ಮುಸ್ಲಿಂ ನಿಯೋಗಗಳಿಂದ ವಕ್ಫ್ ಕಾಯ್ದೆ ರದ್ದತಿಗೆ ಒತ್ತಾಯಿಸಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ

Date:

ವಿವಾದಾತ್ಮಕ ವಕ್ಫ್ ತಿದ್ದುಪಡಿ ಕಾಯ್ದೆ-2025ರ ರದ್ಧತಿಗೆ ಕೋರಿ ರಾಜ್ಯಾದ್ಯಂತ ಮುಸ್ಲಿಂ ನಿಯೋಗಗಳು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿವೆ.

ಇಂದು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ರಾಜ್ಯ ಘಟಕವು, ಈ ಕಾಯ್ದೆಯು ಸಂವಿಧಾನದ ಮೇಲಿನ ನೇರ ಆಕ್ರಮಣ ಎಂದು ಖಂಡಿಸಿದೆ. ಇದು ಪ್ರಜಾಪ್ರಭುತ್ವ ವಿರೋಧಿ, ಅಲ್ಪಸಂಖ್ಯಾತ ವಿರೋಧಿಯಾಗಿದ್ದು ಇದನ್ನು ತಕ್ಷಣವೇ ಹಿಂಪಡೆಯಲು ರಾಷ್ಟ್ರಪತಿಗಳಿಗೆ ಉದ್ದೇಶಿಸಿ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದೆ.

ಈ ಪತ್ರಿಕಾಗೋಷ್ಠಿಯನ್ನು ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಅಭಿಯಾನದ ಯಶಸ್ವಿ ಮುಕ್ತಾಯದ ಭಾಗವಾಗಿ ನಡೆಸಲಾಗಿದೆ ಎಂದು ಮಂಡಳಿಯು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಿದ್ದುಪಡಿಯ ಕಾಯ್ದೆಯು ಧಾರ್ಮಿಕ ಪರಿಣಾಮಗಳನ್ನು ಮಂಡಳಿ ಸದಸ್ಯರು ವಿವರಿಸಿದರು. ಈ ಕಾಯ್ದೆಯು ವಕ್ಫ್ ಆಸ್ತಿಗಳ ಮೇಲೆ ಸರಕಾರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡುತ್ತದೆ. ಮುಸ್ಲಿಂ ಧಾರ್ಮಿಕ, ಶೈಕ್ಷಣಿಕ ಮತ್ತು ದತ್ತಿ ಸಂಸ್ಥೆಗಳ ಸ್ವಾಯತ್ತತೆಗೆ ತೀವ್ರ ಬೆದರಿಕೆಯನ್ನು ಒಡ್ಡುತ್ತದೆ ಎಂದು ಸಮಿತಿಯು ಎಚ್ಚರಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮುಂಗಾರು ಮಳೆಗೆ ಸರ್ಕಾರ ಸಿದ್ಧವಿದೆಯೇ?

ಈ ತಿದ್ದುಪಡಿಯು 1995ರ ವಕ್ಫ್ ಕಾಯ್ದೆಯ ಆಶಯವನ್ನು ಮಾತ್ರವಲ್ಲದೆ, ಸಂವಿಧಾನದ 25, 26 ಮತ್ತು 29ನೇ ವಿಧಿಗಳ ಉಲ್ಲಂಘನೆಯಾಗಿದೆ. ಈ ವಿಧಿಗಳು ಧಾರ್ಮಿಕ ಸ್ವಾತಂತ್ರ್ಯ ಮತ್ತು ಸರ್ಕಾರದ ಹಸ್ತಕ್ಷೇಪವಿಲ್ಲದೆ ಅಲ್ಪಸಂಖ್ಯಾತರಿಗೆ ತಮ್ಮ ಸಂಸ್ಥೆಗಳನ್ನು ನಿರ್ವಹಿಸುವ ಹಕ್ಕನ್ನು ಖಾತರಿಪಡಿಸುತ್ತದೆ ಎಂದು ಸಮಿತಿಯ ಸದಸ್ಯರು ಹೇಳಿದರು.

ವಕ್ಫ್ ಆಸ್ತಿಗಳು ಖಾಸಗಿ ಆಸ್ತಿಗಳಲ್ಲ. ಅವು ಧಾರ್ಮಿಕ ಟ್ರಸ್ಟ್‌ಗಳಾಗಿವೆ. ಅವು ಸಮುದಾಯದ ಪ್ರಯೋಜನಕ್ಕಾಗಿ ಮತ್ತು ಅಲ್ಲಾಹನ ಸಲುವಾಗಿ ಶಾಶ್ವತವಾಗಿ ಇರುವಂತಹವುಗಳಾಗಿವೆ. ಅವುಗಳನ್ನು ನೇರವಾಗಿ ಸರ್ಕಾರದ ನಿಯಂತ್ರಣಕ್ಕೆ ತರುವುದು ಸಂವಿಧಾನಿಕ ಕಾನೂನು ಮತ್ತು ಇಸ್ಲಾಮಿಕ್ ನ್ಯಾಯಶಾಸ್ತ್ರ ಎರಡನ್ನೂ ಉಲ್ಲಂಘಿಸಿದಂತಾಗುತ್ತದೆ ಅವರು ತಿಳಿಸಿದರು.

ಕಾಯ್ದೆಯನ್ನು ರದ್ದುಗೊಳಿಸದಿದ್ದರೆ ರಾಜ್ಯಾದ್ಯಂತ ಶಾಂತಿಯುತ ಚಳುವಳಿಯನ್ನು ಸಮಿತಿಯು ಘೋಷಿಸಿತು.

ಸಮಿತಿಯ ಮೊಹಮ್ಮದ್ ಯೂಸುಫ್ ಕನ್ನಿ ಅವರು ಮಾತನಾಡಿ, ಜೂನ್ 23ರಂದು ಬೆಂಗಳೂರಿನಲ್ಲಿ ನಾಗರಿಕ ಸಮಾಜದ ಸಭೆಯನ್ನು ಆಯೋಜಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಭಿಯಾನದ ಕರ್ನಾಟಕ ಕ್ರಿಯಾ ಸಮಿತಿಯ ಸಂಚಾಲಕ ಮೊಹಮ್ಮದ್ ಯೂಸುಫ್ ಕನ್ನಿ, ಸಹ-ಸಂಚಾಲಕ ಸೈಯದ್ ಶಫೀವುಲ್ಲಾ, ಜಮಾಅತೆ ಇಸ್ಲಾಮಿ ಹಿಂದ್ (ಕರ್ನಾಟಕ) ಅಧ್ಯಕ್ಷ ಡಾ. ಮೊಹಮ್ಮದ್ ಸಾದ್ ಬೆಳಗಾಮಿ, ಎಐಎಂಪಿಎಲ್‌ಬಿ ಸದಸ್ಯ ಆಸಿಮ್ ಅಫ್ರೋಜ್ ಸೇಠ್ ಮತ್ತು ಮಾಧ್ಯಮ ಉಸ್ತುವಾರಿ ಮೊಹಮ್ಮದ್ ಫರ್ಕಾನ್ ಅವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...