ಡೇಟಿಂಗ್ ಹಗರಣ | ₹1.05 ಕೋಟಿ ಕಳೆದುಕೊಂಡ ವ್ಯಕ್ತಿ

Date:

ಇತ್ತೀಚಿನ ದಿನಗಳಲ್ಲಿ ಡೇಟಿಂಗ್ ಕೂಡ ಹಗರಣವಾಗಿ ಮಾರ್ಪಟ್ಟಿದೆ. ಡೇಟಿಂಗ್ ಹೆಸರಿನಲ್ಲಿ ವಂಚಿಸಲ್ಪಡುವ ಮತ್ತು ವಂಚನೆಗೆ ಒಳಗಾಗುವ ಪ್ರಕರಣಗಳು ವರದಿಯಾಗುತ್ತಿವೆ. ಇದೀಗ ಅಂತಹದ್ದೇ ಪ್ರಕರಣವೊಂದರಲ್ಲಿ, ಬೆಂಗಳೂರಿನ ವಿಚ್ಛೇದಿತ ವ್ಯಕ್ತಿಯೊಬ್ಬರು ₹1.05 ಕೋಟಿ ಕಳೆದುಕೊಂಡಿದ್ದಾರೆ.

ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರು ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಓರ್ವ ಮಹಿಳೆಯನ್ನು ಸಂಪರ್ಕಿಸಿದ್ದಾರೆ. ಆಕೆ, ತಾನೂ ವಿಚ್ಛೇದಿತೆ ಎಂದು ಹೇಳಿಕೊಂಡು ಪರಿಚಯ ಮಾಡಿಕೊಂಡಿದ್ದಾಳೆ. ವ್ಯಾಪಾರದಲ್ಲಿ ಸಹಾಯ ಮಾಡುವುದಾಗಿ ನಂಬಿಸಿ ಬರೋಬ್ಬರಿ ಕೋಟಿ ರೂಪಾಯಿ ವಂಚಿಸಿದ್ದಾಳೆ ಎಂದು ತಿಳಿದುಬಂದಿದೆ.

ಸಾಮಾಜಿಕ ಮಾಧ್ಯಮದಲ್ಲಿ ಪ್ರಕೃತಿ ಶ್ರೀಧರನ್ ಎಂಬ ಹೆಸರಿನಿಂದ ಗುರುತಿಸಿಕೊಂಡಿರುವ ಮಹಿಳೆ ಮೂಲತಃ ಕೇರಳದವರು ಎಂದು ಹೇಳಲಾಗಿದೆ. ಆಕೆ, ವಂಚನೆಗೊಳಗಾದ ವ್ಯಕ್ತಿಯೊಂದಿಗೆ ಸುಮಾರು ಮೂರ್ನಾಲ್ಕು ತಿಂಗಳು ಚಾಟಿಂಗ್ ನಡೆಸಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆತನ ವಿಶ್ವಾಸ ಗಳಿಸಿದ ಬಳಿಕ, “ಆನ್‌ಲೈನ್ ವಿದೇಶಿ ವಿನಿಮಯ ವ್ಯಾಪಾರದಲ್ಲಿ ಹೂಡಿಕೆ ಮಾಡುತ್ತಿದ್ದೇನೆ. ಇದರಿಂದ ಉತ್ತಮ ಆದಾಯ ಬರುತ್ತಿದೆ. ನಾನು ₹12 ಕೋಟಿ ಗಳಿಸಿದ್ದೇನೆ. ನೀವು ಹೆಚ್ಚು ಆದಾಯ ಗಳಿಸಬಹುದು” ಎಂದು ಆಮಿಷವೊಡ್ಡಿದ್ದಾಳೆ.

ಆಕೆಯ ಮಾತನ್ನು ನಂಬಿದ ಸಂತ್ರಸ್ತ ಕಾಲಕ್ರಮೇಣ ಒಟ್ಟು ₹1.05 ಕೋಟಿ ವ್ಯಯಿಸಿದ್ದಾನೆ. ಬಳಿಕ, ತನ್ನ ಹೂಡಿಕೆ ಹಣವನ್ನು ವಾಪಸ್ ಪಡೆಯಲು ಆಕೆಯನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾನೆ. ಆದರೆ, ಆತನ ವೈಯಕ್ತಿಕ ಮಾಹಿತಿ ಹಾಗೂ ಬ್ಯಾಂಕ್ ಮಾಹಿತಿಗಳನ್ನೆಲ್ಲ ಪಡೆದುಕೊಂಡಿದ್ದ ಮಹಿಳೆ ಆತನಿಗೆ ಬೆದರಿಕೆ ಹಾಕಿದ್ದಾಳೆ. ಅಲ್ಲದೆ, ಆತನ ಬ್ಯಾಂಕ್ ಖಾತೆಯಿಂದ ಲಾಗ್ ಔಟ್ ಮಾಡಿದ್ದಾಳೆ ಎಂದು ಬೆಂಗಳೂರು ಆಗ್ನೇಯ ಪೊಲೀಸ್ ಉಪ ಆಯುಕ್ತ ಸಿ.ಕೆ ಬಾಬಾ ಹೇಳಿದ್ದಾರೆ.

ಸಂತ್ರಸ್ತ ವ್ಯಕ್ತಿ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದು, ಸೈಬರ್ ಕ್ರೈಮ್ ಪೊಲೀಸರು ಆತನ ಬ್ಯಾಂಕ್ ಖಾತೆಯನ್ನು ನಿರ್ಬಂಧಿಸಿದ್ದಾರೆ. ಆತ ಕಳೆದುಕೊಂಡ ಮೊತ್ತವನ್ನು ಮರುಪಡೆಯಲು ಪ್ರಯತ್ನಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ತನ್ನ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾನೆಂಬ ಕಾರಣಕ್ಕೆ ವ್ಯಕ್ತಿಯೊಬ್ಬನ ಕತ್ತು ಕೊಯ್ದು ಕೊಲೆ

ಡೇಟಿಂಗ್/ಮ್ಯಾಟ್ರಿಮೋನಿಯಲ್ ಪ್ಲಾಟ್ಫಾರ್ಮ್‌ಗಳನ್ನು ಬಳಸುವವರಿಗೆ ಪೊಲೀಸ್ ಸಲಹೆ

  • ವೈಯಕ್ತಿಕ ಮತ್ತು ಹಣಕಾಸಿನ ಮಾಹಿತಿ, ವಿಳಾಸ ಅಥವಾ ದಾಖಲೆಗಳನ್ನು ಹಂಚಿಕೊಳ್ಳಬೇಡಿ
  • ಸಾರ್ವಜನಿಕ ಸ್ಥಳಗಳಲ್ಲಿ ಕೆಲವು ಬಾರಿ ಭೇಟಿ ಮಾಡಿ ಮತ್ತು ಆ ಖಾತೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಿ
  • ವರ್ಚುವಲ್ ಪ್ಲಾಟ್ಫಾರ್ಮ್‌ಗಳ ಮೂಲಕ ನಿಕಟ ಚಾಟ್‌ಗಳು/ಕರೆಗಳನ್ನು ಮಾಡಬೇಡಿ
  • ಆತುರದ ಹೂಡಿಕೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
  • ವಂಚನೆಯ ಅನುಮಾನವಿದ್ದರೆ 1930 ಅಥವಾ 112 ಅನ್ನು ಸಂಪರ್ಕಿಸಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...