ಬೆಂಗಳೂರು ಹಾಲು ಒಕ್ಕೂಟದ (ಬಮುಲ್) ನಿರ್ದೇಶಕರಾಗಿ ಡಿ.ಕೆ.ಸುರೇಶ್ ಅವಿರೋಧ ಆಯ್ಕೆ

Date:

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರ ಮತ್ತು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಕನಕಪುರದಿಂದ ಬಮುಲ್ (ಬೆಂಗಳೂರು ಹಾಲು ಒಕ್ಕೂಟ ಲಿಮಿಟೆಡ್) ನಿರ್ದೇಶಕರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಬಮುಲ್ (ಬೆಂಗಳೂರು ಹಾಲು ಒಕ್ಕೂಟ ಲಿಮಿಟೆಡ್) ನಿರ್ದೇಶಕ ಸ್ಥಾನಕ್ಕೆ ಡಿಕೆ.ಸುರೇಶ್ ಅವರು ಶನಿವಾರ ನಾಮಪತ್ರ ಸಲ್ಲಿಸಿದ್ದರು. ಇತರರ ಆಕಾಂಕ್ಷಿಗಳು ಸಲ್ಲಿಸಿದ ನಾಮಪತ್ರಗಳು ಅಮಾನ್ಯವಾಗಿದ್ದ ಹಿನ್ನೆಲೆಯಲ್ಲಿ ಸುರೇಶ್ ಅವರು ಅವಿರೋಧ ಆಯ್ಕೆಯಾಗಿದ್ದಾರೆ. ಬಮುಲ್ ನಿರ್ದೇಶಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸುರೇಶ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದರು.

ಬಮುಲ್ ನಿರ್ದೇಶಕರಾಗಿ ಸುರೇಶ್ ಅವರು ಆಯ್ಕೆಯಾಗಿರುವುದು ಕರ್ನಾಟಕ ಹಾಲು ಸಹಕಾರಿ ಕ್ಷೇತ್ರದ ಮೇಲೆ ಹಿಡಿತ ಸಾಧಿಸಲು, ಕೆಎಂಎಫ್ ಅಧ್ಯಕ್ಷರಾಗಲು ಒಂದು ಮೆಟ್ಟಿಲು ಮುಂದೆ ಸಾಗಿದಂತಾಗಿದೆ. ಇದೀಗ ಅಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿರುವ ಸುರೇಶ್ ಅವರು, ಬೆಂಬಲ ಪಡೆಯುವ ಸಲುವಾಗಿ ವಿವಿಧ ತಾಲ್ಲೂಕುಗಳಿಂದ ತಮ್ಮ ಬೆಂಬಲಿಗರನ್ನು ನಿರ್ದೇಶಕರನ್ನಾಗಿ ಮಾಡುವತ್ತ ಗಮನಹರಿಸುವ ಸಾಧ್ಯತೆ ಹೆಚ್ಚಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಭೀಮಾ ನಾಯಕ್ ಕೂಡ ಈ ಹುದ್ದೆಗೆ ಸ್ಪರ್ಧೆಯಲ್ಲಿದ್ದಾರೆ. ಬಳ್ಳಾರಿಯಿಂದ ನಿರ್ದೇಶಕ ಹುದ್ದೆಗೆ ಸ್ಪರ್ಧಿಸುವುದಾಗಿ ಭೀಮಾ ನಾಯಕ್‌ ಹೇಳಿದ್ದು, ಇಲ್ಲಿಯೂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಬಣದ ನಡುವೆ ಜಿದ್ದಾಜಿದ್ದಿ ಎದುರಾಗುವ ಸಾಧ್ಯತೆ ಇದೆ. ಹೈಕೋರ್ಟ್ ತೀರ್ಪಿನ ಬಳಿಕ ಸದ್ಯದಲ್ಲೇ ಚುನಾವಣೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...