗುತ್ತಿದೆ ಎಂದು ತಿಳಿಸಿದ ಆತ ₹5000 ಕಳಿಸುವಂತೆ ಕೇಳಿದ್ದಾನೆ. ಅದರಂತೆ ಹಣ ಕಳಿಸಿದ ಸಂತೋಷ್‌ನಿಗೆ ಆತ ಪ್ರತಿಯಾಗಿ ₹10,000 ಕಳಿಸಿದ್ದಾನೆ. ಬಳಿಕ ₹7500 ಕಳಿಸಿದರೆ ₹15,000 ಕಳಿಸುವುದಾಗಿ ಹೇಳಿದ್ದಾನೆ. ಅದರಂತೆ ಸಂತೋಷ್ ₹7,500 ಕಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಾಮಾನ್ಯ ಸ್ಥಿತಿಗೆ ಮರಳಿದ ಹಸಿರು ಮಾರ್ಗದ ಮೆಟ್ರೋ ಸಂಚಾರ

ಈ ವೇಳೆ ತಪ್ಪಿ ಸಂತೋಷ್ ₹30,000 ಸಾವಿರ ಕಳುಹಿಸಿದ್ದಾರೆ. ಈ ಬಗ್ಗೆ ಮಿಶ್ರಾಗೆ ತಿಳಿಸುತ್ತಾರೆ. ಇದಕ್ಕೆ ಮಿಶ್ರಾ ತಾನು ಕಳಿಸುವ ಲಿಂಕ್ ಕ್ಲಿಕ್ ಮಾಡಿ ತನಗೆ ಒಟಿಪಿ ಕಳಿಸಿ ಎಂದು ಸಂತೋಷ್‌ಗೆ ಹೇಳಿದ್ದಾನೆ.

ಅದನ್ನು ನಂಬಿದ ಸಂತೋಷ್ ಆತ ಹೇಳಿದಂತೆ ನಡೆದುಕೊಂಡಿದ್ದಾನೆ. ಇದಾದ ಬಳಿಕ ತಾಂತ್ರಿಕ ದೋಷ ಎಂಬ ನೆಪ ಹೇಳಿ ಮಿಶ್ರಾ ಲಿಂಕ್‌ ಕಳಿಸಿ ಒಟಿಪಿ ಕೇಳಿದ್ದಾನೆ. ಇದರಿಂದ ಸಂತೋಷ್ ಹಂತಹಂತವಾಗಿ ತನ್ನ ಖಾತೆಯಿಂದ ಹಣ ಕಳೆದುಕೊಂಡಿದ್ದಾರೆ.

ಮೊದಮೊದಲು ಸಾವಿರ ಲೆಕ್ಕದಲ್ಲಿ ಲಪಟಾಯಿಸುತ್ತಿದ್ದ ಹಣ, ಬಳಿಕ ಲಕ್ಷಾಂತರ ಹಣವನ್ನು ಆತ ಪೀಕಲು ಆರಂಭಿಸಿದ್ದನು. ಬಳಿಕ ಸಂತೋಷ್‌ಗೆ ತಾನು ಮೋಸ ಹೋಗಿರುವುದು ತಿಳಿದುಬಂದಿದೆ. ಅಂತಿಮವಾಗಿ ಸಂತೋಷ್‌ ₹68 ಲಕ್ಷ ಕಳೆದುಕೊಂಡಿದ್ದಾರೆ.

ಐಎಂಪಿಎಸ್ ಟ್ಪಾನ್ಸ್ ಫರ್ ಮೂಲಕ ಸೈಬರ್ ಕಳ್ಳ ಹಣ ಲಪಟಾಯಿಸುತ್ತಿದ್ದನು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...