ದಾಸಪ್ಪ ಹೆರಿಗೆ ಆಸ್ಪತ್ರೆ | ಉಚಿತ ಫಿಸಿಯೋಥೆರಪಿ ಕೇಂದ್ರ ಪ್ರಾರಂಭಿಸಲು ನವೀಕರಣ ಪ್ರಕ್ರಿಯೆ

Date:

ದಾಸಪ್ಪ ಹೆರಿಗೆ ಆಸ್ಪತ್ರೆಯ ಪಾಲಿಕ್ಲಿನಿಕ್ ವಿಭಾಗದ ಕಟ್ಟಡದಲ್ಲಿ ಉಚಿತ ಫಿಸಿಯೋಥೆರಪಿ ಕೇಂದ್ರ ಪ್ರಾರಂಭಿಸಲು ನವೀಕರಣ ಪ್ರಕ್ರಿಯೆಯನ್ನು ನಡೆಸಲಾಗುತ್ತಿದ್ದು, ಮುಂದಿನ 15 ದಿನಗಳಲ್ಲಿ ಎಲ್ಲ ಕೆಲಸವನ್ನು ಪೂರ್ಣಗೊಳಿಸಿ ರೋಗಿಗಳಿಗೆ ಫಿಸಿಯೋಥೆರಪಿ ಸೇವೆಯನ್ನು ಪ್ರಾರಂಭಿಸಲು ಬಿಬಿಎಂಪಿ ದಕ್ಷಿಣ ವಲಯ ಆಯುಕ್ತ ಜಯರಾಮ್ ರಾಯಪುರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು‌.

ದಾಸಪ್ಪ ಹೆರಿಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, “ಪಾಲಿಕ್ಲಿನಿಕ್ ವಿಭಾಗದ ಕಟ್ಟಡದಲ್ಲಿ ಉಚಿತ ಫಿಸಿಯೋಥೆರಪಿ ಕೇಂದ್ರವನ್ನು ಪಾಲಿಕೆ, ಎಪಿಡಿ, ಕೆ.ಎಸ್‌.ಡಿ.ಸಿ.ಎಫ್ ಸೇರಿ ತ್ರಿಪಕ್ಷ ಒಪ್ಪಂದದಲ್ಲಿ ಪ್ರಾರಂಭಿಸಲಾಗುತ್ತಿದೆ. ಇದರಿಂದ ನಗರದ ಎಲ್ಲ ನಾಗರಿಕರಿಗೂ ಅನುಕೂಲವಾಗಲಿದೆ” ಎಂದು ತಿಳಿಸಿದರು.

ಫಿಜಿಯೋಥೆರಪಿ ಕೇಂದ್ರದ ಅವಶ್ಯಕತೆಗಳ ಬಗ್ಗೆ ಎಪಿಡಿ ಸಂಸ್ಥೆ ಅವರೊಂದಿಗೆ ಆಯುಕ್ತರು ಚರ್ಚಿಸಿದರು. ದಾಸಪ್ಪ ಹೆರಿಗೆ ಆಸ್ಪತ್ರೆಯಲ್ಲಿ ಕಾಪಾಡಿಕೊಂಡಿರುವ ಶುಚಿತ್ವವನ್ನು ಗಮನಿಸಿದರು. ನವಜಾತ ಶಿಶುವಿನ ಬಾಣಂತಿ ಮಹಿಳೆ, ಸಂಬಂಧಿಗಳ ಜೊತೆ ಸಮಾಲೋಚನೆ ನಡೆಸಿ ಉಚಿತವಾಗಿ ಸಹಜ ಹೆರಿಗೆ ಶಸ್ತ್ರಚಿಕಿತ್ಸೆ ಸೇವೆ ನೀಡುತ್ತಿದ್ದಾರೆಯೇ ಅಥವಾ ಹಣ ಪಡೆಯುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು. ಅದಕ್ಕೆ ಬಾಣಂತಿ ಮಹಿಳೆಯ ಸಂಬಂಧಿಕರೊಬ್ಬರು ಪ್ರತಿಕ್ರಿಯಿಸಿ, ಎಲ್ಲ ಸೇವೆಯೂ ಉಚಿತವಾಗಿ ಸಿಗುತ್ತಿದ್ದು, ವೈದ್ಯರು ಹಾಗೂ ಸಿಬ್ಬಂದಿ ಸೌಜನ್ಯದಿಂದ ವರ್ತಿಸುತ್ತಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾಸಪ್ಪ ಹೆರಿಗೆ ಆಸ್ಪತ್ರೆಯ ಆಪರೇಷನ್ ಥಿಯೇಟರ್, ಹೆರಿಗೆ ಕೊಠಡಿ, ಔಷಧ ಉಗ್ರಾಣ ಪರಿಶೀಲಿಸಿದರು ಹಾಗೂ ಆವರಣದಲ್ಲಿರುವ ಎಲ್ಲ ಕಟ್ಟಡಗಳು ಹಾಗೂ ಕಚೇರಿಗಳನ್ನು ಪರಿಶೀಲಿಸಿ ಹಾಳಾಗಿರುವ ಕಡೆ ತ್ವರಿತವಾಗಿ ದುರಸ್ಥಿ ಕಾರ್ಯ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಾಸಪ್ಪ ಆಸ್ಪತ್ರೆಯ ಆವರಣದಲ್ಲಿರುವ ಕಟ್ಟಡಗಳ ಗೋಡೆಗಳ ಮೇಲೆ ಬೆಳೆದಿರುವ ಗಿಡಗಳನ್ನು ತೆರವುಗೊಳಿಸಿ ಮುಂದಿನ ದಿನಗಳಲ್ಲಿ ಗಿಡಗಳು ಬೆಳೆಯದಂತೆ ನೋಡಿಕೊಳ್ಳಬೇಕು. ಆಸ್ಪತ್ರೆ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಕರ್ತವ್ಯವಾಗಿದ್ದು, ಆವರಣದಲ್ಲಿರುವ 2 ಉದ್ಯಾ‌ನವನಗಳನ್ನು ಸರಿಯಾಗಿ ನಿರ್ವಹಣೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರದ್ದಾಗಿರುವ ಹುದ್ದೆಗಳಿಗೆ ಬಡ್ತಿ ಅಕ್ರಮದಲ್ಲಿ ಸಚಿವರ ಪಾಲೆಷ್ಟು?: ಮುಖ್ಯಮಂತ್ರಿ ಚಂದ್ರು

ದಾಸಪ್ಪ ಹೆರಿಗೆ ಆಸ್ಪತ್ರೆ ಹಾಗೂ ಜನೌಷಧಿ ಕೆಂದ್ರ ಪರಿಶೀಲಿಸಿ, ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳು ಹಾಗೂ ಅತ್ಯವಶ್ಯಕ ಔಷಧಗಳ ಶೇಖರಣೆ ಮಾಡಿಟ್ಟುಕೊಂಡಿರಬೇಕು. ಆಸ್ಪತ್ರೆಯ ತಜ್ಞ ವೈದ್ಯರು, ಪ್ರಸೂತಿ ತಜ್ಞರು, ಮಕ್ಕಳ ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು.

ದಾಸಪ್ಪ ಹೆರಿಗೆ ಆಸ್ಪತ್ರೆಯ ಪ್ರಮುಖ ದ್ವಾರದ ಬಳಿ ಒಳ ಚರಂಡಿ ಬ್ಲಾಕ್ ಆಗಿರುವ ಕಾರಣ ರಸ್ತೆಯ ಮೇಲೆ ನೀರು ಹರಿಯುತ್ತಿದ್ದು, ಈ ಸಂಬಂಧ ದಕ್ಷಿಣ ವಲಯದ, ಮುಖ್ಯ ಅಭಿಯಂತರರು ಜಲಮಂಡಳಿ ಅಧಿಕಾರಿಗಳು ಹಾಗೂ ಕೆನರಾ ಬ್ಯಾಂಕ್ ನ ತಾಂತ್ರಿಕ ಸಿಬ್ಬಂದಿಗಳು ಜೊತೆ ಚರ್ಚಿಸಿ ಅದಕ್ಕೆ ಶಾಶ್ವತ ಪರಿಹಾರ ನೀಡಲು ಸೂಚನೆ ನೀಡಿದರು.

ಈ ವೇಳೆ ದಕ್ಷಿಣ ವಲಯ ಮುಖ್ಯ ಅಭಿಯಂತರರಾದ ರಾಜೇಶ್, ದಕ್ಷಿಣ ವಲಯ ಆರೋಗ್ಯಾಧಿಕಾರಿ(ಕ್ಲಿನಿಕಲ್) ಡಾ. ಸರಸ್ವತಿ, ವೈದ್ಯರು, ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...