ಬೆಂಗಳೂರು | ಕುಡಿದ ಮತ್ತಿನಲ್ಲಿ ಕಾರು ಚಾಲನೆ; ಡೆಲಿವರಿ ಬಾಯ್ ಸಾವು

Date:

  • ರಾಜರಾಜೇಶ್ವರಿ ನಗರದ ಮೆಟ್ರೋ ನಿಲ್ದಾಣದ ಬಳಿ ಘಟನೆ ನಡೆದಿದೆ
  • ಜೊಮ್ಯಾಟೋ ಡೆಲಿವರಿ ಬಾಯ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪವನ್

ಕುಡಿದ ಮತ್ತಿನಲ್ಲಿ ಕಾರು ಚಾಲನೆ ಮಾಡಿದ ವ್ಯಕ್ತಿಯೋರ್ವ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದು, ಬೈಕ್‌ನಲ್ಲಿ ಹೋಗುತ್ತಿದ್ದ ಜೊಮ್ಯಾಟೋ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬೆಂಗಳೂರಿನ ರಾಜರಾಜೇಶ್ವರಿ ನಗರದ ಮೆಟ್ರೋ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಜೊಮ್ಯಾಟೋ ಡೆಲಿವರಿ ಬಾಯ್ ಪವನ್​ ಮೃತ ದುರ್ದೈವಿ. ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಪವನ್ ಮೂಲತಃ ಮೈಸೂರು ಜಿಲ್ಲೆಯ ಹೆಚ್‌.ಡಿ.ಕೋಟೆ ನಿವಾಸಿ. ಅವರು ಬೆಂಗಳೂರಿನಲ್ಲಿ ಜೊಮ್ಯಾಟೋ ಡೆಲಿವರಿ ಬಾಯ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಕಾರು ಚಾಲಕ ವಿನಾಯಕ್ ವಿಜಯನಗರದ ನಿವಾಸಿ. ಈತ ರಾಜಾಜಿನಗರದ ಮಹೀಂದ್ರ ಶೋರೂಂನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದಾನೆ. ವಾರದ ಕೊನೆ ಹಿನ್ನೆಲೆ, ಜೂ.18ರಂದು ರಾತ್ರಿ ಗೆಳೆಯರ ಜೊತೆ ಪಾರ್ಟಿ ಮಾಡಿದ್ದಾನೆ.

ಸ್ನೇಹಿತ ಸಾಗರ ಹಾಗೂ ಮೂವರು ಯುವತಿಯರೊಂದಿಗೆ ಆರೋಪಿ ವಿನಾಯಕ ರಾತ್ರಿ ಪೂರ್ತಿ ಪಾರ್ಟಿ ಮಾಡಿ ಕಂಠಪೂರ್ತಿ ಕುಡಿದಿದ್ದ ಎನ್ನಲಾಗಿದೆ. ಬಳಿಕ ಗೆಳೆಯ ಸಾಗರ್ ಎಂಬುವವನಿಗೆ ಡ್ರಾಪ್ ನೀಡಲು ಕಾರಿನಲ್ಲಿ ತೆರಳುತ್ತಿದ್ದ. ವಿನಾಯಕ್ ಕುಡಿದ ಮತ್ತಿನಲ್ಲೇ ಕಾರು ಚಲಾಯಿಸುತ್ತಿದ್ದ.

ನಾಯಂಡಹಳ್ಳಿಯಿಂದ ಆರ್​.ಆರ್​ನಗರದ ಕಡೆಗೆ ಕಾರು ಚಲಾಯಿಸಿದ್ದು, ತಡರಾತ್ರಿ 1:45ರ ಸುಮಾರಿಗೆ ಆರ್​.ಆರ್​​. ನಗರದ ಮೆಟ್ರೋ ನಿಲ್ದಾಣದ ಬಳಿ ಮುಂದೆ ಹೋಗುತ್ತಿದ್ದ ಪವನ್ ​ಬೈಕ್​​ಗೆ ಹಿಂದಿನಿಂದ ಕಾರಿನಲ್ಲಿ ಗುದ್ದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಪವನ್ ಅನ್ನು ಕಾರು 100 ಮೀ ಎಳೆದುಕೊಂಡು ಹೋಗಿದೆ. ನಂತರ ಪವನ್ ಅವರನ್ನು ಬಿಟ್ಟು ಕಾರು ಸಮೇತ ಯುವಕ, ಯುವತಿಯರು ಪರಾರಿಯಾಗಲು ಯತ್ನಿಸಿದ್ದಾರೆ. ಈ ದೃಶ್ಯವನ್ನು ಕಂಡ ಸ್ಥಳೀಯರು ಸುಮಾರು 1 ಕಿ.ಮೀ.ವರೆಗೂ ಕಾರನ್ನು ಬೆನ್ನಟ್ಟಿ ಚಾಲಕನನ್ನು ಹಿಡಿದು ಥಳಿಸಿದ್ದಾರೆ. ಇದೇ ವೇಳೆ, ಕಾರಿನ ಗ್ಲಾಸ್ ಒಡೆದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಕೆಲವೇ ಗಂಟೆಗಳಲ್ಲಿ ಸ್ಥಗಿತ

ಕಾರಿನಲ್ಲಿದ್ದ ಯುವಕ, ಯುವತಿಯರು ಪರಾರಿಯಾಗಿದ್ದಾರೆ. ನಂತರ ಸ್ಥಳೀಯರು ಆರೋಪಿ ವಿನಾಯಕ್‌ನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಪೊಲೀಸ್‌ ತನಿಖೆ ವೇಳೆ ಚಾಲಕ ವಿನಾಯಕ್ ಮದ್ಯಪಾನ ಮಾಡಿ ಕಾರು ಚಾಲನೆ ಮಾಡಿರುವುದು ಧೃಢಪಟ್ಟಿದೆ. ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...