ಅನ್ ಬಾಕ್ಸಿಂಗ್ ಬಿಎಲ್‌ಆರ್‌ ಹಬ್ಬಕ್ಕೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಷನ್’ ವತಿಯಿಂದ ಡಿಸೆಂಬರ್‌ 1ರಿಂದ 11ರವರೆಗೆ ‘ಬಿ.ಎಲ್‌.ಆರ್‌ ಹ‌ಬ್ಬ’ವನ್ನು ಆಯೋಜಿಸಲಾಗಿದೆ. ಅದರ ಅಂಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನ.30ರಂದು ಚಿಕ್ಕಪೇಟೆಯ ಅವೆನ್ಯೂ ರಸ್ತೆಯ ರಾಜಮಾರ್ಕೆಟ್ ವೃತ್ತ ಬಳಿ ಕೆಂಪೇಗೌಡರ ಎತ್ತಿನ ಬಂಡಿ ಮೆರವಣಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, “ಅನ್ ಬಾಕ್ಸಿಂಗ್ ಬೆಂಗಳೂರು ಹಬ್ಬಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಗಿದೆ. ಪ್ರಶಾಂತ್ ಪ್ರಕಾಶ್ ಹಾಗೂ ಅವರ ಸ್ನೇಹಿತರು ತಮ್ಮ ದುಡ್ಡಿನಲ್ಲಿ ನಮ್ಮ ಮನೆಯ ಹಬ್ಬವನ್ನು ಆಚರಿಸುತ್ತಿದ್ದಾರೆ. ಬೆಂಗಳೂರಿನ 1.40 ಕೋಟಿ ಜನರು ಈ ಹಬ್ಬದಲ್ಲಿ ಪಾಲ್ಗೊಂಡು ಸಂತೋಷ ಪಡಬೇಕು ಎಂದು ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆ. ನಾಡಪ್ರಭು ಕೆಂಪೇಗೌಡರು ಇದೇ ಜಾಗದಿಂದ ಎಲ್ಲ ವೃತ್ತಿ, ಎಲ್ಲ ಜನಾಂಗ, ಎಲ್ಲ ಧರ್ಮವನ್ನು ಒಟ್ಟಿಗೆ ಸೇರಿಸಿ ಬೆಂಗಳೂರು ನಗರ ಕಟ್ಟಿದರು” ಎಂದರು.

“ಬೆಂಗಳೂರು ವಿಶ್ವಕ್ಕೆ ದೊಡ್ಡ ಮಾದರಿಯಾಗಿದೆ. ಈ ಬೆಂಗಳೂರು ಹಬ್ಬವನ್ನು 11 ದಿನಗಳ ಕಾಲ ಆಚರಿಸಲು ರೂಪಿಸಲಾಗಿದೆ. ಈ ವರ್ಷ ಅವರು ಅವರದೇ ಆದ ರೀತಿಯಲ್ಲಿ ಈ ಹಬ್ಬ ಆಚರಿಸುತ್ತಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ, ಬಿಬಿಎಂಪಿ, ಮೆಟ್ರೋ ಸೇರಿದಂತೆ ಎಲ್ಲಾ ಸಂಸ್ಥೆಗಳು ಸಹಕಾರ ನೀಡುತ್ತಿವೆ. ಎಲ್ಲ ಸಂಘಟನೆ ವ್ಯಾಪಾರಿಗಳು ಇದರಲ್ಲಿ ಪಾಲ್ಗೊಂಡು ಸಂಭ್ರಮಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಎಲ್‌ಆರ್‌2

“ಈ ಹಬ್ಬವನ್ನು ಬೆಳೆಸಿಕೊಂಡು, ಮುಂದುವರಿಸಿಕೊಂಡು ಹೋಗಿ ಎಂದು ಬೆಂಗಳೂರಿನ ಜನರಲ್ಲಿ ಮನವಿ ಮಾಡುತ್ತೇನೆ. ಡಿಸೆಂಬರ್‌ನಲ್ಲಿ ಮಳೆ ಇಲ್ಲದಾಗ ಈ ಹಬ್ಬ ಆರಂಭವಾಗುತ್ತಿದ್ದು, ಶುಭ ಗಳಿಗೆಯಲ್ಲಿ ಶುಭ ಮುಹೂರ್ತದಲ್ಲಿ ನಿಮ್ಮ ಸಂತೋಷಕ್ಕಾಗಿ ಈ ಹಬ್ಬ ಆಚರಿಸಲಾಗುತ್ತಿದೆ. ಕಲೆ, ಸಾಹಿತ್ಯ, ಆಹಾರ, ನೃತ್ಯ, ನಾಟಕ ಸೇರಿದಂತೆ ನಾನಾ ಕ್ಷೇತ್ರಗಳ ಮೂಲಕ ಬೆಂಗಳೂರಿನ 300ಕ್ಕೂ ಹೆಚ್ಚು ಕಡೆಗಳಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತಿದೆ” ಎಂದು ವಿವರಿಸಿದರು.

“ಮುಂದಿನ ದಿನಗಳಲ್ಲಿ ಪ್ರತಿ ವಾರ್ಡ್, ವಿಧಾನಸಭಾ ಕ್ಷೇತ್ರದಲ್ಲಿ ಈ ಹಬ್ಬವನ್ನು ಆಯೋಜಿಸಿ ಆಯಾ ಭಾಗದ ಜನ ಅಲ್ಲೇ ಈ ಹಬ್ಬವನ್ನು ಆನಂದಿಸುವಂತೆ ಮಾಡಲಾಗುವುದು. ಎಲ್ಲರೂ ತಮ್ಮ ಮನೆಗಳಲ್ಲೂ ಈ ಹಬ್ಬದ ರೀತಿ ಅಲಂಕಾರ ಮಾಡಿ ಸುಂದರ ವಾತಾವರಣ ಮೂಡಿಸಬೇಕು. ಆ ಮೂಲಕ ನಮ್ಮ ಇತಿಹಾಸ ಪರಂಪರೆ ಮುಂದುವರಿಸಿಕೊಂಡು ಹೋಗಬೇಕು” ಎಂದರು.

“ನಾವು ನಮ್ಮ ಮೂಲವನ್ನು ಮರೆತರೆ ಯಶಸ್ಸು ಸಾಧಿಸುವುದಿಲ್ಲ. ನಾವು ನಮ್ಮ ಬೆಂಗಳೂರಿನ ಮೂಲವನ್ನು ಉಳಿಸಿಕೊಂಡು ಹೋಗಬೇಕು. ಅನ್ ಬಾಕ್ಸಿಂಗ್ ಬೆಂಗಳೂರು ಸಂಸ್ಥೆ ನಿಮ್ಮನ್ನು ಸೇರಿಸಿಕೊಂಡು ಈ ಹಬ್ಬ ಆಚರಿಸುತ್ತಿದ್ದಾರೆ. ಈ ಹಬ್ಬದಲ್ಲಿ ನೀವು ಭಾಗವಹಿಸಿ ಎಂದು ಮನವಿ ಮಾಡುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಬಾಕ್ಸಿಂಗ್ ಬಿಎಲ್ಆರ್ ಹಬ್ಬದ ವಿವರ

ಅನ್ ಬಾಕ್ಸಿಂಗ್ ಬಿಎಲ್ಆರ್ ಹಬ್ಬ ಆಚರಣೆಯ ಕುರಿತು https://habba.unboxingblr.com/ ವೆಬ್‌ಸೈಟ್ ನಲ್ಲಿ ಸಂಪೂರ್ಣ ವಿವರಗಳನ್ನು ನಾಗರಿಕರು ಪಡೆಯಬಹುದು.

ಈ ಬಾರಿಯ ಬೆಂಗಳೂರು ಹಬ್ಬದಲ್ಲಿ ನೃತ್ಯ, ರಂಗಭೂಮಿ, ಸಾಹಿತ್ಯ, ಪರಂಪರೆ, ವಿನ್ಯಾಸ, ಸೇರಿದಂತೆ 12 ವರ್ಗಗಳಾಗಿ ವಿಂಗಡಿಸಿ, 45 ಮಾದರಿಗಳಲ್ಲಿ 500ಕ್ಕೂ ಹೆಚ್ಚು ವೈವಿಧ್ಯಮಯ ಕಾರ್ಯಕ್ರಮಗಳು ನಗರದ ನಾನಾ ಉದ್ಯಾನಗಳು ಮತ್ತು ಬೀದಿಗಳು ಸೇರಿದಂತೆ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ಹಬ್ಬವನ್ನು ಆಚರಿಸಲಾಗುತ್ತಿದೆ.

ಬಿಎಲ್‌ಆರ್3

ಬೆಂಗಳೂರು ಲಿಟ್‌ ಫೆಸ್ಟ್‌, ಸಂಜೆ ಅಟ್ಟಾ ಗಲಾಟಾ, ಕಲಾ ಕೂಟ– ದೃಶ್ಯ ಕಲೆಗಳು, 25 ವರ್ಷದೊಳಗಿನವರ ಸಿಟಿ ಫಿಲ್ಮ್‌ ಫೆಸ್ಟ್‌, ಏರ್‌ಪೋರ್ಟ್‌ ಆರ್ಟ್‌ ವಾಕ್‌ ಥ್ರೂ, ತಿಂಡಿ ಪುರಂ– ಆಹಾರ ಮೇಳ, ಕರಕುಶಲ ಮೇಳ, ರಂಗ ಕಟ್ಟೆ–ಸಂಗೀತ ರಂಗಭೂಮಿ, ನೃತ್ಯ, ವಾಕ್ಸ್‌ ಪಾಪುಲಿ–ಸಿಟಿ ಟ್ರೇಲ್ಸ್‌, ಸಿಟಿ ವಾಕ್ಸ್‌, ಹೆರಿಟೇಜ್ ವಾಕ್ಸ್‌, ಚುರು ಮುರಿ–ಸಂವಾದಗಳು ಸೇರಿದಂತೆ ನಾನಾ ಕಾರ್ಯಕ್ರಮಗಳು ನಡೆಯಲಿವೆ.

ನಗರದಲ್ಲಿ 6 ರಸ್ತೆಗಳಲ್ಲಿ ಡಿ. 9 ಹಾಗೂ 10ರಂದು ‘ಓಪನ್ ಸ್ಟ್ರೀಟ್ ಮೇಳ’ ಆಯೋಜಿಸಲಾಗಿದೆ. ಮಳಿಗೆಗಳು, ಸ್ಟ್ರೀಟ್ ಆರ್ಟಿಸ್ಟ್ಸ್ ಅಲಂಕಾರ, ಬಂಟಿಂಗ್ ಮತ್ತು ಲೈಟಿಂಗ್ ಸೇರಿದಂತೆ ನಾಗರಿಕರನ್ನು ಸೆಳೆಯಲು ಆಕರ್ಷಕ ಚಟುವಟಿಕೆಗಳಿರುತ್ತವೆ.

ಈ ವೇಳೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ವಲಯ ಆಯುಕ್ತರಾದ ಡಾ. ಆರ್.ಎಲ್ ದೀಪಕ್, ಆರ್. ಸ್ನೇಹಲ್, ವಿನೋತ್ ಪ್ರಿಯಾ, ಅನ್ ಬಾಕ್ಸಿಂಗ್ ನಿರ್ದೇಶಕರಾದ ಪ್ರಶಂತ ಪ್ರಕಾಶ್, ಅನ್ ಬಾಕ್ಸಿಂಗ್ ಬಿಎಲ್ಆರ್ ಹಬ್ಬದ ನಿರ್ದೇಶಕರಾದ ರವಿಚಂದರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...