ಆ್ಯಪ್‌ ಮೂಲಕ ಸಾಲ, ಅಶ್ಲೀಲ ಫೋಟೋ ಬೆದರಿಕೆ, 45 ಲಕ್ಷ ಕಳೆದುಕೊಂಡ ಬಿಜೆಪಿ ಮುಖಂಡನ ಪುತ್ರ

Date:

ಬಿಜೆಪಿ ಮುಖಂಡನ ಪುತ್ರನೊಬ್ಬ ತ್ವರಿತವಾಗಿ ಸಾಲ ನೀಡುವ ಆ್ಯಪ್‌ ಜಾಲಕ್ಕೆ ಸಿಲುಕಿ ಬರೋಬ್ಬರಿ ₹45 ಲಕ್ಷ ಕಳೆದುಕೊಂಡಿದ್ದಾರೆ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಿಜೆಪಿ ಮುಖಂಡನ ಪುತ್ರ ಹರೀಶ್ (ಹೆಸರು ಬದಲಾಯಿಸಲಾಗಿದೆ) ವಂಚನೆಗೆ ಒಳಗಾದವರು. ಕೆಲ ತಿಂಗಳ ಹಿಂದೆ ಹರೀಶ್ ಆ್ಯಪ್‌ವೊಂದರ ಮೂಲಕ ತ್ವರಿತವಾಗಿ ₹6 ಲಕ್ಷ ಹಣ ಪಡೆದಿದ್ದರು. ಈ ವೇಳೆ, ಆ್ಯಪ್‌ನಲ್ಲಿ ಭಾವಚಿತ್ರ, ದೂರವಾಣಿ ಸಂಖ್ಯೆ ಹಾಗೂ ಇನ್ನಿತರ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಸಾಲ ತೆಗೆದುಕೊಂಡ ಒಂದೆರಡು ದಿನಗಳ ಬಳಿಕ ಹರೀಶ್ ಅವರಿಗೆ ಆ್ಯಪ್ ವಂಚಕರು ಸಾಲದ ಮೊತ್ತದ ಜತೆಗೆ ಬಡ್ಡಿಯನ್ನು ವಾಪಸ್ ನೀಡುವಂತೆ ಸತತವಾಗಿ ಕಿರುಕುಳ ನೀಡಿದ್ದಾರೆ. ಹರೀಶ್ ಅವರು ಸಂಪೂರ್ಣವಾಗಿ ಬಡ್ಡಿಯನ್ನು ತುಂಬಿದರೂ ಸಹ ಆ್ಯಪ್ ವಂಚಕರು ದಿನದಿಂದ ದಿನಕ್ಕೆ ಬಡ್ಡಿಯನ್ನು ಹೆಚ್ಚಿಸುತ್ತಲೇ ಇದ್ದರು. ಸಾಲದ ಮೊತ್ತ ಪೂರ್ಣವಾಗಿಲ್ಲ ಎಂದು ಹೆಚ್ಚಿನ ಹಣ ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಅಧಿಕ ಹಣವನ್ನು ಹರೀಶ್ ಅವರು ಕೊಡಲು ನಿರಾಕರಿಸಿದಾಗ ಅವರ ನಗ್ನ ಫೋಟೋಗಳನ್ನು ಅವರ ಸಂಪರ್ಕಕ್ಕೆ ಇರುವ ವ್ಯಕ್ತಿಗಳಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೇ, ಈ ಬೆದರಿಕೆಗೆ ಸ್ಯಾಂಪಲ್ ಎಂಬಂತೆ ಹರೀಶ್ ಅವರ ಚಿತ್ರವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಅವರಿಗೆ ಕಳುಹಿಸಿದ್ದಾರೆ.

ಇದರಿಂದ ಬೇಸತ್ತ ಹರೀಶ್ ಅವರು ಸಾಲ ಪಡೆದ ₹6 ಲಕ್ಷಕ್ಕೆ ಬರೋಬ್ಬರಿ ₹45 ಲಕ್ಷ ಆ್ಯಪ್ ವಂಚಕರಿಗೆ ನೀಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ವಂಚಕರು ಪದೇಪದೆ ಹರೀಶ್ ಅವರಿಗೆ ಅವರ ಪತ್ನಿ ಹಾಗೂ ಅವರ ಮಗಳಿಗೆ ಕರೆ ಮಾಡಿ ಕಿರುಕುಳ ನೀಡಿದ್ದಾರೆ. ಅವರು ಕಾಲ್ ತೆಗೆಯದೇ ಇದ್ದಾಗ ವಂಚಕರು ಅಪರಿಚಿತ ನಂಬರ್‌ಗಳಿಂದ ಕರೆ ಮಾಡಿ ‘ಮೇಕ್ ಮನಿ’ ಅಪ್ಲಿಕೇಶನ್​ ನಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದಾರೆ. ಇನ್ನು ಹರೀಶ್ ಅವರ ತಂದೆಯ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ಇಬ್ಬರು ಮಹಿಳೆಯರ ಭಾವಚಿತ್ರಗಳನ್ನು ಅಶ್ಲೀಲವಾಗಿ ಎಡಿಟ್​ ಮಾಡಿ ಅಪ್‌ಲೋಡ್ ಮಾಡಿದ್ದಾರೆ.

ಈ ಬಗ್ಗೆ ಹರೀಶ್ ಅವರ ಚಿಕ್ಕಪ್ಪ, “ಹರೀಶ್‌ನಿಂದ ಸುಮಾರು ₹45 ಲಕ್ಷ ಸುಲಿಗೆ ಮಾಡಿದರೂ ಹೆಚ್ಚಿನ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದರು. ಸಾಲ ಮನ್ನಾ ಮಾಡಿದರೂ ಮೇಕ್ ಮನಿ ಸಿಬ್ಬಂದಿ ಕಿರುಕುಳ ನೀಡಿದ್ದಾರೆ. ಹರೀಶ್ ಈ ಕಿರುಕುಳದಿಂದ ಮಾನಸಿಕವಾಗಿ ನೊಂದಿದ್ದಾರೆ. ಇದರಿಂದ ಆತ್ಮಹತ್ಯೆ ಮಾಡಿಕೊಳ್ಳಲು ಸಹ ಪ್ರಯತ್ನಿಸಿದ್ದಾರೆ. ಕಳೆದ 18 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಂಚಕರು ಸ್ಥಳೀಯ ಮತ್ತು ವಿದೇಶಿ ಸೇರಿದಂತೆ ಹಲವು ಸಂಖ್ಯೆಗಳಿಂದ ಫೋನ್ ಕರೆಗಳನ್ನು ಮಾಡುತ್ತಿದ್ದಾರೆ. ಹಿಂದಿಯಲ್ಲಿ ಬೆದರಿಕೆ ಹಾಕುತ್ತಿದ್ದಾರೆ” ಎಂದು ಈಶಾನ್ಯ ಸಿಇಎನ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನ.3 ರಂದು ಬೆಳ್ಳಂಬೆಳಗ್ಗೆ ಬಿಲ್ಡರ್ಸ್‌ ಮನೆಗಳ ಮೇಲೆ ಐಟಿ ದಾಳಿ

“ಹರೀಶ್ ಅವರ ತಂದೆಯ ಹೆಸರಿನಲ್ಲಿ ತೆರೆಯಲಾದ ನಕಲಿ ಫೇಸ್ ಬುಕ್ ಖಾತೆಯನ್ನು ಬ್ಲಾಕ್ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಹರೀಶ್ ಮತ್ತು ಅವರ ಕುಟುಂಬ ಸದಸ್ಯರಿಗೆ ಪಾಕಿಸ್ತಾನ ಮತ್ತು ಯುಎಇಯಿಂದ ಫೋನ್ ಕರೆ ಬಂದಿವೆ. ಇನ್ನುಳಿದವು ಸ್ಥಳೀಯ ಸಂಖ್ಯೆಗಳಿಂದ ಬಂದಿವೆ. ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಇತರ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನು ಸೈಬರ್ ಜಾಲದ ವಂಚನೆಯ ಬಗ್ಗೆ ಬೆಂಗಳೂರು ನಗರ ಪೊಲೀಸರು ಮಾಹಿತಿಯನ್ನು ಒಳಗೊಂಡ ಪೋಸ್ಟರ್, ಸಭೆ ಸೇರಿದಂತೆ ಸಾರ್ವಜನಿಕರಲ್ಲಿ ಸೈಬರ್ ವಂಚನೆಯ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಜತೆಗೆ ಸಾರ್ವಜನಿಕರು ಈ ಆ್ಯಪ್‌ ಮೂಲಕ ತ್ವರಿತವಾಗಿ ಸಿಗುವ ಸಾಲದ ಆಸೆಗೆ ಬೀಳಬೇಡಿ ಎಂದು ಮನವಿ ಮಾಡಿದ್ದಾರೆ. ಆದರೂ ಇಂತಹ ಸೈಬರ್ ವಂಚನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಒಂದೊಂದು ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...