ದಲಿತರು ಉದ್ಯಮಿಗಳಾಗಲು ಇರುವ ದಾರಿಗಳನ್ನು ಶೋಧಿಸಬೇಕು : ಡಾ. ರಾಜಾ ನಾಯಕ್‌

Date:

ದಲಿತರು ಉದ್ಯಮಿಗಳಾಗಲು ಶ್ರಮವಹಿಸಿ ಕೆಲಸ ಮಾಡಬೇಕು. ನಾವು ಮಾಡುವ ಉತ್ಪಾದಕ ವಸ್ತುಗಳು ಹೆಚ್ಚು ಗುಣಮಟ್ಟದ್ದಾಗ ಮಾತ್ರ ನಮ್ಮ ಬೆಳವಣಿಗೆ ಉತ್ತಮವಾಗಿರುತ್ತದೆ ಎಂದು ದಲಿತ್‌ ಇಂಡಿಯನ್‌ ಚೇಂಬರ್‌ ಆಫ್‌ ಕಾಮರ್ಸ್‌ ಅಂಡ್‌ ಇಂಡಸ್ಟ್ರಿಯ(DICCI) ಬುಡಕಟ್ಟು ವಿಭಾಗದ ರಾಷ್ಟ್ರ ಉಪಾಧ್ಯಕ್ಷರಾದ ಡಾ. ರಾಜಾ ನಾಯಕ್‌ ಹೇಳಿದರು.

ದಲಿತ್‌ ಇಂಡಿಯನ್‌ ಚೇಂಬರ್‌ ಆಫ್‌ ಕಾಮರ್ಸ್‌ ಅಂಡ್‌ ಇಂಡಸ್ಟ್ರಿ(DICCI) ಕರ್ನಾಟಕ ಅಧ್ಯಾಯ – ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಉದ್ಯಮ ಜಾಗೃತಿ ಮತ್ತು ಮಹಿಳಾ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತಾ, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಜನರು ಉದ್ಯಮಿಗಳಾಗಲು ಶ್ರಮಿಸಬೇಕು. ಯಾವುದೇ ಒಂದು ಉದ್ಯಮವನ್ನು ಪ್ರಾರಂಭ ಮಾಡಬೇಕಾದರೆ ಅದಕ್ಕೆ ಸಂಪೂರ್ಣ ಗಮನವನ್ನು ನೀಡಬೇಕು. ನಮ್ಮ ಡಿಕ್ಕಿ ಸಂಸ್ಥೆ ದೊಡ್ಡ ದೊಡ್ಡ ಕನಸುಗಳನ್ನು ಕಾಣುವಂತೆ ಪ್ರೇರಿಪಿಸುತ್ತದೆ. ನಮಗೆ ನಾವು ಆರ್ಥಿಕವ್ಯಕ್ತಿತ್ವ, ಆರ್ಥಿಕ ಶಿಸ್ತುಗಳನ್ನು ರೂಢಿಸಿಕೊಳ್ಳಬೇಕು. ಕೇವಲ ಕೆಲಸಗಾರರಾಗಿ ದುಡಿಯುವುದಷ್ಟೇ ಅಲ್ಲ ಕೆಲಸಕೊಡುವವರನ್ನು ರೂಪಿಸಬೇಕು ಎಂಬುದು ನಮ್ಮ ಧ್ಯೇಯವಾಗಿದೆ” ಎಂದರು.

ಇದನ್ನು ಓದಿದ್ದೀರಾ? ಯುದ್ಧ ವರದಿ | ಇರಾನ್ ಮೇಲೆ ದಾಳಿ; ಭಾರತೀಯರಿಗೆ ಸಹಾಯವಾಣಿ ಬಿಡುಗಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉದ್ಯಮಿಗಳಾಗಲು ಮುಂದೆ ಬಂದವರಿಗೆ ಉತ್ತಮ ಮಾರ್ಗದರ್ಶನವನ್ನು ನಮ್ಮ ಸಂಸ್ಥೆ ನೀಡುತ್ತದೆ. ಈ ಅವಕಾಶವನ್ನು ತಾವು ಬಳಸಿಕೊಳ್ಳಬೇಕು ಎಂದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಡಿಯಲ್ಲಿ ಉದ್ಯಮಿಗಳಾಗುವ ಕನಸು ಕಾಣುವವರಿಗೆ ಸಾಕಷ್ಟು ಅವಕಾಶಗಳಿವೆ ಅವುಗಳನ್ನು ಹೆಚ್ಚು ಸಕಾರಾತ್ಮಕವಾಗಿ ಬಳಸಿಕೊಳ್ಳಬೇಕು” ಎಂದು ತಿಳಿಸಿದರು.

ಕರ್ನಾಟಕ ಅಧ್ಯಾಯದ ಅಧ್ಯಕ್ಷರಾದ ಸಿ. ನರಸಿಂಹಮೂರ್ತಿಯವರು ಮಾತನಾಡಿ, “ನಾವೆಲ್ಲ ತುಂಬಾ ಕಷ್ಟಪಟ್ಟು ಈ ಹಂತಕ್ಕೆ ಬಂದಿದ್ದೇವೆ. ಈ ಹಿಂದೆ ಇದ್ದ ಪದಾಧಿಕಾರಿಗಳು ಈಗ ಇರುವವರು ಎಲ್ಲಾರೂ ಒಂದು ಕುಟುಂಬದಂತೆ ಸಂಘವನ್ನು ಮುನ್ನಡೆಸುತ್ತಿದ್ದೇವೆ ನೀವು ನಮ್ಮ ಜೊತೆ ಸೇರಿ ಹೊಸ ಉದ್ಯಮಿಗಳಾಗಿ ಹೊರ ಹೊಮ್ಮಬೇಕು” ಎಂದರು.

ಮಾಜಿ ಅಧ್ಯಕ್ಷ್ಯರಾದ ಉದ್ಯಮಿ ಬೆಳ್ಳಿ ಗಂಗಾಧರ್‌ ಮಾತನಾಡಿ, “ಡಿಕ್ಕಿ ಸಂಸ್ಥೆ ದೊಡ್ಡ ದೊಡ್ಡ ಕನಸುಗಳು ಕಾಣುವಂತೆ ಹಾಗೂ ದೊಡ್ಡ ದೊಡ್ಡ ಯೋಚನೆಗಳನ್ನು ಮಾಡುವಂತೆ ಮಾಡುತ್ತದೆ. ಇದು ನಮ್ಮಲ್ಲಿ ಮುಖ್ಯವಾಗಿ ಆಗಬೇಕಿರುವುದು. ಮಾಡುವ ಕೇಲಸದ ಬಗ್ಗೆ ಪ್ರೀತಿ ಮತ್ತು ಗೌರವ ಇದ್ದರೆ ಉತ್ತಮವಾದ ಪಲಿತಾಂಶ ಬರುತ್ತದೆ. ನೀವೆಲ್ಲರು ಅಧ್ಯಯನ ಶೀಲರಾಗಿ ಮತ್ತು ಉದ್ಯಮಿಗಳಾಗಬೇಕು” ಎಂದು ಹೇಳಿದರು.

ದಾವಣಗೆರೆ ಜಿಲ್ಲಾಧ್ಯಕ್ಷರಾದ ಮಂಜುನಾಥ್‌ ಕಬ್ಬೂರುರವರು ಮಾತನಾಡಿ, “ಡಿಕ್ಕಿ ಬೆಂಬಲದಿಂದ ಸಾಕಷ್ಟು ಜನ ಉದ್ಯಮಿಗಳಾಗಿ ರೂಪುಗೊಂಡಿದ್ದಾರೆ. ನಾನು ಸಹ ಸೊನ್ನೆಯಿಂದ ಮೇಲೆದ್ದು ಬರಲು ಈ ಸಂಸ್ಥೆಯ ಮಾರ್ಗದರ್ಶನವಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಯುವಜನರಿಗೆ ಮಾರ್ಗದರ್ಶನದ ಕೊರತೆ ಇದೆ ಹಾಗಾಗಿ ಪ್ರಸ್ತುತ ಇರುವ ಅವಕಾಶಗಳ ಬಗ್ಗೆಯೂ ಮಾರ್ಗದರ್ಶನ ಇರುವುದಿಲ್ಲ. ನಾವು ಸಹ ನಮ್ಮ ಜಿಲ್ಲಾ ಕೇಂದ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ಮಾರ್ಗದರ್ಶನವನ್ನು ನೀಡುವ ಕಾರ್ಯಗಾರಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ. ಅವು ಯಶಸ್ವಿ ಆಗುತ್ತಿವೆ” ಎಂದು ತಿಳಿಸಿದರು.

ಇದೇ ತಿಂಗಳಲ್ಲಿ ಡಿಕ್ಕಿ ಸಂಸ್ಥೆ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಹೊಸ ಯುವ ಮಹಿಳಾ ಉದ್ಯಮಿಗಳಿಗೆ ಮಾರ್ಗದರ್ಶನ ಮತ್ತು ತರಬೇತಿಯ ಕಾರ್ಯಕ್ರಮ ಹಮ್ಮಿಕೊಂಡಿರುವ ಬಗ್ಗೆ ತಿಳಿಸಲಾಯಿತು. ಈ ಜಾಗೃತಿ ಕಾರ್ಯಗಾರದಲ್ಲಿ ಬೆಂಗಳೂರು ನಗರ ಅಧ್ಯಕ್ಷ ಪ್ರಕಾಶ್‌, ಉದ್ಯಮಿ ರವಿ ಹಾಗೂ ಇತರೆ ಪಧಾದಿಕಾರಿಗಳು ಭಾಗವಹಿಸಿ ತಮ್ಮ ಅನುಭವಗಳನ್ನು ಹಂಚಿಕೊಂಡರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...